4ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಅತಿಥಿ ಶಿಕ್ಷಕ…!

ಗದಗ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಗ್ರಾಮದಲ್ಲಿ ಅತಿಥಿ ಶಿಕ್ಷಕರೊಬ್ಬರು 4 ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಂದಿದ್ದಾನೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮುತ್ತಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದಾನೆ. ಮೂಲಗಳ ಪ್ರಕಾರ ಶಿಕ್ಷಕ … Continued

ಮೊದಲ ಬಾರಿಗೆ ಸರ್ಕಾರದಿಂದಲೇ ಉಡುಪಿಯಲ್ಲಿ ಫೆಬ್ರವರಿ 11ರಿಂದ ಎರಡು ದಿನಗಳ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನ

ಬೆಂಗಳೂರು : ಯಕ್ಷಗಾನ ರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ. ಕರ್ನಾಟಕದ ಗಂಡುಕಲೆ ಯಕ್ಷಗಾನದ ಸಮಸ್ಯೆ, ಭವಿಷ್ಯ ಹಾಗೂ ಸಮಕಾಲೀನ ಸ್ಥಿತಿಗತಿಗಳನ್ನು ಅವಲೋಕಿಸುವ ಪ್ರಯತ್ನದ ಭಾಗವಾಗಿ ಮೊದಲ ಬಾರಿಗೆ ರಾಜ್ಯ ಸರ್ಕಾರ ಈ ಸಮ್ಮೇಳನ ಆಯೋಜಿಸುತ್ತಿದೆ. ಕನ್ನಡ ಮತ್ತು … Continued

ಡಿ ಕೆ ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದೆ. ಡಿ.ಕೆ. ಶಿವಕುಮಾರ ಅವರು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ. ಇಂದು, ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ಸಿಬಿಐ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023: ಜೆಡಿಎಸ್‌ನ 93 ಅಭ್ಯರ್ಥಿಗಳ​ ಮೊದಲ ಪಟ್ಟಿ ಬಿಡುಗಡೆ-ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ (JDS) ಇಂದು, ಸೋಮವಾರ 93 ವಿಧಾನಸಭಾ ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅನುಮೋದನೆಯ … Continued

ಬೆಳಗಾವಿ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ : ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದ ವಿಧಾನಸಭೆ ಸಭಾಂಗಣದ ಒಳಗಡೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾವರ್ಕರ್, ಇತರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಾಯಕರ ಭಾವಚಿತ್ರವನ್ನು ಅನಾವರಣಗೊಳಿಸಿದ ನಂತರ ಕರ್ನಾಟಕ ಕಾಂಗ್ರೆಸ್ ಸದಸ್ಯರು ಬೆಳಗಾವಿಯಲ್ಲಿ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಮಹಾತ್ಮಾ ಗಾಂಧಿ, ಬಸವಣ್ಣ, ಸುಭಾಷ್ ಚಂದ್ರ ಬೋಸ್‌, ಡಾ.ಬಿ.ಆರ್.ಅಂಬೇಡ್ಕರ್, … Continued

ಬೆಳಗಾವಿಯಲ್ಲಿ ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದ ಜಿಲ್ಲಾಡಳಿತ : ವೇದಿಕೆ, ಪೆಂಡಾಲ್‌ ತೆರವು

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ಆಚರಿಸಿ ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಗೆ ಈ ಸಲ ಬೆಳಗಾವಿ ಜಿಲ್ಲಾಡಳಿತ ಲಗಾಮು ಹಾಕಿದೆ. ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದೆ. ಬೆಳಗಾವಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮೇಳಾವ್ ಆಯೋಜನೆಗೆ ರಾತ್ರೋರಾತ್ರಿ ಹಾಕಿದ್ದ ಪೆಂಡಾಲ್ ಅನ್ನು ಸೋಮವಾರ ಬೆಳಗ್ಗೆ ತೆರವುಗೊಳಿಸಿರುವ ಪೊಲೀಸರು ವ್ಯಾಕ್ಸಿನ್ … Continued

ಸುವರ್ಣ ಸೌಧದಲ್ಲಿ ಸೋಮವಾರ ಸಾವರ್ಕರ್ ಫೋಟೋ ಅನಾವರಣಕ್ಕೆ ಬಿಜೆಪಿ ಸಿದ್ಧತೆ

ಬೆಳಗಾವಿ: ಸೋಮವಾರದಿಂದ (ನಾಳೆಯಿಂದ) ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ವೇಳೆ ಸಾವರ್ಕರ್‌ ಅವರ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿಯಿದ್ದು, ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಮತ್ತೆ ಸಾವರ್ಕರ್ ಸಮಯ ಜೋರಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, … Continued

ಎಂಇಎಸ್​ ಮಹಾಮೇಳಾವ್ : ಶಿವಸೇನೆ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ:ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್ ಪಿಸಿ ಕಲಂ 144(3)ಅನ್ವಯ ಜಿಲ್ಲಾಧಿಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್ ಪಿಸಿ ಅನ್ವಯವಾಗಲಿದೆ. ಡಿಸೆಂಬರ್ 19 … Continued

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ (State govt) ಆದೇಶ ಹೊರಡಿಸಿದೆ. ಗ್ರಾಪಂ. ಅಧ್ಯಕ್ಷರ ಗೌರವಧನ 3 ಸಾವಿರದಿಂದ 6 ಸಾವಿರ,, ಗ್ರಾ.ಪಂ. ಉಪಾಧ್ಯಕ್ಷರ ಗೌರವಧನ 2 ಸಾವಿರದಿಂದ 4 ಸಾವಿರ, ಗ್ರಾ.ಪಂ. ಸದಸ್ಯರ ಗೌರವಧನ 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು … Continued

ಅಪ್ರಾಪ್ತ ಬಾಲಕಿ ಜೊತೆ ಯುವಕನ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಥಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ ಆರೋಪ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯು ಬೈಕ್ ನಲ್ಲಿ … Continued