ಬಂಡೀಪುರ: ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ (ಎನ್ ಎಚ್ 766) ಲಾರಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ. ಮದ್ದೂರು … Continued

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ : ಅಂತಾರಾಜ್ಯ ನದಿ ನೀರು ಹಂಚಿಕೆ ಸೇರಿ ಕೆಲ ವಿಚಾರಗಳ ಬಗ್ಗೆ ಚರ್ಚೆ

ನವದೆಹಲಿ: ಅಂತಾರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು, ಮಂಗಳವಾರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ, ಕೃಷ್ಣಾ, ಮಹದಾಯಿ ಅಂತರ್ ರಾಜ್ಯ ನದಿ … Continued

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆ: ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರವು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸಮಿತಿಗೆ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷರಾದರೆ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಅಂಗಾರ, ಪ್ರಭು ಚವ್ಹಾಣ ಹಾಗೂ ಡಾ.ಕೆ.ಸುಧಾಕರ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಕುರಿತು … Continued

ಇಬ್ಬರು ಪುಟ್ಟ ಹೆಣ್ಣಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ: ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರಭಾಗದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟವರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ … Continued

ಚಿತ್ರದುರ್ಗ ಮುರುಘಾಮಠದ ಟ್ರಸ್ಟ್‌-ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿವೃತ್ತ ಐಎಎಸ್‌ (IAS) ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಇಂದು (ಡಿಸೆಂಬರ್ 13) ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಮುರುಘಾಮಠದ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿರುವುದರಿಂದ … Continued

ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗಳಿಗೆ ʼಪಬ್ಲಿಕ್ʼ ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

 ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಮಾದರಿಯಲ್ಲಿ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರ ಅಲ್ಲದೆ, ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಮತ್ತು … Continued

ತಂದೆಯನ್ನ ಕೊಂದು ದೇಹ ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದ ಮಗ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿರುವ ಕೊಲೆಯೊಂದು ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.ಬಾಗಲಕೋಟೆಯ ಮುಧೋಳ ನಗರದಲ್ಲಿ ಮಗ ತನ್ನ ತಂದೆಯನ್ನ ಕೊಂದು ತುಂಡುತುಂಡಾಗಿ ಕತ್ತರಿಸಿ, ಕೊಳವೆ ಬಾವಿಗೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಪರಶುರಾಮ ಕುಳಲಿ (54) ಎಂದು ಗುರುತಿಸಲಾಗಿದೆ. ಮಗ ವಿಠ್ಠಲ ಕುಳಲಿ(21) ಎಂಬಾತನೇ ತನ್ನ ತಂದೆಯನ್ನು ಕೊಲೆ ಮಾಡಿದ ಆರೋಪಿ. … Continued

ರಾಜ್ಯದಲ್ಲಿ ಮುಂದುವರಿದ ಶೀತದ ವಾತಾವರಣ; ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಮಾಂಡೌಸ್​ ಚಂಡಮಾರುತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶೀತ ವಾತಾವರಣ ನಿರ್ಮಾಣವಾಗಿದೆ. ಕಳೆದ ನಾಲ್ಕು ದಿನದಿಂದ ಜಿಟಿ ಜಿಟಿ ಮಳೆಯ ಜತೆಗೆ ಶೀತಗಾಳಿ (Cold Wind) ಬೀಸುತ್ತಿದೆ. ಮೈ ಕೊರೆಯುವ ಚಳಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಚಳಗಾಳಿಯ ಈ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳು … Continued

ಡಿಸೆಂಬರ್‌ 14 ರಂದು ರಾಜ್ಯಾದ್ಯಂತ ಏಕಕಾಲಕ್ಕೆ 114 ‘ನಮ್ಮ ಕ್ಲಿನಿಕ್‌’ ಉದ್ಘಾಟನೆ: ಸಚಿವ ಸುಧಾಕರ

ಬೆಂಗಳೂರು: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳನ್ನು ಡಿಸೆಂಬರ್‌ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು … Continued

ಮೈಸೂರಿನಲ್ಲಿ ದಂಪತಿಯ ಗೂಂಡಾಗಿರಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಮಚ್ಚು ತೋರಿಸಿ ಆವಾಜ್‌

ಮೈಸೂರು: ಬಿಲ್ಡಿಂಗ್ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್​ಆರ್​ಟಿಸಿ ಅಧಿಕಾರಿಗಳ ಮೇಲೆ ದಂಪತಿ ಗೂಂಡಾಗಿರಿ ಮಾಡಿರುವ ಘಟನೆ ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ನಡೆದಿದೆ. ಮೈಸೂರು ಸಾತಗಳ್ಳಿ ಡಿಪೋ ಬಳಿ ಅಧಿಕಾರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಶಫಿ ಮತ್ತವರ ಪತ್ನಿಯ ಮಚ್ಚು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕ ತನ್ವಿರ್ ಸೇಠ್ ಆಪ್ತ ಅಂತ ಹೇಳಲಾಗುತ್ತಿರುವ … Continued