ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ ಗರುಡಾಚಾರ್‌ ಅವರಿಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು … Continued

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ನಾಯ್ಕ ನಡೆಸಿದರು. ನಂತರ ತನಿಖಾ ತಂಡದ … Continued

೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳು ಮತ್ತದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರದ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ … Continued

ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಫೋಕ್ಸೋ ಪ್ರಕರಣದಡಿ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಮುರುಘಾ ಶರಣರನ್ನು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

ಬೆಂಗಳೂರು : ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ತಂದಿದ್ದ 10 ಹಳದಿ ಅನಕೊಂಡಗಳನ್ನು ಪತ್ತೆ ಮಾಡಲಾಗಿದ್ದು, ಕಳ್ಳಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಹೇಳಿದೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued