ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ

ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ ಮತ್ತು ಕೇಸ್ ವರ್ಕರ್ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪುರ … Continued

ಕರ್ನಾಟಕ ಗಡಿ-ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ.ಶಿವರಾಜ ಪಾಟೀಲ ನೇಮಕ

ಬೆಂಗಳೂರು :ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು … Continued

ಪ್ರವೇಗ್ ಡಿಫೈ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆ : ಪ್ರತಿ ಚಾರ್ಜ್‌ಗೆ 500 ಕಿಮೀ ಮೈಲೇಜ್

ಬೆಂಗಳೂರು ಮೂಲದ ಇವಿ ಸ್ಟಾರ್ಟ್ ಅಪ್ ಪ್ರವೈಗ್ ತನ್ನ ಮೊದಲ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಎಲ್ಲಾ-ಹೊಸ ಪ್ರವೇಗ್ ಡಿಫೈ (Pravaig Defy) ಎಲೆಕ್ಟ್ರಿಕ್ ಎಸ್‌ಯುವಿ (SUV)ಯನ್ನು ಭಾರತದಲ್ಲಿ 39.50 ಲಕ್ಷ ರೂಪಾಯಿಗಳ ಎಕ್ಸ್ ಶೋ ರೂಂ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ಬುಕಿಂಗ್‌ಗಳು ಈಗ ತೆರೆದಿವೆ ಮತ್ತು ಏಪ್ರಿಲ್ 2023 ರಲ್ಲಿ … Continued

ಹುಬ್ಬಳ್ಳಿ : ಬನ್ನಿ ಭಾವಗಳೇ… ಕನ್ನಡ ನುಡಿ ಹಬ್ಬಕೆ ಕರೆಯುತಿದೆ ಕೈ ಬೀಸಿ

(ನವೆಂಬರ್‌ ೨೬ರಂದು ಸಾಯಂಕಾಲ ೫:೩೦ಕ್ಕೆ ವಿದ್ಯಾನಗರ ಲಿಂಗರಾಜನಗರ ರಸ್ತೆಯ ಕಾಳಿದಾಸ ನಗರ ಬಸ್ ನಿಲುಗಡೆ ಕನ್ನಡ ನುಡಿ ಹಬ್ಬ ಜರುಗಲಿದ್ದು, ಆ ನಿಮಿತ್ಯವಾದ ಲೇಖನ) ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕದ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡು-ನುಡಿ ಕನ್ನಡದ ಸ್ಥಿತಿ ಗತಿ ವಿಷಯ ಚರ್ಚೆಗೆ ಬಂದಾಗ ಈ ನಾಡಿನ … Continued

ಕಾಂತಾರ ಸಿನೆಮಾ ತಂಡಕ್ಕೆ ರಿಲೀಫ್‌ : ‘ವರಾಹ ರೂಪಂ’ ಹಾಡಿನ ಬಳಕೆಗೆ ಕೋಝಿಕ್ಕೋಡ್ ಕೋರ್ಟ್ ಅನುಮತಿ…ಆದರೆ…

ಕನ್ನಡದ ಕಾಂತಾರ ಚಿತ್ರದಲ್ಲಿ ‘ವರಾಹ ರೂಪಂ’ ಹಾಡು ಬಳಸಿದ್ದಕ್ಕೆ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯವು  ನೀಡಿದ್ದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಕೇರಳ ಮೂಲದ ಥೈಕ್ಕುಡಂ ಬ್ರಿಡ್ಜ್‌ನ ‘ನವರಸಂ’ ಹಾಡಿನ ಕೃತಿಚೌರ್ಯದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು. ನ್ಯಾಯವ್ಯಾಪ್ತಿಯ ಕೊರತೆಯನ್ನು ಉಲ್ಲೇಖಿಸಿ ಹೊಂಬಾಳೆ ಫಿಲ್ಮ್ಸ್ ವಿರುದ್ಧ ಥೈಕ್ಕುಡಂ ಬ್ರಿಡ್ಜ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳದ … Continued

ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ. ಶಿವಕುಮಾರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಆಗಲಿ ಅವರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೂರಾರು ಜನರು … Continued

ಹಿಂದೂ ಸಂಪ್ರದಾಯದಂತೆ ಹಂಪಿಯ ಗೈಡ್‌ ಜೊತೆ ಸಪ್ತಪದಿ ತುಳಿದ ಬೆಲ್ಜಿಯಂ ಯುವತಿ

ಹೊಸಪೇಟೆ (ವಿಜಯನಗರ) : ಹಂಪಿಯ ಯುವಕನ ಜೊತೆ ಬೆಲ್ಜಿಯಂ ಯುವತಿ  ಹಿಂದೂ ಸಂಪ್ರಾದಾಯದಂತೆ ಹಂಪಿ ವಿರೂಪಾಕ್ಷನ ಸನ್ನಿಧಿಯಲ್ಲಿ ಸಪ್ತಪದಿ ತುಳಿದಿದ್ದಾಳೆ. ಹಂಪಿಯ ನಿವಾಸಿ ಅನಂತರಾಜು ಹಾಗೂ ಬೆಲ್ಜಿಯಂ ದೇಶದ ಕೆಮಿಲ್ ಇಬ್ಬರು ಪರಸ್ಪರ ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಪಡೆದು ಮದುವೆಯಾಗಿದ್ದಾರೆ. ಬುಧವಾರ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಈ ಜೋಡಿ, ಇಂದು, ಶುಕ್ರವಾರಬೆಳಿಗ್ಗೆ 8:30 ರಿಂದ 9:30ರ ಕುಂಭ … Continued

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಬೆಂಗಳೂರು: ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು, ಶುಕ್ರವಾರ ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಅವರು ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continued

ಧಾರವಾಡ: ಕ್ಯಾಂಪಸ್ ಸಂದರ್ಶನ-ಬಿಕಾಂ, ಬಿಬಿಎ, ಎಂಕಾಂ, ಎಂಬಿಎ ಉತ್ತೀರ್ಣರು ಪಾಲ್ಗೊಳ್ಳಬಹುದು

ಧಾರವಾಡ: ಡಾ. ಡಿ ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ನವೆಂಬರ್‌ 28ರಂದು ಬೆಳಿಗ್ಗೆ 9:30 ಕ್ಕೆ ಶಕ್ತಿ ಇನ್ಸ್ಟಿಟ್ಯೂಟ್ ಆಫ್ ಫೈನಾನ್ಸಿಯಲ್ ಮಾರ್ಕೆಟ್‌ ವತಿಯಿಂದ ಗ್ಲೋಬಲ್ ಬ್ಯಾಂಕ್‌ಗಳಿಗೆ ವಿವಿಧ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. 2020, 2021, 2022ರಲ್ಲಿ ಬಿ.ಕಾಂ, ಬಿ.ಬಿ.ಎ, … Continued

ಮಹಾರಾಷ್ಟ್ರ ಗಡಿ ವಿವಾದ : ಕರ್ನಾಟಕ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದ ಪ್ರತಿಭಟನಾಕಾರರು

ಪುಣೆ : ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ವಿರೋಧಿಸಿ ಮರಾಠಾ ಮಹಾಸಂಘದ ಸದಸ್ಯರು ಗುರುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗೆ ಕಪ್ಪು ಬಣ್ಣ ಬಳಿದಿದ್ದಾರೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ನಲ್ಲಿ “ಜೈ ಮಹಾರಾಷ್ಟ್ರ” ಮತ್ತು “ಜಾಹಿರ್ ನಿಷೇಧ್‌” (ಖಂಡನೆ) ಪದಗಳನ್ನು ಕಿತ್ತಳೆ ಮತ್ತು ಕಪ್ಪು ಬಣ್ಣದಲ್ಲಿ … Continued