ಜಿಂದಾಲ್‌ಗೆ 3,667 ಎಕರೆ ಜಮೀನು ಪರಭಾರೆ: ಸಂಪುಟ ಸಭೆ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸೌತ್‌ವೆಸ್ಟ್ ಸ್ಟೀಲ್ ಕಾರ್ಪೊರೇಷನ್ ಲಿಮಿಟೆಡ್‌ಗೆ 3,667 ಎಕರೆ ಸರ್ಕಾರಿ ಜಮೀನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿತು. ಇಡೀ ಪ್ರಕರಣ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ ಎಂದು ಸರ್ಕಾರಿ ವಕೀಲರು ನೀಡಿದ ಹೇಳಿಕೆಯನ್ನು … Continued

ವಿಚಾರಣೆಗೆ ಉನ್ನತ ಅಧಿಕಾರಿಗಳು‌ ಗೈರು; ಬಂಧಿಸಿ ಕರೆತರುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಖುದ್ದು ಹಾಜರಾತಿಗೆ ಆದೇಶಿಸಿದ್ದ ಹೊರತಾಗಿಯೂ ಅವರು ಪೀಠದ ಮುಂದೆ ಉಪಸ್ಥಿತರಿರದ್ದಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಕೆಂಡಾಮಂಡಲವಾಗಿದ್ದು, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಹೈಕೋರ್ಟ್ ಸೂಚನೆ ನೀಡಿದರೂ‌ ಉನ್ನತ ಮಟ್ಟದ ಅಧಿಕಾರಿಗಳು ವಿಚಾರಣೆಗೆ … Continued

ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರದಾನ

ನವದೆಹಲಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಯಿತು. 2019 ರ ಡಿ.29 ರಂದು ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಗಳು ಇಹಲೋಕ ತ್ಯಜಿಸಿದ್ದರು. ಅಧ್ಯಾತ್ಮ ಕ್ಷೇತ್ರದಲ್ಲಿ ಅವರ ಕೊಡುಗೆ, ಸೇವೆಯನ್ನು ಗೌರವಿಸಿ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ನಾರಾಣಾಚಾರ್ಯ ಹಾಗೂ ಶ್ರೀಮತಿ … Continued

ದುಬೈ ಶೇಖ್‌ ಲುಕ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ…!: ವೀಕ್ಷಿಸಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಬೈ ಶೇಖ್ ಉಡುಪಿನಲ್ಲಿ ಸಖತ್‌ ಮಿಂಚಿದ್ದಾರೆ, ಡ್ರೆಸ್‌ ಧರಿಸಿ ಫೋಟೋ ಪೋಸ್‌ ಸಹ ನೀಡಿದ್ದಾರೆ.[ ಕಾಂಗ್ರೆಸ್ ಮುಖಂಡ ಮುನಾವರ್‌ ಖಾನ್ ಎಂಬುವವರ ಮನೆಗೆ ತೆರಳಿದ್ದ ವೇಳೆಯಲ್ಲಿ ಸಿದ್ದರಾಮಯ್ಯ ಅವರಿಗೆ ದುಬೈ ಶೇಖ್ ಉಡುಪು ತೊಡಿಸಲಾಯಿತು. ಅವರ ಒತ್ತಾಯಕ್ಕೆ ಮಣಿಸದ ಸಿದ್ದರಾಮಯ್ಯ ದುಬೈ ಶೇಖ್‌ ಡ್ರೆಸ್‌ ಧರಿಸಿದರು. ಇದು ನಡೆದದ್ದು … Continued

ಅನಂತ ಹೆಗಡೆ ಸೇರಿ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಶ್ರ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು. ಇಂದು (ಸೋಮವಾರ) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ … Continued

ಕಿತ್ತೂರು ಕರ್ನಾಟಕ ನಾಮಕರಣ ಐತಿಹಾಸಿಕ ನಿರ್ಧಾರ : ಸೋಮಣ್ಣವರ

ಬೆಳಗಾವಿ : ಮುಂಬೈ ಕರ್ನಾಟಕ ಹೆಸರು ಬದಲಿಸಿ ಕಿತ್ತೂರು ಕರ್ನಾಟಕ ಎಂದು ಪುನರ್ ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಐತಿಹಾಸಿಕ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಎಸ್.ಬಿ.ಸೋಮಣ್ಣವರ ಶ್ಲಾಘಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬೆಳಗಾವಿ ಕಂದಾಯ ವಿಭಾಗದ 7 ಜಿಲ್ಲೆಗಳನ್ನು ಇದುವರೆಗೆ ಮುಂಬೈ ಕರ್ನಾಟಕ ಎಂದೇ … Continued

ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣಕ್ಕೆಸಂಪುಟ ಸಭೆಯಲ್ಲಿ ನಿರ್ಣಯ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

ಬೆಳಗಾವಿ : ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟವು ಅಧಿಕೃತ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕನ್ನಡ ಸಂಘಟನೆಗಳು ಸಂಬ್ರಮಾಚರಣೆ ಮಾಡಿದವು. ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ತೋಂಟದ ಸಿದ್ಧರಾಮ … Continued

ಮುಂಬಯಿ ಕರ್ನಾಟಕ ಬದಲಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ; ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಂಬಯಿ -ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ಮಹತ್ವ ನಿರ್ಣಯವನ್ನು ಇಂದು (ಸೊಮವಾರ) ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ … Continued

ಮಂಡ್ಯ: ಸಂಗಮದಲ್ಲಿ ಪುನೀತ್‌ ರಾಜಕುಮಾರ 11ನೇ ದಿನದ ಕಾರ್ಯ ಮಾಡಿದ ವಿನೋದ್ ರಾಜ್

ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಿಧನರಾಗಿ ಇಂದಿಗೆ (ಸೋಮವಾರಕ್ಕೆ) 11ನೇ ದಿನ. ಕುಟುಂಬಸ್ಥರು ಅವರ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯಕ್ರಮ ನೆರವೇರಿಸಿದರೆ ಶ್ರೀರಂಗ ಪಟ್ಟಣದ ಗಂಜಾಂ ಬಳಿಯ ಸಂಗಮ ಕ್ಷೇತ್ರದಲ್ಲಿ ನಟ ವಿನೋದ್ ರಾಜ್ ಅವರು ಅಪರ ಕರ್ಮ ಕಾರ್ಯವನ್ನು ನೆರವೇರಿಸಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ ನಿಧರಾಗಿ 11ನೇ ದಿನದ … Continued

195 ಸಿಬ್ಬಂದಿಯ ಕೋರಿಕೆ ವರ್ಗಾವಣೆ ಮಾಡಿದ ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಬಹು ದಿನಗಳ ಕೋರಿಕೆಯಂತೆ ವರ್ಗಾವಣೆಗಳನ್ನು ಪರಿಗಣಿಸುವುದು ಸೂಕ್ತ ಎಂದು ನಿರ್ಣಯಿಸಿ, ಅರ್ಹ ಚಾಲನಾ ಸಿಬ್ಬಂದಿ ಮತ್ತು ಸಂಚಾರ ಶಾಖೆಯ 195 ಸಿಬ್ಬಂದಿ ಕೋರಿಕೆಗಳನ್ನು ಪರಿಗಣಿಸಿ ಸಂಸ್ಥೆಯ ವರ್ಗಾವಣೆಯ ಮಾರ್ಗಸೂಚಿಗಳನ್ವಯ ಪಾರದರ್ಶಕವಾಗಿ ವರ್ಗಾವಣೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ವರ್ಗಾವಣೆಗೆ ಅರ್ಹರಿರುವ ಸಿಬ್ಬಂದಿ … Continued