ಉಪಚುನಾವಣೆ: ಹಾನಗಲ್‍ನಲ್ಲಿ 80%, ಸಿಂದಗಿಯಲ್ಲಿ70% ಮತದಾನ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಶನಿವಾರ ಮುಗಿದಿದ್ದು, ಬಹುತೇಕ ಶಾಂತಿಯುತವಾಗಿ ನಡೆದಿದೆ. ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿದೆ. ಹಾನಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾನಗಲ್‌ನಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನ, ಕಾಂಗ್ರೆಸ್‌ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್‌ನಿಂದ ರಿಯಾಜ್ ಶೇಖ್ ಸ್ಪರ್ಧಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ಸಿನಿಂದ ಅಶೊಕ್ … Continued

ಭಾನುವಾರ ಬೆಳಿಗ್ಗೆ 6ರಿಂದ ಪುನೀತ್‌ ಅಂತಿಮಯಾತ್ರೆ ಆರಂಭ, ಕಂಠೀರವ ಸ್ಟುಡಿಯೊದಲ್ಲಿ ಅಂತ್ಯಕ್ರಿಯೆ, ಕುಟುಂಬಸ್ಥರಿಗಷ್ಟೇ ಅವಕಾಶ

ಬೆಂಗಳೂರು:ಹೃದಯಾಘಾತದಿಂದ ನಿಧನರಾದ ಕನ್ನಡದ ಸೂಪರ್‌ ಸ್ಟಾರ್‌ ಪುನೀತ ರಾಜಕುಮಾರ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಅಭಿಮಾನಿಗಳಿಗೆ ಪ್ರವೇಶವಿಲ್ಲ ಎಂದು ಸರ್ಕಾರ ತಿಳಿಸಿದೆ. ಪ್ರಸ್ತುತ ಕಂಠೀರವ ಕ್ರೀಡಾಂಗಣದಿಂದ ಭಾನುವಾರ ಬೆಳಗ್ಗೆ 6 ಗಂಟೆಯಿಂದ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೊಕ್ಕೆ ಮೆರವಣಿಗೆ … Continued

ನಟ ಪುನೀತ ರಾಜಕುಮಾರ ನಿಧನದ ಸುದ್ದಿ ವರದಿ ಮಾಡಿದ ಬಿಬಿಸಿ

ಸ್ಯಾಂಡಲ್‌ವುಡ್‌ ನಟ, ಪವರ್‌ ಸ್ಟಾರ್‌ ಪುನೀತ ರಾಜಕುಮಾರ ಅವರ ನಿಧನದ ಸುದ್ದಿಯನ್ನು ವಿದೇಶಿ ಮಾಧ್ಯಮಗಳೂ ಪ್ರಸಾರ ಮಾಡಿವೆ. ಖ್ಯಾತ ಸುದ್ದಿವಾಹಿನಿ ಬಿಬಿಸಿ ಪುನೀತ ರಾಜಕುಮಾರ ಅವರ ನಿಧನದ ಸುದ್ದಿಯನ್ನು ಪ್ರಸಾರ ಮಾಡಿದೆ. ಕನ್ನಡ ಚಿತ್ರರಂಗದ ತಾರೆ 29 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮತ್ತು ಅವರ ವೃತ್ತಿಜೀವನದ ಆರಂಭದಲ್ಲಿ “ಅತ್ಯುತ್ತಮ ಬಾಲ ಕಲಾವಿದ” ರಾಷ್ಟ್ರ ಪ್ರಶಸ್ತಿ … Continued

ಕರ್ನಾಟಕ ಸರ್ಕಾರದಿಂದ ದೀಪಾವಳಿ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ದೀಪಾವಳಿಯನ್ನು ಸರಳವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮದೊಂದಿಗೆ ಆಚರಿಸುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸೂಚಿಸಿದ್ದಾರೆ. ನವೆಂಬರ್ 1ರಿಂದ 10ರ ವರೆಗೆ … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 347 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಇಳಿಕೆಯಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಂದು ಹೊಸದಾಗಿ 347 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 255 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,88,041ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ … Continued

ಅಪ್ಪನ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ; ಪುನೀತ ರಾಜಕುಮಾರ ತಲೆ ಸವರಿ ಅತ್ತ ಮಗಳು

ಬೆಂಗಳೂರು: ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುನೀತರಾಜಕುಮಾರ ಅವರ ಹಿರಿಯ ಮಗಳು ಧೃತಿಗೆ ತಂದೆ ಪುನೀತ್‌ ಅವರ ಅಂತಿಮ ದರ್ಶನ ಪಡೆದಿದ್ದಾರೆ. ತಂದೆ ಮೃತಪಟ್ಟ ಸುದ್ದಿ ತಿಳಿದ ತಕ್ಷಣ ವಿಮಾನದಲ್ಲಿ 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ ಅವರು ಸದಾಶಿವ ನಗರ ತಮ್ಮ ನಿವಾಸಕ್ಕೆ ತೆರಳಿ ಅಲ್ಲಿಂದ ಅವರು ಕಂಠೀರವ ಸ್ಟೇಡಿಯಂ ತಲುಪಿದರು. … Continued

ಇಂದಲ್ಲ, ನಾಳೆ ಪುನೀತ ರಾಜಕುಮಾರ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಪ್ರಕಟ

ಬೆಂಗಳೂರು: ಬೆಂಗಳೂರು: ನಟ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆ ಇಂದಲ್ಲ, ನಾಳೆ, ಭಾನುವಾರ ಸಕಲ ಸರ್ಕಾರ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಸಂಜೆ ನಡೆಯಬೇಕಿದ್ದ ಪುನೀತ್​ ರಾಜ್​ಕುಮಾರ್ ಅವರ ಅಂತ್ಯಸಂಸ್ಕಾರ ನಾಳೆಗೆ ಮುಂದೂಡಲಾಗಿದೆ ಈ ವಿಷಯವನ್ನು ರಾಘವೇಂದ್ರ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು … Continued

ಪುನೀತರಾಜಕುಮಾರ ನಿಧನದ ಶಾಕ್‌: ಬೆಳಗಾವಿಯಲ್ಲಿ ಇಬ್ಬರು ಅಭಿಮಾನಿಗಳ ಸಾವು

ಬೆಳಗಾವಿ :ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಬೆಳಗಾವಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಅಥಣಿಯಲ್ಲಿ ಇಪ್ಪತ್ತಾರು ವರ್ಷದ ರಾಹುಲ್ ಗಾಡಿವಡ್ಡರ್ ಅವರು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ ಶರಣಾಗಿದ್ದು, ಪುನೀತ್‌ ನಿಧನದ ಶಾಕಿನಿಂದ ಹೀಗೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ ತಾಲೂಕಿನ … Continued

ಪುನೀತ್ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನ ನೆರವೇರಿಸುವ ವಿನಯ ರಾಜ್‌ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತಿಮ ವಿಧಿವಿಧಾನವನ್ನು ರಾಘವೇಂದ್ರ ರಾಜಕುಮಾರ್ ಅವರ ಪುತ್ರ. ವಿನಯ್ ರಾಜ್‌ಕುಮಾರ್ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಘವೇಂದ್ರ ರಾಜಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜಕುಮಾರ್ ಅವರು ಚಿಕ್ಕಪ್ಪನ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಕುರಿತು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪುನೀತ್ ರಾಜಕುಮಾರ್ ಅವರಿಗೆ ಇಬ್ಬರು … Continued

ಇಂದು ಸಂಜೆಯೇ ಪುನೀತರಾಜಕುಮಾರ ಅಂತ್ಯಸಂಸ್ಕಾರ:ರಾಕ್​​ಲೈನ್ ವೆಂಕಟೇಶ್​

ಬೆಂಗಳೂರು: ಇಂದು ಸಂಜೆಯೇ ನಟ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​ ಹೇಳಿಕೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ ಪ್ರಾರಂಭಿಸಲಾಗುತ್ತದೆ. ಸಂಜೆ 5ರಿಂದ 5:30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಬರಲಿದೆ. ಮಧ್ಯಾಹ್ನ 1.30ರ ವೇಳೆಗೆ ಪುನೀತ್ ಪುತ್ರಿ ದೆಹಲಿಗೆ ಬರುತ್ತಾರೆ. ಅಲ್ಲಿಂದ ಸಂಜೆ 4ರಿಂದ 5 … Continued