ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.24.50ಕ್ಕೆ ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು : ದೀಪಾವಳಿಗೂ ಮುನ್ನವೇ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50 ಕ್ಕೆ ಪರಿಷ್ಕರಿಸಿದ್ದು, ಈ ಕುರಿತು ಆದೇಶ ಹೊರಡಿಸಿದೆ. ಜುಲೈ 1 2021ರಿಂದಲೇ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ. 2008ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು … Continued

ದೀಪಾವಳಿಯಲ್ಲಿ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋಪೂಜೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 5ರ ಬಲಿಪಾಡ್ಯಮಿ ಹಬ್ಬದ ದಿನ ದೇವಾಲಯಗಳಲ್ಲಿ 5.30ರಿಂದ 6.30ರ ತನಕ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸುವಂತೆ ಗೋಪೂಜೆ ನಡೆಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಆದೇಶ ಹೊರಡಿಸಿದೆ. … Continued

ಕುಮಟಾ :ಕುಡಿತದ ಅಮಲಿನಲ್ಲಿ ಕತ್ತಿಯಿಂದ ತಂದೆಯನ್ನೇ ಕಡಿದು ಸಾಯಿಸಿದ ಮಗ

ಕುಮಟಾ : ಕುಡಿದ ಅಮಲಿನಲ್ಲಿ ಮಗನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಸಂತೆಗುಳಿಯ ಕುಳ್ವೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. 31 ವರ್ಷದ ಶ್ರೀಕಾಂತ ರಾಮಚಂದ್ರ ಗೌಡನೇ ಕೊಲೆ ಮಾಡಿದ ಆರೋಪಿ, ಮೃತ ತಂದೆಯನ್ನು ರಾಮಚಂದ್ರ ಕುಪ್ಪು ಗೌಡ (55 ವರ್ಷ) ಎಂದು ಗುರುತಿಸಲಾಗಿದೆ. … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರ ವರೆಗೆ ಹೆಚ್ಚು ಮಳೆ:ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. … Continued

ಪ್ರೀತಿಸಿ ಮದುವೆಯಾದ ತಂಗಿಯನ್ನು ಕೊಚ್ಚಿ ಕೊಲೆ ಮಾಡಿದ ಅಣ್ಣ,ತಾನೇ ಠಾಣೆಗೆ ಬಂದು ಶರಣು..

ನವಲಗುಂದ: ಮನೆಯವರು ಮಾತು ಕೇಳದೆ ಪ್ರೀತಿಸಿ ಬೇರೆ ಸಮುದಾಯದ ಯುವಕನೊಂದಿಗೆ ಮದುವೆಯಾಗಿದ್ದ ತಂಗಿಯನ್ನು ಸ್ವಂತ ಸಹೋದರನೇ ಮಂಗಳವಾರ ಮಧ್ಯಾಹ್ನ ಕೊಲೆ ಮಾಡಿದ ಘಟನೆ ವರದಿಯಾಗಿದೆ. ಯಾರೂ ಇಲ್ಲದ ಸಮಯ ನೋಡಿ ತಂಗಿಯ ಗಂಡನ ಮನೆಗೆ ನುಗ್ಗಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕಲಾ(32) ಬರ್ಬರವಾಗಿ ಕೊಲೆಯಾದವಳು. … Continued

ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕ : ಸಚಿವ ನಾಗೇಶ

ಶಿವಮೊಗ್ಗ : ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿಯ ಕುರಿತು ಕಳೆದ ಕೆಲವು ವರ್ಷಗಳಿಂದಲೂ ಆಗ್ರಹ ಕೇಳಿಬರುತ್ತಿದೆ. ರಾಜ್ಯ ಸರ್ಕಾರ 5 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಜ್ಞಾನ … Continued

ಬ್ರಿಟನ್, ರಷ್ಯಾದಲ್ಲಿನ ಕೊರೊನಾ ಸೋಂಕು ಹೊಸ ತಳಿ ಪತ್ತೆ: ಮುನ್ನೆಚ್ಚರಿಕೆ ಕ್ರಮ, ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚೆ

ಹುಬ್ಬಳ್ಳಿ: ಬ್ರಿಟನ್, ರಷ್ಯಾ ಸೇರಿದಂತೆ ಭಾರತದಲ್ಲೂ ಕೊರೊನಾ ವೈರಸ್‌ನ ಹೊಸ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಕರ್ನಾಟಕದಲ್ಲಿ ಹೊಸದಾಗಿ 277 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ಹಾಗೂ 343 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ. 29,39,990 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,024 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ … Continued

ಅಮಾನ್ಯೀಕರಣಗೊಂಡ ನೋಟುಗಳ ಬದಲಾಯಿಸುವ ನೆಪದಲ್ಲಿ ಜೆರಾಕ್ಸ್‌ ನೋಟು ಕೊಡುತ್ತಿದ್ದ ಖದೀಮರು: ಐವರ ಬಂಧನ

ಬೆಂಗಳೂರು: ನೋಟ್‌ ಬ್ಯಾನ್‌ ಆಗಿರುವ ಹಾಗೂ ಚಲಾವಣೆಯಲ್ಲಿ ಇಲ್ಲದ ನೋಟುಗಳನ್ನು ಬದಲಾಯಿಸಿ ಕೊಡುವುದಾಗಿ ಹೇಳಿ ಜೆರಾಕ್ಸ್ ಪ್ರಿಂಟ್‌ ಮಾಡಿದ ನೋಟ್‌ ಕೊಟ್ಟು ಜನರಿಗೆ ವಂಚಿಸುತ್ತಿದ್ದ ಜಾಲವೊಂದು ಪೋಲಿಸರ ಬಲೆಗೆ ಬಿದ್ದಿದೆ. ಇವರ ಬಳಿಯಲ್ಲಿದ್ದ ಒಂದು ಸಾವಿರದ ನಿಷೇಧಿತ ಕಲರ್‌ ಜೆರಾಕ್ಸ್‌ ಕಂತೆ ಕಂತೆ ನಕಲಿ ನೋಟುಗಳನ್ನು ಕಂಡು ಪೋಲಿಸರೇ ಬೆಚ್ಚಿಬಿದ್ದಿದ್ದಾರೆ. ಅಮಾನ್ಯೀಕರಣಗೊಂಡಿರುವ 1000 ಮತ್ತು 500 … Continued

ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ತನ್ನ ನೀತಿ ಮರು ಪರಿಶೀಲಿಸಬೇಕು ಎಂದ ಹೈಕೋರ್ಟ್‌

ಬೆಂಗಳೂರು: ಪದವಿ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿ ಮರುಪರಿಶೀಲಿಸಬೇಕು. ನಿಮ್ಮ (ಸರ್ಕಾರ) ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯ ಸರ್ಕಾರವು ಪದವಿ ಹಂತದಲ್ಲಿ … Continued