ಅಮಾನ್ಯೀಕರಣಗೊಂಡ ನೋಟುಗಳ ಬದಲಾಯಿಸುವ ನೆಪದಲ್ಲಿ ಜೆರಾಕ್ಸ್‌ ನೋಟು ಕೊಡುತ್ತಿದ್ದ ಖದೀಮರು: ಐವರ ಬಂಧನ

ಬೆಂಗಳೂರು: ನೋಟ್‌ ಬ್ಯಾನ್‌ ಆಗಿರುವ ಹಾಗೂ ಚಲಾವಣೆಯಲ್ಲಿ ಇಲ್ಲದ ನೋಟುಗಳನ್ನು ಬದಲಾಯಿಸಿ ಕೊಡುವುದಾಗಿ ಹೇಳಿ ಜೆರಾಕ್ಸ್ ಪ್ರಿಂಟ್‌ ಮಾಡಿದ ನೋಟ್‌ ಕೊಟ್ಟು ಜನರಿಗೆ ವಂಚಿಸುತ್ತಿದ್ದ ಜಾಲವೊಂದು ಪೋಲಿಸರ ಬಲೆಗೆ ಬಿದ್ದಿದೆ. ಇವರ ಬಳಿಯಲ್ಲಿದ್ದ ಒಂದು ಸಾವಿರದ ನಿಷೇಧಿತ ಕಲರ್‌ ಜೆರಾಕ್ಸ್‌ ಕಂತೆ ಕಂತೆ ನಕಲಿ ನೋಟುಗಳನ್ನು ಕಂಡು ಪೋಲಿಸರೇ ಬೆಚ್ಚಿಬಿದ್ದಿದ್ದಾರೆ. ಅಮಾನ್ಯೀಕರಣಗೊಂಡಿರುವ 1000 ಮತ್ತು 500 … Continued

ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ತನ್ನ ನೀತಿ ಮರು ಪರಿಶೀಲಿಸಬೇಕು ಎಂದ ಹೈಕೋರ್ಟ್‌

ಬೆಂಗಳೂರು: ಪದವಿ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿ ಮರುಪರಿಶೀಲಿಸಬೇಕು. ನಿಮ್ಮ (ಸರ್ಕಾರ) ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯ ಸರ್ಕಾರವು ಪದವಿ ಹಂತದಲ್ಲಿ … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಹುದ್ದೆಗೆ ರಾಹುಲ್‌ ದ್ರಾವಿಡ್‌ ಅರ್ಜಿ ಸಲ್ಲಿಕೆ

ಮುಂಬೈ : ಭಾರತ ತಂಡ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಿದ್ದು, ಇದರಿಂದಾಗಿ ರಾಹುಲ್‌ ಕೋಚ್‌ ಹುದ್ದೆಗೆ ಇರುವ ಗೊಂದಲಕ್ಕೆ ತೆರೆಬಿದ್ದಿದೆ. ಈಗ ಕೋಚ್‌ ಆಗಿರುವ ರವಿಶಾಸ್ತ್ರೀ ಒಪ್ಪಂದದ ಅವಧಿ ಟಿ-20 ವಿಶ್ವಕಪ್‌ ಬೆನ್ನಲ್ಲೇ ಮುಕ್ತಾಯವಾಗಲಿದೆ. ಮುಂದಿನ ಟೀಂ … Continued

ಶಿರಸಿಯಲ್ಲಿ 5 ಕೋಟಿ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶ : ಇಬ್ಬರ ಬಂಧನ

ಶಿರಸಿ: ಸುಮಾರು ಐದು ಕೋಟಿ ರೂ. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್, ಶಿರಸಿಯ ಮರಾಠಿಕೊಪ್ಪದ  ರಾಜೇಶ  ಬಂಧಿತ ಆರೋಪಿಗಳಾಗಿದ್ದು, ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ … Continued

ಕಾಳಿ ನದಿಯಲ್ಲಿ ಮೊಸಳೆ ಪಾಲಾಗಿದ್ದ ಬಾಲಕನ ಶವ ಪತ್ತೆ

ಕಾರವಾರ:ಕಾಳಿನದಿಯಲ್ಲಿ ಮೀನು ಹಿಡಿಯಲು ಹೋಗಿ ಮೊಸಳೆ ಪಾಲಾಗಿದ್ದ ದಾಂಡೇಲಿಯ ಮೆಹಬೂಬ್ (15)ಬಾಲಕನ ಶವವು ಎರಡು ದಿನದ ನಂತರ ಇಂದು (ಮಂಗಳವಾರ) ಪತ್ತೆಯಾಗಿದೆ. ಪೊಲೀಸರು ,ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಾಯದಿಂದ ಆತನ ಶವವನ್ನು ಪತ್ತೆಹಚ್ಚಿ ತರಲಾಗಿದೆ.ಮೊಸಳೆ ದಾಳಿಯಿಂದ ಆತನ ಒಂದು ಕೈ ಸಂಪೂರ್ಣ ತುಂಡಾಗಿದೆ. ಎರಡು ದಿನಗಳಲ್ಲಿ ಬಹಳಷ್ಟು ಸತಾಯಿಸಿದ್ದ ಮೊಸಳೆ ಆಗೊಮ್ಮೆ, ಈಗೊಮ್ಮೆ ಎಂಬಂತೆ … Continued

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಹಚ್ಚಿಕೊಂಡ ತಾಯಿ: ತಾಯಿ-ಮಗಳು ಸಾವು, ಮಗನಿಗೆ ಗಂಭೀರ ಗಾಯ

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಎಂಬವಳೇ ಮಕ್ಕಳಿಗೆ ಬೆಂಕಿ ಹಚ್ಚು ತಾನೂ ಆತ್ಮಹತ್ಯೆ ಮಾಡಿಕೊಂಡವಳು ಎಂದು ಗುರುತಿಸಲಾಗಿದೆ. ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ 4 … Continued

ಚರ್ಚ್‌ಗಳ ಮಾಹಿತಿ ಸಂಗ್ರಹ: ರಾಜ್ಯ ಸರ್ಕಾರ, ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್‌ಗಳ ಕುರಿತು ಮಾಹಿತಿ ಸಂಗ್ರಹಿಸಲು ಜುಲೈ 7ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಹಾಗೂ ರಾಮನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಸರ್ಕಾರೇತರ ಸಂಸ್ಥೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ … Continued

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸೆಕ್ಯುರಿಟಿ ಅಧಿಕಾರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ: ಹೃದಯಸ್ಪರ್ಶಿ ವಿಡಿಯೋ ವೈರಲ್

ಬೆಂಗಳೂರು: ಪುಟ್ಟ ಬಾಲಕನೊಬ್ಬ ಅಪ್ಪನ ಕೈ ಹಿಡಿದುಕೊಂಡು ರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಮಿಲಿಟರಿ ವಾಹನ ನೋಡಿ ಥಟ್ಟನೆ ನಿಂತ ಆ ಬಾಲಕ ಮಿಲಿಟರಿ ವಾಹನದಲ್ಲಿದ್ದ ಸೈನಿಕರಿಗೆ ಸೆಲ್ಯೂಟ್ ಮಾಡಿದ. ಾದಕ್ಕೆ ಪ್ರತಿಯಾಗಿ ಸೈನಿಕನೂ ಬಾಲಕನಿಗೆ ವಾಹನದಲ್ಲಿ ಕುಳಿತಲ್ಲಿಂದಲೇ ಸೆಲ್ಯೂಟ್‌ ಮಾಡಿದ. ಈ ಹೃದಯಸ್ಪರ್ಶಿ ಘಟನೆ ನಡೆದಿದ್ದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ. Yesterday … Continued

ಕರ್ನಾಟಕದಲ್ಲಿ290 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) 290 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, ಇದೇ ಸಮಯದಲ್ಲಿ 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೂ 408 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದ್ದು, ಒಟ್ಟು 38,017 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,39,647 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 8583 ಸಕ್ರಿಯ ಪ್ರಕರಣಗಳಿವೆ. … Continued

ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ.6ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಜಮ್ಮು- ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಇದರ ವಿರುದ್ಧ ಡಿ.6 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗಳು, ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ರಾಜಶ್ರೀ ಚೌಧರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ … Continued