ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ … Continued

ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಿ ಬೊಮ್ಮಾಯಿ ಆದೇಶ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ನೂತನ ಕುಮಾರಿ ಅವರಿಗೆ … Continued

ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಜೈಲಿನಿಂದಲೇ ಮಠದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಮೆಮೊ ಹಾಗೂ ಜೊತೆಗಿನ ದಾಖಲೆಗಳ ಕುರಿತು ಕರ್ನಾಟಕ ಹೈಕೋರ್ಟ್‌ … Continued

ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಆರೋಪದ ಮೇಲೆ ಗದಗ ಜಿಲ್ಲೆಯ ಶಾಲಾ ಮುಖ್ಯಾಧ್ಯಾಪಕರನ್ನು ಶಿಕ್ಷಣ ಇಲಾಖೆ ಗುರುವಾರ ಅಮಾನತುಗೊಳಿಸಿದೆ. ಅಮಾನತುಗೊಂಡ ಮುಖ್ಯಾಧ್ಯಾಪಕರು ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಅಬ್ದುಲ್ ಮುನಾಫ್ ಬಿಜಾಪುರ ಎಂದು ವರದಿಯಾಗಿದೆ. ಇಲಾಖೆ ಅಥವಾ ಯಾವುದೇ ಸರ್ಕಾರಿ ಸಂಸ್ಥೆಗಳ ನಿರ್ದೇಶನವಿಲ್ಲದೆ ಪ್ರಬಂಧ ಸ್ಪರ್ಧೆ … Continued

ಎಸ್ಕಾಂಗಳ ಖಾಸಗೀಕರಣ ಇಲ್ಲ, ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಸಿಎಂ ಬೊಮ್ಮಾಯಿ

 ಹಾವೇರಿ:ಎಸ್ಕಾಂಗಳ ಖಾಸಗೀಕರಣವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಪ್ರದೇಶಗಳಿಗೆ ನಿರಂತರ ಏಳು ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಘೋಷಿಸಿದ್ದಾರೆ. ಇಲ್ಲಿನ ಗುರುಭವನದಲ್ಲಿ ಗುರುವಾರ ವಿಜಯ ಕರ್ನಾಟಕ, ಕನ್ನಡ ದಿನಪತ್ರಿಕೆ ಆಯೋಜಿಸಿದ್ದ ಹಾವೇರಿ ಜಿಲ್ಲೆ ರಚನೆ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ 5 ಗಂಟೆ ವಿದ್ಯುತ್ ನೀಡಲಾಗುತ್ತಿದ್ದು, … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

ಬೆಂಗಳೂರು : ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ದಸರಾ ಹಬ್ಬದ ನಿಮಿತ್ತ ಅಕ್ಟೋಬರ್ 3 ರಂದು ಎಲ್ಲ ಅರ್ಹ ಸಿಬ್ಬಂದಿಗೆ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕೋವಿಡ್ ಕಾರಣದಿಂದಾಗಿ ನಿಗಮವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸಹ ಸಿಬ್ಬಂದಿ ದಕ್ಷತೆಯ ಸೇವೆಯಿಂದ … Continued

ದಸರಾ ರಜೆ: ನಾಳೆಯಿಂದ ಕೆಎಸ್‌ಆರ್‌ಟಿಸಿಯ ಹೆಚ್ಚುವರಿ 2000 ವಿಶೇಷ ಬಸ್‌ ಸಂಚಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಮೈಸೂರು ದಸರಾ ಹಬ್ಬ ಹಾಗೂ ದಸರಾ ರಜೆ ಪ್ರಯುಕ್ತ ಸೆಪ್ಟೆಂಬರ್‌ 30ರಿಂದ ಅಕ್ಟೋಬರ್ 3ರವರೆಗೆ ಹೆಚ್ಚುವರಿಯಾಗಿ 2000 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್‌ ಮತ್ತು ಶಾಂತಿನಗರದಲ್ಲಿನ … Continued

ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಕ್ಕೂ ಮುನ್ನ ರಾಹುಲ್ ಗಾಂಧಿ ಪೋಸ್ಟರ್‌ಗಳನ್ನೇ ಹರಿದ ಕಿಡಿಗೇಡಿಗಳು..

ಚಾಮರಾಜಪೇಟೆ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಚಾಮರಾಜನಗರ ಜಿಲ್ಲೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ಯಾತ್ರೆಯ ರಾಜ್ಯಕ್ಕೆ ಆಗಮಿಸುವ ಮುನ್ನ, ಗುಂಡ್ಲುಪೇಟೆ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಹಾಕಲಾದ ಪೋಸ್ಟರ್‌ಗಳನ್ನು ಧ್ವಂಸಗೊಳಿಸಲಾಗಿದೆ. ಯಾತ್ರೆಗೆ ಸ್ವಾಗತ ಕೋರಲು ಹಾಕಲಾಗಿದ್ದ 40ಕ್ಕೂ ಹೆಚ್ಚು ಪೋಸ್ಟರ್ ಗಳನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಮೂಲಕ … Continued

ಕೃಷಿ ಭೂಮಿ ವಾರದಲ್ಲಿ ಪರಿವರ್ತನೆ : ಸುಗ್ರೀವಾಜ್ಞೆಗೆ ಸರ್ಕಾರದ ತೀರ್ಮಾನ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ … Continued