ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು, ಭಾನುವಾರ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. … Continued

ಶಿವಮೊಗ್ಗ: ವಿದ್ಯುತ್‌ ಸ್ಪರ್ಷದಿಂದ ಎರಡು ಕಾಡಾನೆಗಳು ಸಾವು

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಶೆಟ್ಟಿಹಳ್ಳಿ ಆಭಯಾರಣ್ಯದಿಂದ ಎರಡು ಕಾಡಾನೆಗಳು ಆಹಾರ ಅರಸಿ ಬಂದು ಬಲಿಯಾಗಿವೆ. ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಚೆನ್ನಹಳ್ಳಿಯ ಗ್ರಾಮದ ಆನೆಸರದ ಬಳಿ ವಿದ್ಯುತ್ ಸ್ಪರ್ಶದಿಂದ ಎರಡು ಗಂಡು ಕಾಡಾನೆಗಳು ಮೃತಪಟ್ಟ ಘಟನೆ ನಡೆದಿದೆ. ಕಾಡು ಹಂದಿಗಳ ಹಾವಳಿಯನ್ನ ತಪ್ಪಿಸಲು ಬೇಲಿಗೆ ವಿದ್ಯುತ್ ತಂತಿ ಕಟ್ಟಿದ ಪರಿಣಾಮ ರಾತ್ರಿ ವೇಳೆಯಲ್ಲಿ ಬಂದ ಕಾಡಾನೆಗಳು … Continued

ಬೆಳಗಾವಿ: ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಮಗಳು ಸೇರಿ ನಾಲ್ವರು ಸಾವು

ಬೆಳಗಾವಿ: ಸಿಮೆಂಟ್ ಲಾರಿ ಹಾಗೂ ಕಾರು ಹಾಗೂ ದ್ವಿಚಕ್ರ ವಾಹನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಪುತ್ರಿ, ಕಾರು ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಭಾನುವಾರ ಸಂಭವಿಸಿದೆ. ಮೃತರನ್ನು ಬೆಳಗಾವಿ ನಿವಾಸಿಗಳಾದ ಕುಡಚಿ ಠಾಣೆ ಎಎಸ್‌ಐ ಪರುಶರಾಮ ಹಲಕಿ ಎಂಬವರ … Continued

ಮಾಜಿ ಸಿಎಂ ಎಸ್‌ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಹತ್ತಿರದ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ … Continued

ಯುವಕನಿಗೆ ಬಲವಂತದಿಂದ ಖತ್ನಾ ಮಾಡಿಸಿ ಮತಾಂತರ ಯತ್ನದ ಆರೋಪ: ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ : ಮಂಡ್ಯದ ಯಾದವನಹಳ್ಳಿ ಗ್ರಾಮದ ಯುವಕನೊಬ್ಬನಿಗೆ ಮರ್ಮಾಂಗದ ಖತ್ನಾ ಮಾಡಿ ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ 11 ಮಂದಿ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ (26) ಎಂಬವರು ತನ್ನನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು 11 ಮಂದಿ … Continued

ಜಲ ಸಂಪನ್ಮೂಲ ಇಲಾಖೆ 155 ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಈಗ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ … Continued

ನಟ ರಮೇಶ ಅರವಿಂದಗೆ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ

ಉಡುಪಿ: ಉಡುಪಿಯ ಕೋಟ ತಟ್ಟು ಗ್ರಾಮ ಪಂಚಾಯತ ನೀಡುವ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗೆ ಕನ್ನಡದ ಖ್ಯಾತ ನಟ ರಮೇಶ ಅರವಿಂದ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10ರಂದು ನಡೆಯಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಳೆದ ಹದಿನೇಳು ವರ್ಷಗಳಿಂದ ಈ ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ನೀಡುತ್ತ ಬರಲಾಗುತ್ತಿದೆ. … Continued

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ

ಹುಬ್ಬಳ್ಳಿ: “ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಲಾಗಿದ್ದು, ಅವರು ಕಾರ್ಮಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಯವ್ಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ. ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತಮ್ಮ ವಾಸಸ್ಥಳದಿಂದ ಗರಿಷ್ಟ್ 45 ಕಿ.ಮೀ ವರೆಗೆ ಸಾರಿಗೆ ಸಂಸ್ಥೆ … Continued

ಧಾರವಾಡ ಐಐಐಟಿಗೆ ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ಮುರ್ಮು ಭೇಟಿ: ಬುಡಕಟ್ಟು ಭಾಷೆಗಳಿಗೆ ಧ್ವನಿ ಭಾಷಾನುವಾದ ಮಾಡುವ ರೋಬೋಟ್ ಅಭಿವೃದ್ಧಿ…!

ಧಾರವಾಡ: ಇಲ್ಲಿನ ಪ್ರತಿಷ್ಠಿತ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ (ಐಐಐಟಿ) ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿರಾಷ್ಟ್ರಪತಿಗಳ ಮೂಲ ರಾಜ್ಯವಾದ ಒಡಿಸ್ಸಾ ಹಾಗೂ ಕರ್ನಾಟಕದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿ ಅನುವಾದ ಮಾಡುವ ರೋಬೋಟ್ ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26ರಂದು ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿಯೇ ಈ ಸಂಸ್ಥೆ ಉನ್ನತ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ‘ಪ್ರಭಾರ ಭತ್ಯೆ ಹೆಚ್ಚಳ’ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವಂತ ಪ್ರಭಾರ ಭತ್ಯೆಗಳನ್ನು (In-charge Allowance Rate) ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಗಳನ್ನು ಹೊರಡಿಸಿದ್ದಾರೆ. ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆಗೆ ಮತ್ತೊಂದು ಹುದ್ದೆಯ … Continued