ಮಠಕ್ಕೆ ಮುರುಘಾ ಶ್ರೀಗಳು ವಾಪಸ್-ಸಂಕಟವನ್ನು ಧೈರ್ಯವಾಗಿ ಎದುರಿಸ್ತೇನೆ, ಸಹನೆಯಿಂದ ಇರಿ: ಭಕ್ತರಿಗೆ ಶ್ರೀಗಳ ಮನವಿ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಮಠಕ್ಕೆ ಆಗಮಿಸಿದ್ದಾರೆ. ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿd ಶ್ರೀಗಳು, ಬಂದಿರುವ ಸಂಕಟವನ್ನು ಧೈರ್ಯವಾಗಿ ಎದುರಿಸುತ್ತೇನೆ. ಈ ನೆಲದ ಕಾನೂನನ್ನು ಗೌರವಿಸಬೇಕುಯಾವುದೇ ಪಲಾಯನವಾದವಿಲ್ಲ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ … Continued

ಹಿಜಾಬ್ ಮೇಲಿನ ನಿಷೇಧ: ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ಮೇಲೆ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಗಳ ಕುರಿತು ರಾಜ್ಯಕ್ಕೆ ನೋಟಿಸ್ ಜಾರಿಗೊಳಿಸಿ ಸೆಪ್ಟೆಂಬರ್ 5 ರಂದು ವಿಚಾರಣೆಗೆ ಮುಂದೂಡಿತು. … Continued

ರಾಮನಗರದಲ್ಲಿವರುಣನ ಅಬ್ಬರಕ್ಕೆ ಜನ ತತ್ತರ: ಅರ್ಧ ಮುಳುಗಿದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ, ಎರಡು ತಾಲೂಕಿನಲ್ಲಿ ಶಾಲೆಗಳಿಗೆ ರಜೆ, ತೇಲಿಹೋದ ವಾಹನಗಳು

ರಾಮನಗರ: ಜಿಲ್ಲೆಯಾದ್ಯಂತ ಕುಂಭದ್ರೋಣ ಮಳೆಗೆ ರಾಮನಗರದಲ್ಲಿ ಭಾರಿ ಅನಾಹುತ ಸಂಭವಿಸಿದ್ದು, ನೀರಿನಲ್ಲಿ ಮುಳುಗುತ್ತಿದ್ದ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ್ದಾರೆ. ಮಳೆಯಿಂದ ಅನೇಕ ಬಡಾವಣೆಗಳು ಜಲಾವೃತಗೊಂಡಿವೆ. ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ‌ ವಾಹನಗಳು ತೇಲುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತಗೊಂಡಿದೆ. ರಾಮನಗರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮದ್ದೂರಿನಿಂದ … Continued

ವಿದ್ಯುತ್ ತಂತಿ ಸ್ಪರ್ಷ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಪಾಪತಿ ದಂಪತಿ ಸಾವು

ಬಳ್ಳಾರಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಸಾರಥಿ ಪಂಪಾಪತಿ (68) ಮತ್ತು ಅವರ ಪತ್ನಿ ದ್ಯಾಮವ್ವ ಅವರು (66) ವಿದ್ಯುತ್‌ ಸ್ಪರ್ಷದಿಂದ ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಳ್ಳಾರಿಯ ಕೌಲ್‌ ಬಜಾರ್‌ನ ಬಂಡಿಹಟ್ಟಿಯ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಪತ್ನಿಗೆ ವಿದ್ಯುತ್‌ ಶಾಕ್‌ ಹೊಡೆದಾಗ ಜೀವ ಉಳಿಸಲು ಹೋಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ … Continued

ರೈತರ ಪರಿಹಾರ ಕೋರಿಕೆ ಅರ್ಜಿಗಳ ನಿರ್ವಹಣೆಗೆ ಮೂರು ತಿಂಗಳಲ್ಲಿ ತಂತ್ರಾಂಶ ಅಭಿವೃದ್ಧಿ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು : ರೈತರ ಭೂಮಿ ಸ್ವಾಧೀನಪಡಿಸಿಕೊಂಡಿರುವುದಕ್ಕೆ ಪರಿಹಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳ ವ್ಯವಸ್ಥಿತ ನಿರ್ವಹಣೆ ಹಾಗೂ ಭೂಸ್ವಾಧೀನದ ಎಲ್ಲಾ ಪ್ರಕ್ರಿಯೆಗಳನ್ನು ಒಂದೇ ತಂತ್ರಾಂಶದ ಅಡಿ ಆನ್‌ಲೈನ್‌ನಲ್ಲಿ ನಿರ್ವಹಿಸಲು ಮೂರು ತಿಂಗಳೊಳಗೆ ತಂತ್ರಾಂಶ (ಸಾಫ್ಟ್‌ವೇರ್‌) ಸಿದ್ಧಪಡಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಇ-ಆಡಳಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರವು ಕರ್ನಾಟಕ … Continued

ತಕ್ಷಣವೇ ಮನೆ, ಬೆಳೆ ಪರಿಹಾರ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಮಳೆ ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು, ಭಾನುವಾರ ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. … Continued

ಗಣೇಶ ಹಬ್ಬದ ಸಂದರ್ಭದಲ್ಲಿ ದುಬಾರಿ ದರ ವಸೂಲಿ ಮಾಡಿದರೆ ಕ್ರಮ : ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಪಡೆದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ … Continued

ಮುರುಘಾ ಶರಣರ ಮೇಲೆ ಸುಳ್ಳು ಆರೋಪ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪದ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಮುರುಘಾ ಶರಣರ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವಿಲ್ಲ. ವ್ಯವಸ್ಥಿತ ಷಡ್ಯಂತ್ರ ಎಂಬಂತೆ … Continued

ಭಾರತ ಜೋಡೋ ಯಾತ್ರೆ ಲೋಗೋ ಬಿಡುಗಡೆ : ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿಮೀ ಪಾದಯಾತ್ರೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಯಾತ್ರೆಯ ಲೋಗೊ ಬಿಡುಗಡೆ ಮಾಡಿದರು. ಇಂದು, ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ, ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ ಮೊದಲಾದವರ ಉಪಸ್ಥಿತಿಯಲ್ಲಿ … Continued

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದ ಸಿಎಂ

ಬೆಂಗಳೂರು : ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತಾಗಿನ ಸತ್ಯಾಂಶ ಏನು ಎಂಬುದು ತನಿಖೆ ಬಳಿಕ ಹೊರಬಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಮಾಡಲು ಪೊಲೀಸರು ಸಂಪೂರ್ಣ ಸ್ವತಂತ್ರರಾಗಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲಿದ್ದು, ಆ … Continued