ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಗುಡ್ಡವೊಂದು ಮನೆಯ ಮೇಲೇ ಕುಸಿದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ದುರಂತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬ್ರಹ್ಮಣ್ಯ ಕುಮಾರಧಾರದ ಸ್ನಾನಘಟ್ಟದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾಾರಿಯ ಪರ್ವತಮುಖಿ ಎಂಬಲ್ಲಿ ದುರಂತ ಸಂಭವಿಸಿದ್ದು, ಕುಸುಮಾಧರ – ರೂಪಾಶ್ರೀ ದಂಪತಿಯ ಮಕ್ಕಳಾದ ಶ್ರುತಿ … Continued

ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಭೇಟಿ ಸಾಧ್ಯತೆ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಮಿತ್ ಶಾ ಅವರು ಆಗಸ್ಟ್ 3 ಹಾಗೂ 4ರಂದು ಕರ್ನಾಟಕಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಇಂದು ಮಂಗಳವಾರ ಸಂಜೆಯೊಳಗೆ ಅಮಿತ್ ಶಾ ಅವರ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದಕ್ಷಿಣ … Continued

ಭಾರಿ ಮಳೆಗೆ ಪ್ರವಾಹ : ಎರಡು ದಿನ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳದಂತೆ ಸೂಚನೆ

ಸುಬ್ರಹ್ಮಣ್ಯ: ಭಾರಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಆದಿ ಸುಬ್ರಹ್ಮಣ್ಯ ದೇಗುಲದ ಒಳಗೆ ನೀರು ಹೊಕ್ಕಿದೆ. ಹೀಗಾಗಿ ಮುಂದಿನ ಎರಡು ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಕುಮಾರಧಾರ ನದಿ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯಕ್ಕೆ ನೀರು ಒಳಹೊಕ್ಕಿದೆ. … Continued

ತಾಳಗುಪ್ಪ : ಖಾಸಗಿ ಬಸ್ – ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಚಾಲಕ ಸಾವು, 6 ಮಂದಿಗೆ ಗಾಯ

ತಾಳಗುಪ್ಪ : ಮಾರುತಿ ಇಕೋ ಕಾರು ಮತ್ತು ಹಾಗೂ ಪ್ರವಾಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಜೋಗದಿಂದ ಸಾಗರದ ಕಡೆ ಬರುತ್ತಿದ್ದ ಕಾರು ಪ್ರವಾಸಿ ಬಸ್ಸಿಗೆ ಗುದ್ದಿ … Continued

ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued

ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ರೈಲ್ವೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಹಾಸನದಲ್ಲಿ ಇಂದು, ಸೋಮವಾರ ವಿದ್ಯಾರ್ಥಿನಿಯೊಬ್ಬಳು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾಳೆ. ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರೊಂದಿಗೆ ಈ ಅಪಘಾತವು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ … Continued

ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಜೋರಾದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆ ಜೋರಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ … Continued

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಜನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಈಘ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಒತ್ತಾಯಿಸಲಾಗಿದೆ. ಕಾರವಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ … Continued

ಪೆನ್ಸಿಲ್, ಮ್ಯಾಗಿ ಬೆಲೆ ಹೆಚ್ಚಾಗಿದೆ, ಹೊಸ ಪೆನ್ಸಿಲ್‌ ಕೇಳಿದ್ರೆ ಅಮ್ಮ ಹೊಡೆಯುತ್ತಾಳೆ : ಪ್ರಧಾನಿ ಮೋದಿಗೆ ಪತ್ರ ಬರೆದ 1ನೇ ತರಗತಿ ಬಾಲಕಿ..!

ನವದೆಹಲಿ: 1ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯೊಬ್ಬಳು ಪೆನ್ಸಿಲ್ ಮತ್ತು ಮ್ಯಾಗಿ ದುಬಾರಿಯಾಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾಳೆ. ಉತ್ತರ ಪ್ರದೇಶದ ಕನೌಜ್‌ನ ಛಿಬ್ರಮೌವ್‌ನ ಆರು ವರ್ಷದ ಕೃತಿ ದುಬೆ ಎಂಬ ಬಾಲಕಿ ಹಿಂದಿಯಲ್ಲಿ ಬರೆದಿರುವ ಈ ಪತ್ರದಲ್ಲಿ ತನ್ನ ಕಷ್ಟದ ಬಗ್ಗೆ ಮಾತನಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪತ್ರದಲ್ಲಿ, … Continued