ಕರಾವಳಿ ಭಾಗದಲ್ಲಿ ವಿಶೇಷ ಕ್ರಮ ಜಾರಿ ಮಾಡ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು:ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಲ್ಲಿನ ಎಡಿಜಿಪಿಎ ಸೂಚನೆ ನೀಡಿದ್ದೇನೆ. ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್.ಟಿ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ವಿಶೇಷ ಕಠಿಣ … Continued

ಸುರತ್ಕಲ್ ಕೊಲೆ ಪ್ರಕರಣ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29) ರಜೆ ಘೋಷಿಸಲಾಗಿದೆ. ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ … Continued

ಪ್ರವೀಣ್‌ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಆಗಸ್ಟ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಪುತ್ತೂರಿನ ನ್ಯಾಯಾಲಯವು ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಾದ ಜಾಕೀರ್‌ ಸವಣೂರು ಮತ್ತು ಶಫೀಕ್‌ ಅವರನ್ನು ಬೆಳ್ಳಾರೆ ಪೊಲೀಸರು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಆರ್‌ ಪಿ ಗೌಡ … Continued

ಬಿಬಿಎಂಪಿ ಚುನಾವಣೆ: ವಾರದೊಳಗೆ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆಗೆ ಕಾಲ ಕೂಡಿಬಂದಿದ್ದು, ಇಂದಿನಿಂದ ಒಂದು ವಾರದೊಳಗೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳನ್ನೂ ಒಳಗೊಂಡಂತೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ, ಅಧಿಸೂಚನೆ ಹೊರಡಿಸಬೇಕು. ಆನಂತರ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ … Continued

ಪ್ರವೀಣ್ ನೆಟ್ಟಾರ ಹತ್ಯೆ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡದಲ್ಲಿ ಮತ್ತೊಬ್ಬ ಯುವಕನ ಹತ್ಯೆ

ಮಂಗಳೂರು: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ ನಡೆದಿದೆ. ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಮಹಮ್ಮದ್‌ ಫಾಜಿಲ್  (23) ಎಂಬವರ ಮೇಲೆ ಮಾರಣಾಂತಿಕ … Continued

ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಜನರ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ ಬೆಂಬಲ, ಕ್ರಮ ಕೈಗೊಳ್ಳಲು ಸಿಎಂಗೆ ಆಗ್ರಹ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳಿಗೆ ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಜುಲೈ 30ರಂದು ಆಯೋಜಿಸಿರುವ ಮೌನ ಪ್ರತಿಭಟನೆಯಲ್ಲಿ ಜಿಲ್ಲೆಯ ಜನರು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉತ್ತರ ಕನ್ನಡ ಜಿಲ್ಲೆಗೆ … Continued

ಅನೇಕ ಯೋಜನೆಗಳಿಗಾಗಿ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಕ್ಷಣವೇ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಿ : ರಾಜ್ಯ ಸರ್ಕಾರಕ್ಕೆ ರಾಘವೇಶ್ವರ ಶ್ರೀಗಳ ಆಗ್ರಹ

ಗೋಕರ್ಣ: ದೇಶದ ಅನೇಕ ಯೋಜನೆಗಳಿಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆ ಬಹಳಷ್ಟು ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಜಿಲ್ಲೆ. … Continued

ಪ್ರವೀಣ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ: 25 ಲಕ್ಷ ರೂ.ಗಳ ಚೆಕ್‌ ಹಸ್ತಾಂತರ

ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿಗಳು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇದೆ ಎಂದು … Continued

ಪ್ರಮೋದ ಮುತಾಲಿಕಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರಿಗೆ ಜುಲೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಈ ತಾಲೂಕುಗಳಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. … Continued

ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ … Continued