ಭಾರತೀಯ ವಿಜ್ಞಾನ ಪ್ರಚಾರಕ್ಕೆ ವಿವಿವಿ- ಎಂಐಟಿ ಸಹಯೋಗ: ರಾಘವೇಶ್ವರ ಶ್ರೀ

ಗೋಕರ್ಣ: ವಿಶ್ವದ ಜ್ಞಾನವೇ ವಿಜ್ಞಾನ; ಆತ್ಮದ ಜ್ಞಾನವೇ ಆತ್ಮಜ್ಞಾನ. ಇವೆರಡ ಸಮ್ಮಿಲನವೇ ಭಾರತೀಯ ಶಾಸ್ತ್ರ ಅಥವಾ ಭಾರತೀಯ ವಿಜ್ಞಾನ. ಇದು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದ್ದು, ಇದನ್ನು ಜನಮಾನಸಕ್ಕೆ ಒಯ್ಯುವ ನಿಟ್ಟಿನಲ್ಲಿ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಮಹಾರಾಷ್ಟ್ರ ಇನ್‍ಸ್ಟಿಟ್ಯೂಟ್ ಜತೆ ಸಹಯೋಗ ಹೊಂದಲಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಝೂಮ್ … Continued

ನಾಳೆಯಿಂದ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಧಾರವಾಡ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ನಾಳೆ (ಆ.16) ಬೆಳಿಗ್ಗೆ ಹೊರಡಿಸಲಾಗುವುದು. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯು ನಾಳೆಯಿಂದ ಆರಂಭವಾಗಲಿದೆ ಎಂದು ಎಂದು ಜಿಲ್ಲಾಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಇಂದು(ಭಾನುವಾರ) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಹಾಗೂ ಪರವಾನಿಗೆ ನೀಡಲು ಹುಬ್ಬಳ್ಳಿ … Continued

ಮಹಾನಗರ ಪಾಲಿಕೆ ಚುನಾವಣೆ: ಹುಬ್ಬಳ್ಳಿ-ಧಾರವಾಡ ಮಹಾನಗರ ಮೂಲಸೌಕರ್ಯ ಅಭಿವೃದ್ಧಿಯೇ ಬಿಜೆಪಿ ಅಜೆಂಡಾ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸೆಪ್ಟೆಂಬರ್‌ 3ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಹೀಗಾಗಿ ಈಗ ಅವಳಿ ನಗರದಲ್ಲಿ ರಾಜಕೀಯ ಚಟುವಟಿಕೆ ಗದಿಗೆದರಿದೆ. ಬಿಜೆಪಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಗಳನ್ನಾಗಿ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರನ್ನು ನೇಮಿಸಲಾಗಿದೆ.ಹು-ಧಾ ಮಹಾನಗರ ಪಾಲಿಕೆ ಚುನಾವಣೆ … Continued

ಧ್ವಜಾರೋಹಣ ಮಾಡಲು ಸಚಿವೆ ಶಶಿಕಲಾ ಜೊಲ್ಲೆಗೆ ಮಹಿಳೆಯರಿಂದ ಅಡ್ಡಿ

ವಿಜಯಪುರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಾರ್ಯಕರ್ತರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಇಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣಕ್ಕೆ ಆಗಮಿಸುತ್ತಿದ್ದಂತೆ ನೂರಾರು ಮಹಿಳೆಯರು ಸಚಿವೆ ಜೊಲ್ಲೆಗೆ … Continued

ನವಕರ್ನಾಟಕಕ್ಕೆ ದೃಢ ಸಂಕಲ್ಪ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಉಳಿದಿರುವ 20 ತಿಂಗಳಲ್ಲಿ ಅಭಿವೃದ್ಧಿ ಕೆಲಸಕ್ಕೆ ವೇಗ ನೀಡುತ್ತೇವೆ. ಇವತ್ತಿನಿಂದ ನವಕರ್ನಾಟಕ ಆಗುತ್ತದೆಂದು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರಧ್ವಜಾರೋಹಣದ ಬಳಿಕ ಮಾಡಿದ ತಮ್ಮ ಭಾಷಣದಲ್ಲಿ ಅವರು … Continued

ಧ್ವಜಸ್ತಂಭ ನಿಲ್ಲಿಸುವಾಗ ಅವಘಡ:ವಿದ್ಯುತ್‌ ಪ್ರವಹಿಸಿ ಬಾಲಕ ಸಾವು

ತುಮಕೂರು: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಆಗಿ ಬಾಲಕನೊಬ್ಬ ಮೃತಪಟ್ಟ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ತುಮಕೂರು ತಾಲ್ಲೂಕಿನ ಕರಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ,ಕಾರ್ಯಕ್ರಮಕ್ಕೆ ಧ್ವಜಸ್ತಂಭ ನಿಲ್ಲುಸುವಾಗ ಅಆಕಸ್ಮಾತ್‌ ಕಂಬ ವಿದ್ಯುತ್‌ ತಂತಿಮೇಲೆ ಬಿದ್ದು ಈ ಅವಘಡ ಸಂಭವಿಸಿದೆ. ಇದು ಕಬ್ಬಿಣದ ಕಂಬವಾಗಿದ್ದರಿಂದ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಆಗಿ ಮೂವರಿಗೆ ವಿದ್ಯುತ್‌ … Continued

ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ (ಆಗಸ್ಟ್‌15)ರಿಂದ  ಆಗಸ್ಟ್ 17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು … Continued

ಬೆಂಗಳೂರಿನಿಂದ ಕಾರವಾರದ ವರೆಗೂ ಚಲಿಸಲಿದೆ ಗಾಜಿನ ಛಾವಣಿ ವಿಸ್ಟಾಡೋಮ್ ರೈಲು

ಕಾರವಾರ: ಬೆಂಗಳೂರಿನ ಯಶವಂತಪುರ ನಿಲ್ದಾಣ ಹಾಗೂ ಕಾರವಾರ ನಡುವೆ ಹಗಲು ರೈಲು ಆ.16ರಿಂದ ಪುನಃ ಸಂಚಾರ ಆರಂಭಿಸಲಿದ್ದು, ಈ ಬಾರಿ ಗಾಜಿನ ಛಾವಣಿ ಹೊಂದಿರುವ ಪ್ರವಾಸೋದ್ಯಮ ಹೆಚ್ಚಿಸುವ ವಿಸ್ಟಾಡೋಮ್ ಬೋಗಿಗಳು ರೈಲಿನ ಆಕರ್ಷಣೆಯಾಗಿವೆ. ಪಶ್ಚಿಮ ಘಟ್ಟ ಸಾಲು ಹಾಗೂ ಅರಬ್ಬೀ ಸಮುದ್ರದ ಸೌಂದರ್ಯ, ಹಳ್ಳಕೊಳ್ಳಗಳ ಸೌಂದರ್ಯವನ್ನು ಸವಿಯಬಹುದಾಗಿದೆ. ಈ ಹಿಂದೆ ಸಂಚರಿಸುತ್ತಿದ್ದ ರೈಲನ್ನು ಪ್ರಯಾಣಿಕರ ಕೊರತೆಯ … Continued

ಕೋವಿಡ್‌ ಮೂರನೇ ಅಲೆ ನಿಯಂತ್ರಣ: ಲಾಕ್‌ಡೌನ್‌ನಂತಹ ಕಠಿಣ ನಿರ್ಬಂಧ ಸದ್ಯಕ್ಕಿಲ್ಲ, ಎರಡು ವಾರಗಳ ಬಳಿಕ ತೀರ್ಮಾನ- ಸಿಎಂ

ಬೆಂಗಳೂರು: ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದರು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್​ 15ರ ಬಳಿಕ ಕಠಿಣ ನಿರ್ಬಂಧ ವಿಧಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿರುವುದರಿಂದ ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ … Continued

ಕರ್ನಾಟಕದಲ್ಲಿ 10 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ವರದಿಯಾದ ಕೊರೊನಾ ಹೊಸ ಸೋಂಕು, 4 ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಶನಿವಾರ) 1632 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಸಮಯದಲ್ಲಿ 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಗಳು ತಿಳಿಸಿವೆ. 1612 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2868351ಕ್ಕೆ ತಲುಪಿದೆ. … Continued