ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ಪಥಸಂಚಲ ; ಹೊಸದಾಗಿ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಕಲಬುರಗಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿಜಯದಶಮಿ ಉತ್ಸವದ ಭಾಗವಾಗಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2ಕ್ಕೆ ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನ, ಸ್ಥಳ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕೈಗೊಂಡಿರುವ ನಿರ್ಣಯದ ವರದಿಯನ್ನು ಅಕ್ಟೋಬರ್‌ 24ಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಭಾನುವಾರ ನಿರ್ದೇಶಿಸಿದೆ. ಚಿತ್ತಾಪುರದಲ್ಲಿ … Continued

ವಾಯುಭಾರ ಕುಸಿತ : ಕರ್ನಾಟಕದ 23 ಜಿಲ್ಲೆಗಳಲ್ಲಿ 4-5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾನುವಾರ (ಅಕ್ಟೋಬರ್‌ ೧೯) ಭಾರೀ ಮಳೆ/ಗುಡುಗು ಸಹಿತ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಅಂಕೋಲಾ | ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದ ಬಸ್ …

ಅಂಕೋಲಾ: ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ನಿರ್ವಾಹಕ ಸೇರಿ 49 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕುಮಟಾ ಶಿರಸಿ ರಸ್ತೆಯು ಕಾಮಗಾರಿಯ … Continued

ಸವದತ್ತಿ: ವಿಚ್ಛೇದಿತ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಮಾಜಿ ಪತಿ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದ ನಂತರವೂ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಮಾಜಿ ಪತಿ ಆಕೆಯನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಜಿಲ್ಲೆಯ ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ ಕರೀಕಟ್ಟಿ (34) ತನ್ನ ಮಾಜಿ ಪತಿಯಿಂದಲೇ ಕೊಲೆಯಾದವರು ಎಂದು … Continued

ವೀಡಿಯೊ..| ಬೆಂಗಳೂರಲ್ಲಿ ಕ್ರೂರ ಸರಗಳ್ಳತನ ; ಕತ್ತಿ ಹಿಡಿದು ಮಹಿಳೆಯರಿಗೆ ಹೆದರಿಸಿ, ಓರ್ವ ಮಹಿಳೆ ಬೆರಳು ಕತ್ತರಿಸಿ ಸರ ದೋಚಿದ ಕಳ್ಳರು

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ನಲ್ಲಿ ಕತ್ತಿ ಹಿಡಿದು ಬೆದರಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕಸಿದುಕೊಂಡ ಘಟನೆಯ ವೀಡಿಯೊ ಈಗ ವೈರಲ್‌ ಆಗಿದೆ. ಮಹಿಳೆ ವಿರೋಧಿಸಿದಾಗ, ಸರಗಳ್ಳ ಆಕೆಯ ಎರಡು ಬೆರಳುಗಳನ್ನು ಕತ್ತರಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಇಬ್ಬರು ಸರಗಳ್ಳರಾದ ಪ್ರವೀಣ ಮತ್ತು ಯೋಗಾನಂದ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. … Continued

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟಿ​ಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್ ನಾಗಮೋಹನದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿವೆ. ಬಂಜಾರ, ಭೋವಿ, ಕೊರಮ, ಕೊರಚ ಸಮಾಜ … Continued

ಸಿಂದಗಿ : ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಸಾವು

ವಿಜಯಪುರ: ದರೋಡೆ ಮಾಡಿ ಪರಾರಿಯಾಗುವ ಯತ್ನದಲ್ಲಿದ್ದಾಗ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಾವಿಗೀಡಾದ ಘಟನೆ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಯುನೂಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. … Continued

ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ : ಸಿಎಂ ಸಿದ್ದರಾಮಯ್ಯಗೆ‌ ಶಾಸಕ ಯತ್ನಾಳ ಪತ್ರ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal), ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ತಾವು … Continued

ಬೆಂಗಳೂರು ಬಿಸಿನೆಸ್‌ ಕಾರಿಡಾರಿಗೆ ಸಂಪುಟ ಅಸ್ತು: ಸಂಚಾರ ದಟ್ಟಣೆ ಶೇ. 40 ರಷ್ಟು ಕಡಿತವಾಗುವ ನಿರೀಕ್ಷೆ

ಬೆಂಗಳೂರು: ಭಾರಿ ಸಂಚಾರ ದಟ್ಟಣೆಯಿಂದಲೇ ಕುಖ್ಯಾತಿ ಗಳಿಸಿರುವ ಬೆಂಗಳೂರು ನಗರದ ಸಂಚಾರ ಸಮಸ್ಯೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 117 ಕಿಲೋಮೀಟರ್ ಉದ್ದದ ಪೆರಿಫೆರಲ್ ರಿಂಗ್ ರೋಡ್ (PRR) ಯೋಜನೆಗೆ ಹೊಸ ಸ್ವರೂಪ ನೀಡಿ, ಅದನ್ನು ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂದು ಮರುನಾಮಕರಣ ಮಾಡಿ ಸಚಿವ ಸಂಪುಟ … Continued