ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16ರ ವರೆಗೂ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು … Continued

ಕರ್ನಾಟಕದ ಆಸ್ಪತ್ರೆಗಳ 50% ಐಸಿಯು ಹಾಸಿಗೆಗಳು ಮಕ್ಕಳ ಐಸಿಯು ಹಾಸಿಗೆಗಳಾಗಿ ಪರಿವರ್ತನೆ: ಸಿಎಂ ಬೊಮ್ಮಾಯಿ

ಮಂಗಳೂರು: ಮೂರನೇ ಅಲೆಯ ಸಿದ್ಧತೆಯ ಭಾಗವಾಗಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಾದ್ಯಂತ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿನ 50% ಹಾಸಿಗೆಗಳನ್ನು ಮಕ್ಕಳ ಐಸಿಯು ಹಾಸಿಗೆಗಳಾಗಿ ಪರಿವರ್ತಿಸುವುದಾಗಿ ಘೋಷಿಸಿದರು. ಆಗಸ್ಟ್ 12 ರ ಗುರುವಾರ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಮಂಗಳೂರಿಗೆ ಭೇಟಿ ನೀಡಿದಾಗ ಅವರು ಘೋಷಣೆ ಮಾಡಿದರು. ಹೊಸ ರೂಪಾಂತರಗಳ ಹೊರಹೊಮ್ಮುವಿಕೆಯ ನಡುವೆ ಕೋವಿಡ್ … Continued

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಗುರುವಾರ ನಸುಕಿನ ಜಾವ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ … Continued

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ಚಾಲಕ, ನಿರ್ವಾಹಕನ ಬಂಧನ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. … Continued

ಕೇರಳ ಗಡಿಗೆ ಹತ್ತಿರವಿರುವ ಹಳ್ಳಿಗಳಿಗೆ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆ : ಬೊಮ್ಮಾಯಿ

ಮಂಗಳೂರು: ಕೇರಳ ಗಡಿಯಿಂದ 10 ಕಿಮೀ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕುಗಳು ಮತ್ತು ಗ್ರಾಮಗಳಿಗೆ ಕೋವಿಡ್ -19 ಲಸಿಕೆಯನ್ನು ಆದ್ಯತೆ ಮೇಲೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರಕಟಿಸಿದ್ದಾರೆ. ಸುಮಾರು 59 ಪ್ರತಿಶತ ವಯಸ್ಕರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಮತ್ತು 21 ಪ್ರತಿಶತದಷ್ಟು ಜನರು ಎರಡನೇ ಡೋಸ್ … Continued

ಯಾದಿಗಿರಿ  ಕಡೆಚೂರು ಬಳಿ ವಿಶ್ವದರ್ಜೆ ಔಷಧಿ ಪಾರ್ಕ್ ನಿರ್ಮಾಣ: ಕೇಂದ್ರ ಖೂಬಾ ಭೇಟಿಯಾದ ಸಚಿವ ನಿರಾಣಿ

ಯಾದಗಿರಿ: ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ … Continued

ಗುರುವಾರವೂ ಕೊರೊನಾ ಹೊಸ ಸೋಂಕಿನಲ್ಲಿ ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡ

ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ (ಗುರುವಾರ) 1857 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ 30 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,24,732 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 1950 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ, ಇದುವರೆಗೆ 28,65,067 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 36,911 ಜನ ಸಾವನ್ನಪ್ಪಿದ್ದಾರೆ. 22,728 ಸಕ್ರಿಯ … Continued

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆ ಇಲ್ಲ: ಸಿಎಂ

ಮಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸುವುದನ್ನು ನಿಲ್ಲಿಸುವಂತೆ ನಾಳೆ (ಶುಕ್ರವಾರ) ನಿರ್ದೇಶನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಗೆ ತೆರಳುವ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದ ನಂತರ ಹಿರಿಯ ಪೊಲೀಸ್ … Continued

ಲಿಂಗನಮಕ್ಕಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ: ಶರಾವತಿ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಾರವಾರ: ಶರವಾತಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಕೆಳಗಿನ ನದಿ ತೀರದ ಪ್ರದೇಶಗಳಿಗೆ ಲಿಂಗನಮಕ್ಕಿಯಿಂದ ನೀರು ಬಿಡುವ ಮುನ್ನೆಚ್ಚರಿಕೆ ನೀಡಲಾಗಿದೆ. ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆನೀರಿನ ಹರಿವುಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟವು 1819.00 ಅಡಿಗಳಾಗಿದ್ದು , ಜಲಾಶಯದ ಮಟ್ಟ ಆಗಸ್ಟ್‌ 12ರಂದು ಬೆಳಿಗ್ಗೆ 8 … Continued

ಮಹತ್ವದ ಸುದ್ದಿ.. ಕೋವಿಡ್-19 ಹಿನ್ನೆಲೆ: ರಾಜ್ಯ ಸರ್ಕಾರದಿಂದ ಗಣೇಶ ಹಬ್ಬ, ಮೋಹರಂ ಆಚರಣೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : 2021ನೇ ಸಾಲಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೋಹರಂ ಮತ್ತು ಇತರೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ … Continued