ಕಲಬುರಗಿ: ಮಹಿಳಾ ಪಿಎಸ್‌ಐ ‌ಮೇಲೆ ಮಚ್ಚಿನಿಂದ ಹಲ್ಲೆ, ಕೊಲೆ ಆರೋಪಿ ಮೇಲೆ ಫೈರಿಂಗ್‌

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಜಯಕುಮಾರ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವೀಡಿಯೋ ಚಿತ್ರೀಕರಣ ನಿಷೇಧದ ಆದೇಶ ವಾಪಸ್…!

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವೀಡಿಯೊ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ನಂತರ ತನ್ನ ಆದೇಶ ವಾಪಸ್ ಪಡೆದಿದೆ. ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಆದೇಶ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯದಲ್ಲಿ ಸಾರ್ವಜನಿಕರು … Continued

ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ: ಜೆಡಿಎಸ್‌ ಸರ್ವಾನುಮತದ ನಿರ್ಣಯ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ನಡೆದ ನಾಯಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶುಕ್ರವಾರ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ ಸಮುದ್ರ ತೀರದಲ್ಲಿ ಜೋರಾಗಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. … Continued

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಮೃತ ಪೌಲ್‌ ಅವರನ್ನು ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿ ನೀಡಿದ್ದ ಅವಧಿ ಇಂದು, ಶುಕ್ರವಾರ … Continued

ಕೊಡಗಿನಲ್ಲಿ ಬೆಟ್ಟ ಕುಸಿತದ ಆತಂಕ: 80 ಕುಟುಂಬಗಳ ಸ್ಥಳಾಂತರ

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಿಂದಾಗಿ ಬೆಟ್ಟ ಕುಸಿತದ ಆತಂಕ ಎದುರಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 80 ಕುಟುಂಬಗಳ 221 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಅಯ್ಯಪ್ಪ ಬೆಟ್ಟ ಹಾಗೂ ಮಲೆತಿರಿಕೆ ಬೆಟ್ಟಗಳ ಬುಡದಲ್ಲಿ ವಾಸಿಸುತ್ತಿರುವ ಸುಮಾರು 80 ಕುಟುಂಬಗಳ 221 ಮಂದಿಯನ್ನು ಅವರ ವಾಸಸ್ಥಾನಗಳಿಂದ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ. ನಿರಂತರ … Continued

ಅತಿವೃಷ್ಟಿ, ಪ್ರವಾಹದಿಂದ ‘ಬೆಳೆಹಾನಿ: ಇನ್ ಪುಟ್ ಸಬ್ಸಿಡಿ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಳ ಮಾಡಿ ಆದೇಶಿಸಿದೆ. ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದ ಭಾರೀ ಮಳೆಯಿಂದ ಹಾಗೂ ನದಿ ನೀರಿನ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, … Continued

ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರ ಸಂಪೂರ್ಣ ನಿಷೇಧ

ಹಾಸನ: ಶಿರಾಡಿ ಘಾಟ್‌ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ. ಹಾಸನದ ದೋಣಿಗಲ್‌ನಲ್ಲಿ ಮೊದಲು ಭೂಕುಸಿತ ಸಂಭವಿಸಿತ್ತು. ಇದೀಗ ಅಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಹೀಗಾಗಿ, ಈ ರಸ್ತೆಯು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇನ್ನು ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಹರಿರಾಂ ಶಂಕರ್‌ ತಿಳಿಸಿದ್ದಾರೆ. ಶಿರಾಡಿ … Continued

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯು ಆಗಸ್ಟ್‌ 12ರಿಂದ ಆರಂಭವಾಗಿ ಆಗಸ್ಟ್‌ 25ರ ವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 12-08-2022 ರಿಂದ 25-08-2022ರ ವರೆಗೆ ನಡೆಸಲು ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು … Continued

ರಾಜ್ಯದಲ್ಲಿ ಜುಲೈ ಎರಡು ವಾರದಲ್ಲಿ ವಾಡಿಕೆಗಿಂತ ಶೇ.106 ರಷ್ಟು ಅಧಿಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರದಲ್ಲಿ ವಾಡಿಕೆಗಿಂತ ಶೇ.106ರಷ್ಟು ಹೆಚ್ಚು ಮಳೆಯಾಗಿದೆ. ಜುಲೈ 1ರಿಂದ ಜುಲೈ 14ರ ನಡುವಿನ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 118ಮಿ.ಮೀ, ಆದರೆ 243ಮಿ.ಮೀ.ನಷ್ಟು ಮಳೆಯಾಗಿದೆ. ಜೂನ್ ಮೊದಲ ಮೂರು ವಾರ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಕೊರತೆಯಾಗಿತ್ತು. ಆದರೆ ಜೂನ್ ಕೊನೆಯಲ್ಲಿ ಚೇತರಿಕೆ ಕಂಡ … Continued