ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಫೋಟೋ-ವೀಡಿಯೊ ಮಾಡುವಂತಿಲ್ಲ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾರ್ಜ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ವೀಡಿಯೋ ಮಾಡುವುದು ಅಥವಾ ಫೋಟೋ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಸಾರ್ವಜನಿಕರು ಆಗಮಿಸುವುದು ಸಾಮಾನ್ಯ. ಆದರೆ ಇಂತಹ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳ ಕಾರ್ಯ ನಿರ್ವಹಿಸುವಾಗ ಕೆಲವು ಖಾಸಗಿ ವ್ಯಕ್ತಿಗಳು … Continued

ಸಿದ್ದರಾಮಯ್ಯ ಕೊಟ್ಟ ಪರಿಹಾರದ ಹಣ ಕಾರಿನತ್ತ ಎಸೆದು ಮಹಿಳೆಯ ಆಕ್ರೋಶ

ಬಾಗಲಕೋಟೆ: ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರನ್ನು ಭೇಟಿಯಾಗಿ ಸಾಂತ್ವನ ಹೇಳಲು ಬಂದಿದ್ದ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುವ ಪ್ರಸಂಗ ನಡೆಯಿತು. ಕೆರೂರ ಗುಂಪು ಘರ್ಷಣೆಯಲ್ಲಿ ಗಾಯಗೊಂಡಿದ್ದವರು ಬಾಗಲಕೋಟೆ ಬಳಿಯ ಆಶೀರ್ವಾದ ಆಸ್ಪತ್ರೆಗೆ ದಾಖಲಾಗಿದ್ದರು.ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಪರಿಹಾರ ನೀಡುವ ಸಲುವಾಗಿ … Continued

ಖಾನಾಪುರ: ಮನೆ ಗೋಡೆ ಕುಸಿದು ಬಾಲಕ ಸಾವು

ಖಾನಾಪುರ :ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಲಿಂಗನಮಠ ಗ್ರಾಮ ಪಂಚಾಯತ ವ್ಯಾಪ್ತಿಯ ಚುಂಚವಾಡದಲ್ಲಿ ಗುರುವಾರ ನಡೆದಿದೆ. ಮೃತಪಟ್ಟವನನ್ನು ಅನಂತು ಧರ್ಮೇಂದ್ರ ಪಾಶೆಟ್ಟಿ(15) ಎಂಬ ಎಂದು ಗುರುತಿಸಲಾಗಿದೆ. ವಾಸಿಸುವ ಮನೆಯಲ್ಲಿಯೇ ದನಕರುಗಳನ್ನು ಕಟ್ಟುತ್ತಿದ್ದರು. ಗುರುವಾರ ರಾತ್ರಿ ಹತ್ತರ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ … Continued

ಭಾರೀ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ :ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ವ್ಯಾಪಕ ಮಳೆಯಾಗುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ, ಸೇತುವೆಗಳ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ … Continued

ಹಿರಿಯ ನಟ ಅನಂತ ನಾಗ್‌ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌

ಕೋಲಾರ: ಕನ್ನಡದ ಹಿರಿಯ ನಟ ಅನಂತ ನಾಗ್, ಶಹನಾಯಿ ವಾದಕ ಬಾಳೇಶ ಭಜಂತ್ರಿ ಹಾಗೂ ಎಂಜಿನಿಯರ್ ಶರದ್‌ ಶರ್ಮ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರಕಟಿಸಿದೆ. ಗುರುವಾರ ಮಾಹಿತಿ ನೀಡಿದ ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಅವರು, ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಶುಕ್ರವಾರ ಜುಲೈ 15ರಂದು, ವಿಶ್ವವಿದ್ಯಾಲಯದ 2ನೇ ವಾರ್ಷಿಕ … Continued

ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗು ಸಾವು

ಉಡುಪಿ: ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು ನೀರಿನ‌ ಹೊಂಡಕ್ಕೆ ಬಿದ್ದುಮೃತಪಟ್ಟ‌ ದುರ್ಘಟನೆ ಜಿಲ್ಲೆಯ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟುನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಎಷ್ಟೇ ಹುಡುಕಾಟ ನಡೆಸಿದರೂ ಬಾಲಕ … Continued

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಹಾಸನ: ರಾಜಧಾನಿ ಬೆಂಗಳೂರು ಹಾಗೂಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು, ಗುರುವಾರ ಮತ್ತೆ ಭೂಕುಸಿತವಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದ ರಸ್ತೆ, ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಲಘು ವಾಹನಗಳಿಗೆ ಏಕ … Continued

ಮಂಡ್ಯ: ಆಟೊ- ಕಾರು ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಮಂಡ್ಯ ಜಿಲ್ಲೆಯ ಮಳವಳ್ಳಿ ಹೊರವಲಯದ ಕಣಿಗಲ್ ಗೇಟ್ ಬಳಿ ಬುಧವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ವೇಗವಾಗಿ ಬಂದ ಕಾರು, ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರವಿಕುಮಾರ(50), ಭಾಸ್ಕರ (48) ಮತ್ತು ಆಟೊ … Continued

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, … Continued

ಭಾರತದ ಸ್ವಾತಂತ್ರ್ಯದ 75 ನೇ ವರ್ಷಾಚರಣೆ : ರಾಜ್ಯದ 84 ಕೈದಿಗಳಿಗೆ ಸಿಗಲಿದೆ ಬಿಡುಗಡೆಯ ಭಾಗ್ಯ

ಬೆಂಗಳೂರು: ಈ ವರ್ಷ ಭಾರತದ ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಆಗಸ್ಟ್ 15 ರಂದು ಸಾವಿರಾರು ಜೈಲು ಕೈದಿಗಳು ಸ್ವತಂತ್ರರಾಗಲಿದ್ದಾರೆ. ಕೇಂದ್ರ ಸರ್ಕಾರವು ದೇಶಾದ್ಯಂತ ಆಚರಿಸುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ಕರ್ನಾಟಕವೂ ಮೊದಲ ಹಂತದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸದ 84 ಕೈದಿಗಳನ್ನು ರಾಜ್ಯ ಕಾರಾಗೃಹ ಇಲಾಖೆ ಗುರುತಿಸಿದ್ದು, ಅವರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಲ್ಕು ಮಹಿಳಾ … Continued