ಕಾಲುವೆಗೆ ಉರುಳಿದ ಕಾರು: ಇಬ್ಬರ ಸಾವು, ಒಬ್ಬ ಪಾರು

ಅಥಣಿ : ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿ ರಡ್ಡೇರಹಟ್ಟಿ ಗ್ರಾಮದ ಕರಿಮಸೂತಿ ಲಿಫ್ಟ್ ನೀರಾವರಿ ಕಾಲುವೆಗೆ ಮೂವರು ಪ್ರಯಾಣಿಸಿದ್ದ ಕಾರು ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನೀರಿನಲ್ಲಿ ಮುಳುಗಿದ ಕಾರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ರಡ್ಡೇರಹಟ್ಟಿ … Continued

ಕುಮಟಾ: ಹೆಂಡತಿ, ಮಗನನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಮಟಾ:  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಂಗಣೆಯಲ್ಲಿ ಗುರುವಾರ ತಡರಾತ್ರಿ, ಹೆಂಡತಿ ಮತ್ತು ಮಗನನ್ನು ಕೊಂದ ನಂತರ ಗಂಡ ಆತ್ಮಹತ್ಯೆ ಮಾಡಿಕೊಂಡ ನಡೆದ ವರದಿಯಾಗಿದೆ. ಕೊಲೆಯಾದವರನ್ನು ತಾಕಿ ಮರಾಠಿ (35) ಹಾಗೂ ಲಕ್ಷ್ಮಣ ಮರಾಠಿ (12) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರಾಮ ಮರಾಠಿ (40) ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Continued

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್​ನಲ್ಲಿ ಹೋಮ-ಹವನ

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆಯಾದ ನಗರದ ಉಣಕಲ್ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಶುಕ್ರವಾರ ಸುದರ್ಶನ ಹೋಮ ಮಾಡಲಾಯಿತು. ಚಂದ್ರಶೇಖರ್​ ಗುರೂಜಿ ಹತ್ಯೆ ನಡೆದ ಸ್ಥಳದಲ್ಲೇ ಹೋಮ-ಹವನ ನಡೆಸಲಾಗಿದೆ. ಗುರೂಜಿ ಹತ್ಯೆಯಿಂದ ಹೋಟೆಲ್​ನಲ್ಲಿ ಆತಂಕ ನಿರ್ಮಾಣವಾಗಿತ್ತು. ಭಯ ದೂರ ಮಾಡಿ, ಹೋಟೆಲ್ ಶುದ್ಧಗೊಳಿಸಲು ಸುದರ್ಶನ ಹೋಮ ಮಾಡಲಾಗಿದೆ. ನಗರದ ಉಣಕಲ್ ಕೆರೆ … Continued

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡದ ನಟ ಜಗ್ಗೇಶ ಅವರು ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ ಕನ್ನಡ ಭಾಷೆಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇವೇಳೆ ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯವರಾದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್, ಲೆಹರ್ ಸಿಂಗ್ ಹಾಗೂ … Continued

ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued

ಕೆಪಿಸಿಸಿಯಲ್ಲಿ ಪ್ರಿಯಾಂಕ್ ಖರ್ಗೆ, ನಾಗರಾಜ್ ಯಾದವ್‌ಗೆ ಮಹತ್ವದ ಹೊಣೆಗಾರಿಕೆ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಚೇರ್ಮನ್‌ ಆಗಿ ಪ್ರಿಯಾಂಕ್ ಖರ್ಗೆ ಹಾಗೂ ಪಕ್ಷದ ಮುಖ್ಯ ವಕ್ತಾರರನ್ನಾಗಿ ನಾಗರಾಜ್ ಯಾದವ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ. ಈ ಸಂಬಂಧ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಕೆ.ಸಿ. ವೇಣುಗೋಪಾಲ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. … Continued

ಭಾರೀ ವರುಣಾರ್ಭಟ: ಈ ಎರಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ, ಶನಿವಾರ (ಜುಲೈ 8 ಮತ್ತು 9 ) ಈ ಎರಡು ಜಿಲ್ಲೆಗಳ ಎಲ್ಲ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ … Continued

ತಮ್ಮ ವಿರುದ್ಧದ ಟೀಕೆಗಳನ್ನು ತೆಗೆದು ಹಾಕಲು ಕೋರಿ ಮೆಟ್ಟಿಲೇರಿದ ಎಸಿಬಿ ಎಡಿಜಿಪಿ

ಬೆಂಗಳೂರು: ತಮ್ಮ ವಿರುದ್ಧ ಇತ್ತೀಚೆಗೆ ಹೈಕೋರ್ಟ್‌ ನ್ಯಾಯಮೂರ್ತಿಗಳು ಮಾಡಿರುವ ಮೌಖಿಕ ಟೀಕೆಗಳನ್ನು ತೆಗೆದುಹಾಕುವಂತೆ ಹಾಗೂ ಮುಂದಿನ ದಿನಗಳಲ್ಲಿ ತಮ್ಮ ವಿರುದ್ಧ ಯಾವುದೇ ಟೀಕೆ ಮಾಡದಂತೆ ಮತ್ತು ತಮ್ಮ ಸೇವಾ ದಾಖಲೆಯನ್ನು ಸಲ್ಲಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಸೀಮಂತ್‌ ಕುಮಾರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಬೃ ಅಂಡ್‌ ಬೆಂಚ್‌ … Continued

ಉತ್ತರ ಕನ್ನಡ ಜಿಲ್ಲೆ ಕ್ಯಾಸಲ್ ರಾಕ್‌ನಲ್ಲಿ 25 ಸೆಂಮೀ ದಾಖಲೆ ಮಳೆ: ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜುಲೈ 8ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 204 ಮಿಮೀ ಮಳೆ ಬೀಳುವ ಸಂಭವ ಇದೆ. ಅಲ್ಲದೆ, ಈ ಭಾಗಗಳಲ್ಲಿ ಜುಲೈ 9, 10ರಂದು ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. … Continued

ಭಾರೀ ಮಳೆ ಮುನ್ಸೂಚನೆ :ನಾಳೆ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ

ಕಾರವಾರ: ನಾಳೆ, ಶುಕ್ರವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ  ಶಾಲಾ ಕಾಲೇಜುಗಳಿಗೆ ಜುಲೈ 8ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, … Continued