ಕಾಳಿ ನದಿಯಲ್ಲಿ ಸತ್ತುಬಿದ್ದ ಸ್ಥಿತಿಯಲ್ಲಿ ಮೊಸಳೆ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಕ್ಕೆ ಹತ್ತಿರವಾದ ಬೈಲಪಾರ- ಐಪಿಎಂ ಹತ್ತಿರದ ಕಾಳಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಸತ್ತುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ನದಿಯಲ್ಲಿ ಮೊಸಳೆ ಏನು ಮಾಡಿದರೂ ಚಲಿಸದ ಸ್ಥಿತಿಯಲ್ಲಿ ಕಂಡುಬಂದಿದ್ದರಿಂದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೊಸಳೆಯು … Continued

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳಗಾವಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೇವಲ ನಾಲ್ಕು ಗಂಟೆ ಅವಧಿಯಲ್ಲಿ ರಾಮದುರ್ಗ ಪೊಲೀಸರು ಮುಳ್ಳೂರು ಘಾಟ್ ಬಳಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಘಟನೆ ನಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾರಲ್ಲಿ ಮುಂಬೈಗೆ ಪರಾರಿಯಾಗುತ್ತಿದ್ದ ಇಬ್ಬರು ಕೊಲೆ ಆರೋಪಿಗಳಾದ ಧಾರವಾಡದ ಮಹಾಂತೇಶ ಶಿರೂರ ಮತ್ತು ಕಲಘಟಗಿಯ ಮಂಜುನಾಥ ಎಂಬವರನ್ನು ಮೊಬೈಲ್ ಲೋಕೇಷನ್ ಆಧರಿಸಿ … Continued

ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ನಾಳೆ ಜುಲೈ 6ರಂದು ಸಹ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದಂತೆ ಇಂದು, ಮಂಗಳವಾರ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆಯುತ್ತಿರುವುದರಿಂದ ನಾಳೆ ಬುಧವಾರ ಸಹ ಅಂಗನವಾಡಿ, … Continued

ಪೌರಕಾರ್ಮಿಕರ ನೇಮಕ ಮಾಡಲು ಸಮಿತಿ ರಚಿಸಲು ತೀರ್ಮಾನಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ದಿನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ವಿಶೇಷ ನೇಮಕಾತಿ ನಿಯಮಗಳಿಗೆ ಮಾರ್ಗಸೂಚಿ ರೂಪಿಸಲು ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ಸಫಾಯಿ ಕರ್ಮಚಾರಿ ನಿಗಮದ … Continued

ನಾಳೆ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಸುಳ್ಳ ರಸ್ತೆಯಲ್ಲಿ ಇರುವ ಅವರ ಹೊಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸುಳ್ಳ ರಸ್ತೆಯಲ್ಲಿನ ಚಂದ್ರಶೇಖರ ಗುರೂಜಿ ಅವರಿಗೆ ಸೇರಿದ ಹೊಲದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ ಎಂದು ಗುರೂಜಿ ಆಪ್ತರೂ ಆಗಿರುವ ವಿಧಾನಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ತಿಳಿಸಿದರು ಹಾಗೂ … Continued

ಕರ್ನಾಟಕದ ಈ ಜಿಲ್ಲೆಗಳು, ಗೋವಾದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಹಾಗೂ ಗೋವಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಜುಲೈ 7ರಿಂದ 9ರ ವರೆಗೆ ಕರಾವಳಿ ಕರ್ನಾಟಕ; ಜುಲೈ … Continued

ಚಂದ್ರಶೇಖರ ಗುರೂಜಿ ಕೊಲೆ ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಹಾಂತೇಶ ಶಿರೂರು, ಮಂಜುನಾಥ ದುಮ್ಮವಾಡ ಎಂದು ಹೇಳಲಾಗಿದೆ. ಹತ್ಯೆ ನಂತರ ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿದ್ಯಾನಗರ ಪೊಲೀಸರು ರಾಮದುರ್ಗದ ಬಳಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿಗಳನ್ನು … Continued

ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಚಾಕುವಿನಿಂದ ಇರಿದು ಮಂಗಳವಾರ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್‌ ಕರೆ ಸಮೀಪವಿರುವ ಹೋಟೆಲ್​ನಲ್ಲಿ ಚಂದ್ರಶೇಖರ ತಂಗಿದ್ದರು. ದುಷ್ಕರ್ಮಿಗಳು ಚಾಕು ಹಿಡಿದು ಹೋಟೆಲ್​ನಿಂದ ಪರಾರಿಯಾಗುತ್ತಿರುವ … Continued

ಸುಳ್ಳು ಹೇಳಿ ಸಾಲ ತೆಗೆದುಕೊಳ್ತಾನೆ, ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ : ಪ್ರಕಟಣೆ ನೀಡಿದ ಮಾಜಿ ಶಾಸಕ ವಿ.ಎಸ್.ಪಾಟೀಲ

ಕಾರವಾರ: ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ನನ್ನ ಮಗ ತೆಗೆದುಕೊಳ್ಳುತ್ತಿದ್ದಾನೆ. ಈತನಿಗೆ ಯಾರೂ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ ಹಾಗೂ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ (NWKSRTC) ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರಕಟಣೆ ನೀಡುವ ಮೂಲಕ ಮನವಿ ಮಾಡಿದ್ದಾರೆ. ಈ ಕುರಿತು ತಮ್ಮ ಲೆಟರ್ ಹೆಡ್ ನಲ್ಲಿಯೇ ಪ್ರಕಟಣೆ ನೀಡಿರುವ ಅವರು, ನನ್ನ ಮಗ ಬಾಪೂಗೌಡ … Continued

ಗ್ರಾಮ ಪಂಚಾಯತ ಸದಸ್ಯನ ಭೀಕರ ಕೊಲೆ

ಹುಬ್ಬಳ್ಳಿ: ರಾಯನಾಳ ಗ್ರಾಮ ಪಂಚಾಯತ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಸೋಮವಾರ ರಾತ್ರಿ ರಾಯನಾಳ ಬಳಿ ನಡೆದ ಬಗ್ಗೆ ವರದಿಯಾಗಿದೆ. ರಾಯನಾಳ ಗ್ರಾ.ಪಂ ಸದಸ್ಯ ಗಂಗಿವಾಳ ಗ್ರಾಮದ ದೀಪಕ ಪಟದಾರಿ ಎಂಬವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದು, ಹಳೆ ದ್ವೇಷ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆಂದು ಪೊಲೀಸ್ ಮೂಲಗಳು ಶಂಕಿಸಿವೆ, ತನಿಖೆ ಚುರುಕುಗೊಳಿಸಲಾಗಿದೆ. ದೀಪಕಕುಟುಂಬದವರ ವಿರೋಧಗಳ … Continued