ರಾಜ್ಯದ ಹಲವೆಡೆ ಜುಲೈ 1ರ ವರೆಗೆ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ಜೂನ್‌ 29ರಿಂದ ಜುಲೈ 1ರ ವರೆಗೆ ಕರಾವಳಿ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಜೂನ್‌ 30ರಿಂದ ಜುಲೈ 1ರ ವರೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ … Continued

ಸಹಾಯಧನ ನೀಡುವ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ: ಸರ್ಕಾರದ ಆದೇಶ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ( Kashi Yatra ) ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ … Continued

ವಿವಾದಿತ ಪಠ್ಯಗಳ ಪರಿಷ್ಕರಣೆಗೆ ಸರ್ಕಾರದ ಆದೇಶ: ಕೈ ಬಿಟ್ಟ ಅಂಶಗಳ ಸೇರ್ಪಡೆ

ಬೆಂಗಳೂರು : ರೋಹಿತ್​ ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆ ವಿವಾದದಿಂದ ಭುಗಿಲೆದ್ದಿದ್ದ ಪಠ್ಯ ವಿವಾದಕ್ಕೆ ಸರ್ಕಾರ ತೆರೆ ಎಳೆದಿದ್ದು ಕೆಲವೊಂದಷ್ಟಕ್ಕೆ ತಿದ್ದುಪಡಿ ಮಾಡಲು ಆದೇಶ ಹೊರಡಿಸಿದೆ. ವಿವಾದಿತ 8 ಅಂಶಗಳು ತಿದ್ದುಪಡಿಯಾಗಲಿದ್ದು, ಮಕ್ಕಳ ವಯೋಮಾನ ಮೀರಿದ ಪಠ್ಯ ಬೋಧನೆಯನ್ನು ಕೈಬಿಡಲು ಸುತ್ತೋಲೆ ಹೊರಡಿಸಲಾಗಿದೆ. ಅಲ್ಲದೆ, ಬಿಟ್ಟುಹೋದ ಕೆಲವು ವಿಷಯಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುತ್ತಿದೆ. ಸ್ವಾಮೀಜಿಗಳು, ಸಂಘ … Continued

ಕಾರವಾರ: ನೈಲಾನ್ ಬಲೆ ನುಂಗಿ ಬೃಹತ್‌ ಡಾಲ್ಫಿನ್ ಸಾವು | ವೀಕ್ಷಿಸಿ

ಕಾರವಾರ: ಇಲ್ಲಿನ ದೇವಭಾಗ ಕಡಲತೀರದಲ್ಲಿ ಡಾಲ್ಫಿನ್ ಮೃತ ದೇಹ ಸೋಮವಾರ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಡಾಲ್ಫಿನ್ ಹೊಟ್ಟೆಯಲ್ಲಿ ನೈಲಾನ್ ಬಲೆ ಇರುವುದು ಪತ್ತೆಯಾಗಿದೆ ಮೀನಿನ ಬಲೆ ನುಂಗಿದ ಪರಿಣಾಮ ಡಾಲ್ಪಿನ್ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ. ದೇವಭಾಗ್ ಕಡಲ ತೀರದಲ್ಲಿ ಪತ್ತೆಯಾದ ಡಾಲ್ಫಿನ್ ಮೃತ ದೇಹ ಗಂಡಾಗಿದ್ದು ಸುಮಾರು 7.5 ಫೀಟ್ ಉದ್ದವಿದೆ. ಇಂಡೋ ಪೆಸಿಫಿಕ್ ಹಮ್ … Continued

ಎಲ್ಲೆಂದರಲ್ಲಿ ವಾಹನ ತಡೆಯುವ ಹಾಗಿಲ್ಲ, ಪೊಲೀಸರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗಾಗಿ ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸುವಂತಿಲ್ಲ. ಕೇವಲ ಟ್ರಾಫಿಕ್ ರೂಲ್ಸ್‌ ಅನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಅನಗತ್ಯವಾಗಿ ವಾಹನಗಳ ತಡೆದು ಪರಿಶೀಲನೆ … Continued

16 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿಯಾಗಿದ್ದ ಶ್ರೀನಾಥ್ ಮಹದೇವ ಜೋಷಿ ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಲೋಕಾಯುತ್ತದ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಸಂಚಾರ ಪೊಲೀಸ್ ನ ಪೂರ್ವ ಡಿಸಿಪಿ ಕೆ.ಎಂ ಶಾಂತರಾಜು ಅವರನ್ನು ಬೆಸ್ಕಾಂ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿಯುಕ್ತಿಯ … Continued

ವಿಚಿತ್ರ…ತನಗೆ ಹೊಡೆದವರನ್ನು ಮಾತ್ರ ಬೆನ್ನು ಬಿಡದೆ ಅಟ್ಟಾಡಿಸಿಕೊಂಡು ಹೋಗುವ ದೇವಿಯ ಹರಕೆಯ ಕೋಣ…!

ಕೊಪ್ಪಳ: ವಿಚಿತ್ರ ಘಟನೆಯೊಂದರಲ್ಲಿ ಕೊಪ್ಪಳ ಜಿಲ್ಲೆಯ ಶ್ರೀಕಂಟೆಮ್ಮ ದುರ್ಗಾ ದೇವಿಯ ಹರಕೆಯ ಕೋಣವೆಂದರೆ ಎಲ್ಲರೂ ಹೆದರುತ್ತಾರೆ…! ಕೊಪ್ಪಳ ತಾಲೂಕಿನ ಹಳೇ ಬಂಡಿಹರ್ಲಾಪುರ ಗ್ರಾಮದ ಈ ಹರಕೆಯ ಕೋಣ, ತನಗೆ ಬೈದು ಹೊಡೆದವರನ್ನು ಹಿಡಿದು ಬಿಡದೆ ಕಾಡುತ್ತದೆಯಂತೆ. ಜಿಲ್ಲೆಯಲ್ಲಿರುವ ಪ್ರಸಿದ್ಧ ದೇವರಾದ ಶ್ರೀಕಂಟೆಮ್ಮ ದುರ್ಗಾ ದೇವಿಯ ಹರಕೆಗೆಂದು ಕೋಣವನ್ನು ಬಿಡಲಾಗಿದೆ.. ಈ ಕೋಣ ಗ್ರಾಮದಲ್ಲಿ ಮೇವು ತಿನ್ನುತ್ತಿದ್ದ … Continued

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಜುಲೈ 15ರ ವರೆಗೆ ಗಡುವು

ಹುಬ್ಬಳ್ಳಿ: ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಜುಲೈ 15ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು ಎಂಬ ನಿರ್ಣಯವನ್ನು ಭಾನುವಾರ ಹುಬ್ಬಳ್ಳಿಯಲ್ಲಿನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ … Continued

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಶವ ತಂದಿಟ್ಟು ಪ್ರತಿಭಟನೆ

ಬೆಳಗಾವಿ : ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವಂತೆ ಒತ್ತಾಯಿಸಿ ಶವ ತಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಗೆ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಶವದೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಹಾಗೂ ತಕ್ಷಣವೇ ದಾರಿ ಮಾಡಿಕೊಡುವಂತೆ … Continued

ಮಂಗಳೂರು: ಮುಳುಗಿದ ಸರಕು ಸಾಗಣೆ ಹಡಗಿನಿಂದ ತೈಲ ಸೋರಿಕೆ ಸಾಧ್ಯತೆ, ಮುನ್ನೆಚ್ಚರಿಕೆಯಾಗಿ ಕೋಸ್ಟ್ ಗಾರ್ಡ್‌ನಿಂದ ನಿಗಾ

ಮಂಗಳೂರು: ನವ ಮಂಗಳೂರಿನ ಎಂವಿ ಪ್ರಿನ್ಸೆಸ್ ಮಿರಾಲ್ ಎಂಬ ಮುಳುಗಿದ ವ್ಯಾಪಾರಿ ಹಡಗಿನಿಂದ ತೈಲ ಸೋರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಪರಿವೀಕ್ಷಣೆ ಮುಂದುವರೆಸಿದೆ. ಎರಡು ದಿನಗಳ ಹಿಂದೆ ಹಡಗು ಮುಳುಗಿತ್ತು. ಜೂನ್ 21 ರಿಂದ ಮಾಲಿನ್ಯದ ಮುನ್ನೆಚ್ಚರಿಕೆ ಕ್ರಮವಾಗಿ ಹಡಗಿನ ಸುತ್ತಲಿನ ಪ್ರದೇಶದಲ್ಲಿ ಮತ್ತು ಕಡಲತೀರದ ಕೋಸ್ಟ್ ಗಾರ್ಡ್ ವಿಮಾನಗಳು ಮತ್ತು ಹಡಗುಗಳಿಂದ … Continued