ಕನ್ನಡದ ಖ್ಯಾತ ನಟ ಉಮೇಶ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಪೋಷಕ ನಟರಾದ ಎಂ.ಎಸ್‌.ಉಮೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 80 ವರ್ಷ ವಯಸ್ಸಿನವರಾದ ಉಮೇಶ ಅವರು ಮನೆಯಲ್ಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವ ನಟ ಉಮೇಶ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.‌ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ಸ್ಟೇಟ್ ನ್ಯಾಚರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ (ಕೆಎಸ್‌ಎನ್‌ಡಿಎಂಸಿ) ಐದು ದಿನಗಳ ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 10ರಂದು 12 ಜಿಲ್ಲೆಗಳಲ್ಲಿ ಮಳೆಯಾಗುವ (Hevay Rain) ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಎಸ್‌ಎನ್‌ಡಿಎಂಸಿ ಪ್ರಕಾರ, ಅಕ್ಟೋಬರ್ 10ರಂದು ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ … Continued

ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಹಗರಣ : 50 ಕೋಟಿ ರೂ.ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶಕ್ಕೆ ಪಡೆದ ಇ.ಡಿ.

ನವದೆಹಲಿ: ಬಂಧಿತ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರ ಕೆಲವರು ಭಾಗಿಯಾಗಿದ್ದಾರೆ ಎನ್ನಲಾದ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಹೊಸದಾಗಿ ನಡೆಸಿದ ಶೋಧದ ಸಮಯದಲ್ಲಿ 50.33 ಕೋಟಿ ರೂ. ಮೌಲ್ಯದ ಸುಮಾರು 40 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಎರಡು ಲಾಕರ್‌ಗಳಿಂದ 24 ಕ್ಯಾರೆಟ್ … Continued

ಅನ್ನಭಾಗ್ಯ ಯೋಜನೆ ; ಇನ್ಮುಂದೆ 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ; ಅದರಲ್ಲಿ ಏನೇನು ಇರಲಿದೆ..?

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಇನ್ಮುಂದೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಹಾಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ ಕೇಂದ್ರದಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯದಿಂದ 5 ಕೆಜಿ ಅಕ್ಕಿ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ 5 ಕೆಜಿ … Continued

ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಗುಡ್‌ನ್ಯೂಸ್‌ : ವೇತನ ಸಹಿತ ಮುಟ್ಟಿನ ರಜೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ವೇತನ ಸಹಿತ ಮುಟ್ಟಿನ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಇಂದು, ಗುರುವಾರಸಚಿವ ಸಂಪುಟ … Continued

ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued

ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ

ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟು ಪತಿ ನಾಪತ್ತೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು ,ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಇನ್ನು ಮೂರು ದಿನ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಕ್ಟೋಬರ್ 10 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಎರಡು ದಿನ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಅಕ್ಟೋಬರ್ … Continued

ಆರ್‌ ಎಸ್‌ ಎಸ್ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಪ್ರೊ.ಕೃ. ನರಹರಿ ನಿಧನ

ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಪ್ರೊ. ಕೃ. ನರಹರಿ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಂದು, ಬುಧವಾರ (ಅಕ್ಟೋಬರ್‌ 8) ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಪ್ರಮುಖರು ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ … Continued

ತುಮಕೂರು : ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು

ತುಮಕೂರು : ಜಿಲ್ಲೆಯ ಕುಣಿಗಲ್‌ನಲ್ಲಿರುವ ಮಾರ್ಕೊನಹಳ್ಳಿ ಡ್ಯಾಂ (Markonahalli Dam) ಹಿನ್ನೀರಿನಲ್ಲಿ 6 ಮಂದಿ ಕೊಚ್ಚಿ (Drowned) ಹೋಗಿದ್ದಾರೆ ಎಂದು ವರದಿಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಒಂದೇ ಕುಟುಂಬದ ಏಳು ಸದಸ್ಯರು ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತುಮಕೂರು ನಗರದ ಬಿ.ಜಿ. ಪಾಳ್ಯದ … Continued