ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಶಾವಿಗೆ ಸಂಡಿಗೆ ಒಣಗಿಸ್ತಾರೆ…!

ಬೆಳಗಾವಿ : ಶಕ್ತಿ ಕೇಂದ್ರ ಎನಿಸಿಕೊಂಡಿರುವ ಸುವರ್ಣ ವಿಧಾನಸೌಧದ ಬಾಗಿಲಲ್ಲಿ ಈಗ ಶಾವಿಗೆ, ಸಂಡಿಗೆ ಒಣ ಹಾಕಿರುವುದು ಭಾರೀ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಈಗ ಸದ್ದು ಮಾಡುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ಸೌಧದ ಭದ್ರತೆಗೆ ನಿಯೋಜಿಸಲಾಗಿದ್ದರೂ ಅವರ ಕಣ್ತಪ್ಪಿಸಿ ಶಾವಿಗೆ ಒಣಗಿಸಿರುವುದು ಆದರೂ ಹೇಗೆ ಎನ್ನುವ ಪ್ರಶ್ನೆಗೆ ಕಾರಣವಾಗಿದೆ. ಇಷ್ಟರಲ್ಲೇ ಮಳೆಗಾಲ … Continued

ಹಾಸನ: ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು; ಆರೋಪಿಗಳ ಬೆರಳಚ್ಚು ಸಂಗ್ರಹಿಸಿದ ಪೊಲೀಸರು

ಹಾಸನ: ಸೋಮವಾರ, ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕದ ಹಾಸನದಲ್ಲಿ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಮಲೆಕಲ್ಲು ತಿರುಪತಿ ದೇವಸ್ಥಾನದ ವಸ್ತುಸಂಗ್ರಹಾಲಯದ ವಸ್ತುಪ್ರದರ್ಶನ ಕೇಂದ್ರದಲ್ಲಿ ವಿಗ್ರಹಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, 10 ಕ್ಕೂ ಹೆಚ್ಚು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಅರಸೀಕೆರೆ ತಾಲೂಕಿನಲ್ಲಿ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ … Continued

ಇಂದು ಕರ್ನಾಟಕ ಪ್ರವೇಶಿಸಿದ ಮನ್ಸೂನ್

ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಜೂನ್ 2ರಂದು ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಬಹುದು ಎಂದು ಹೇಳಿತ್ತು. ಆದರೆ, ಅದಕ್ಕೂ ಮುನ್ನವೇ ಇಂದು, ಮಂಗಳವಾರ ನೈಋತ್ಯ ಮಾನ್ಸೂನ್ ಮಳೆ ರಾಜ್ಯಕ್ಕೆ ಕಾಲಿಟ್ಟಿದ್ದು, ಸಿಹಿ ಸುದ್ದಿ ನೀಡಿದೆ. ಇತ್ತೀಚಿನ  ಮಾಹಿತಿ ಪ್ರಕಾರ, ಉತ್ತರ ಕನ್ನಡ ಮತ್ತು ರಾಜ್ಯದ ಕರಾವಳಿ ಪ್ರದೇಶಗಳು, ಬೆಂಗಳೂರು (ನಗರ ಮತ್ತು ಗ್ರಾಮಾಂತರ) ಮತ್ತು ಹಾಸನ, ಶಿವಮೊಗ್ಗ, … Continued

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಂದು, ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986ನೇ ಬ್ಯಾಂಕ್‌ ತಂಡದ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿ ಕೋರ್ಟ್ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮತ್ತು ಇತರರಿಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ. ಶಿವಕುಮಾರ್ ಜುಲೈ 1ರಂದು ಹಾಜರಾಗುವಂತೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಸೂಚಿಸಿದ್ದಾರೆ. ಶಿವಕುಮಾರ್ ಮತ್ತು … Continued

ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ ವಜಾ, ಬಸವರಾಜಪ್ಪ ನೂತನ ಅಧ್ಯಕ್ಷ

ಶಿವಮೊಗ್ಗ : ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು, ಮಂಗಳವಾರ ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದಿಂದ ನಡೆದ ಮಹತ್ವದ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ವಜಾ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ … Continued

ಜೂನ್ 2ರಿಂದ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಕರಾವಳಿ-ಮಲೆನಾಡು ಸೇರಿ 10 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಜೂನ್ 2 ಅಥವಾ ೩ಕ್ಕೆ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ ಹಾಗೂ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನೈರುತ್ಯ ಮಾನ್ಸೂನ್‌ ಮೇ 29 ರಂದು ಕೇರಳಕ್ಕೆ ಪ್ರವೇಶಿಸಿದ್ದು, ಜೂನ್ 2ರಿಂದ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಲಾಗಿದೆ. ಹೀಗಾಗಿ … Continued

ಮಂಡ್ಯದಲ್ಲಿ ಮಗಳ ಕೊಳೆತ ಶವದ ಜೊತೆ 4 ದಿನ ಕಳೆದ ತಾಯಿ…!

ಮಂಡ್ಯ: ನಾಲ್ಕು ದಿನದ ಹಿಂದೆ ಮೃತಪಟ್ಟ ಮಗಳ ಶವದ ಪಕ್ಕದಲ್ಲೇ ತಾಯಿ ಮಲಗಿರುವ ಘಟನೆ ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ಹೊಸ ತಮಿಳು ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾಲಹಳ್ಳಿ ಬಡಾವಣೆಯ ರೂಪಾ (30) ಎಂಬ ಮಹಿಳೆ ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ಮೃತಪಟ್ಟಿದ್ದರು. ಕಾರಣ ತಿಳಿದಿಲ್ಲ. ಆದರೆ ಮಗಳ ಶವದ ಮುಂದೆಯೇ ತಾಯಿ ನಾಗಮ್ಮ … Continued

ರಾಜ್ಯಸಭೆ ಚುನಾವಣೆ : ಬಿಜೆಪಿಯಿಂದ ಮೂರನೇ ಅಭ್ಯರ್ಥಿಯ ಘೋಷಣೆ…!

ಬೆಂಗಳೂರು: ರಾಜ್ಯಸಭೆಯ ಚುನಾವಣೆ ರಂಗೇರಿದ್ದು, ದಿನಕ್ಕೊಂದರಂತೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರ ಮತ್ತೊಂದು ಮಜಲು ಎಂಬಂತೆ ಕಾಂಗ್ರೆಸ್‌ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಈಗ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ..! ರಾಜ್ಯಸಭೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಯನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಲೆಹರ್​ ಸಿಂಗ್ ಹೆಸರನ್ನು ಪಕ್ಷ ಘೋಷಣೆ ಮಾಡಿದೆ. ಜೆಡಿಎಸ್​ ತನ್ನ ಅಭ್ಯರ್ಥಿಯನ್ನು ದಿಢೀರ್ … Continued

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಬಿಜೆಪಿ ಸರ್ಕಾರವು ಕೋಮು ದ್ವೇಷವನ್ನು ಬಿತ್ತುತ್ತಿರುವವರ ಮೇಲೆ, ಆಟಾಟೋಪ ಮಾಡುವವರ ಮೇಲೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ʼ ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದಲ್ಲಿ ಅವರು ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಬರೆದಿದ್ದಾರೆ. ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ … Continued