ತರಗತಿಯಲ್ಲಿ ಹಿಜಾಬ್ ಇಲ್ಲ: ಮೊದಲು ಕೌನ್ಸೆಲಿಂಗ್ ಮಾಡಿ, ನಂತರವೂ ಹಿಜಾಬ್‌ ಬೇಕೆನ್ನುವವರಿಗೆ ಬೇರೆ ಕಾಲೇಜಿನಲ್ಲಿ ಪ್ರವೇಶ :ಮಂಗಳೂರು ವಿವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮುಸ್ಲಿಂ ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ ಮರುದಿನ, ಉಪಕುಲಪತಿ ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಈ ವಿದ್ಯಾರ್ಥಿನಿಯರಿಗೆ ಇತರ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ನಿರ್ಧಾರವನ್ನು ಬದಲಾಯಿಸುವ ಭರವಸೆಯಲ್ಲಿ ಕಾಲೇಜು ಮುಸ್ಲಿಂ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನೀಡುತ್ತದೆ ಎಂದು ಅವರು ಶುಕ್ರವಾರ ತಿಳಿಸಿದರು. ಆದರೆ, … Continued

ವಂದಿತಾ ಶರ್ಮಾ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31ರಂದು ನಿವೃತ್ತರಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಪಂಜಾಬ್ ಮೂಲದ ವಂದಿತಾ ಶರ್ಮಾ ಅವರು ಕರ್ನಾಟಕದ 39ನೇ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಅಲ್ಲದೆ, … Continued

ಕಲಬುರಗಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

ಕಲಬುರಗಿ: ವಾಡಿಯಲ್ಲಿ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ.ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವಿಜಯ್​ ಕಾಂಬಳೆ (28) ಭೀಕರವಾಗಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ ವಿಜಯ ಕಾಂಬಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ … Continued

ಕಾರವಾರ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರ ವಿಹಾರ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಾರವಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ಐಎನ್‌ಎಸ್ ಖಂಡೇರಿಯಲ್ಲಿ ಸಮುದ್ರಯಾನ ಕೈಗೊಂಡರು. INS ಖಂಡೇರಿ ಭಾರತೀಯ ನೌಕಾಪಡೆಯ ಅತ್ಯಂತ ಪ್ರಬಲವಾದ ಪ್ಲಾಟ್‌ಫಾರ್ಮ್‌ನಲ್ಲಿ ಒಂದಾಗಿದೆ. ಅತ್ಯಾಧುನಿಕ ಕಲ್ವರಿ ದರ್ಜೆಯ ಜಲಾಂತರ್ಗಾಮಿ ನೌಕೆಯ ಯುದ್ಧ ಸಾಮರ್ಥ್ಯಗಳು ಮತ್ತು ಆಕ್ರಮಣಕಾರಿ ಸಾಮರ್ಥ್ಯದ ಬಗ್ಗೆ ರಾಜನಾಥ್ ಸಿಂಗ್ … Continued

ಡಬ್ಲ್ಯುಇಎಫ್ ಸಭೆಯಲ್ಲಿ ಕರ್ನಾಟಕ 65,000 ಕೋಟಿ ರೂ. ಖಾತ್ರಿ ಹೂಡಿಕೆಯನ್ನು ಆಕರ್ಷಿಸಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಭಾಗವಹಿಸುವ ಮೂಲಕ ಸುಮಾರು 65,000 ಕೋಟಿ ರೂಪಾಯಿಗಳ ಹೂಡಿಕೆ ಸೆಳೆಯುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಮತ್ತು ವಿಶ್ವ ಆರ್ಥಿಕ ವೇದಿಕೆ ಸಭೆ ಯಶಸ್ವಿಯಾಗಿದೆ ಎಂದು ಅವರು ಹೇಳಿದರು, ದಾವೋಸ್ … Continued

ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮೇ 24ರಂದು ನಾಮಪತ್ರ ಸಲ್ಲಿಸಲು … Continued

ತನ್ನ ಐಷಾರಾಮಿ ಕಾರನ್ನು ತಾನೇ ಕಾವೇರಿ ನದಿಯಲ್ಲಿ ಮುಳುಗಿಸಿದ ವ್ಯಕ್ತಿ…!

ಶ್ರೀರಂಗಪಟ್ಟಣ: ವ್ಯಕ್ತಿಯೊಬ್ಬ ತನ್ನದೇ ದುಬಾರಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಘಟನೆ ಬುಧವಾರ ರಾತ್ರಿ ನಡೆದ ವರದಿಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಮರುದಿನ ಪೊಲೀಸರು ಹರಸಾಹಸಪಟ್ಟು ಕಾರನ್ನು ನೀರಿನಿಂದ ಹೊರ ತೆಗೆದಿದ್ದಾರೆ. ಕಾರಿನ ಮಾಲಕನನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಿವಾಸಿ ರೂಪೇಶ್ ಎಂದು ಗುರುತಿಸಲಾಗಿದ್ದು, ಬುಧವಾರ ರಾತ್ರಿ ಕಾರು ಚಲಾಯಿಸಿಕೊಂಡು … Continued

ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ

ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು … Continued

ಬೆಳಗಾವಿ: ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಡಿಕ್ಕಿ ಹೊಡೆದ  ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಮೃತರನ್ನು … Continued

ಬೆಳಗಾವಿ: ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್‌ನವರಿಂದ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಗೂಂಡಾಗಳು ಪುಂಡಾಟಿಕೆ ಮುಂದುವರೆಸಿದ್ದು ಮದುವೆ ಸಮಾರಂಭದಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾಮಣೆ ಗ್ರಾಮದಲ್ಲಿ ನಡೆದ ಬಗ್ಗೆ ಆರೋಪ ಕೇಳಿಬಂದಿದೆ. ತಾಲೂಕಿನ ದಾಮಣೆ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಘಟನೆಯಲ್ಲಿ … Continued