ಬೆಂಗಳೂರು : ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ

ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಪತ್ರಕರ್ತ ಹಾಗೂ ಲೇಖಕ ಥಯ್ಯಲ್ ಜಾಕೋಬ್ ಸೋನಿ ಜಾರ್ಜ್(ಟಿಜೆಎಸ್‌ ಜಾರ್ಜ್‌) ಅವರು ಶುಕ್ರವಾರ (ಅಕ್ಟೋಬರ್ 3) ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟಿಜೆಎಸ್ ಜಾರ್ಜ್ 1928ರ ಮೇ 7ರಂದು ಕೇರಳದಲ್ಲಿ ಪತ್ತನಂತಿಟ್ಟ ಜಿಲ್ಲೆಯ ತುಂಬಮಣಿ ಎಂಬಲ್ಲಿ ಜನಿಸಿದ್ದರು. … Continued

ಶಿವಮೊಗ್ಗ: ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಶಿವಮೊಗ್ಗ: ತಾಯಿಯೇ ಮಗಳನ್ನು ಕೊಂದ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ನರ್ಸ್ ಕ್ವಾರ್ಟಸ್​ನಲ್ಲಿ ನಡೆದಿದೆ ಎಂದು ಶುಕ್ರವಾರ ವರದಿಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್​ನ ಟೆಕ್ನಿಷಿಯನ್ ಆಗಿರುವ ರಾಮಣ್ಣ ಎಂಬವರ ಪತ್ನಿ ಶೃತಿ(38) ತನ್ನ 11 ವರ್ಷದ ಮಗಳ ತಲೆಗೆ ಹೊಡೆದು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತ … Continued

ವಾಯುಭಾರ ಕುಸಿತ : ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ: ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಗಾಳಿ ಸಹಿತ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ವಾಯುವ್ಯ ಬಂಗಾಳ … Continued

ಕುಮಟಾ : ಇತಿಹಾಸ ತಜ್ಞ ಡಾ. ಎಲ್. ಜಿ. ಭಟ್ಟ ನಿಧನ

ಕುಮಟಾ : ನಿವೃತ್ತ ಪ್ರಾಧ್ಯಾಪಕ ಹಾಗೂ ಇತಿಹಾಸ ಮತ್ತು ಶಿಕ್ಷಣ ತಜ್ಞರಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಡಾ. ಎಲ್. ಜಿ. ಭಟ್ಟ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕಾರ್ಕಳದ ಭುವನೇಂದ್ರ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ ಅವರು ವರ್ಗಾವಣೆ ನಂತರ ಹೊನ್ನಾವರದ ಎಸ್. ಡಿ. ಎಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14ರಷ್ಟು ಏರಿಕೆ; ಬೆಂಗಳೂರಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲು…!

ಬೆಂಗಳೂರು : 2023 ರಲ್ಲಿ ಬೆಂಗಳೂರಿನಲ್ಲಿ ಭಾರತದಲ್ಲೇ ಅತಿ ಹೆಚ್ಚು ವರದಕ್ಷಿಣೆ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ 2023 ರಲ್ಲಿ ಒಟ್ಟು 1,013 ದೂರುಗಳು ದಾಖಲಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದ ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸಂಖ್ಯೆ ದೇಶದ 18 ಇತರ ಮೆಟ್ರೋ ನಗರಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳಿಗಿಂತ ಹೆಚ್ಚಾಗಿದೆ. ವರದಕ್ಷಿಣೆ … Continued

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಧಾರವಾಡ: ಕೋಡಿಮಠದ ಸ್ವಾಮೀಜಿಗಳು ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿಯ ವರೆಗೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವ ತೊಂದರೆ ಇಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಕಾರ್ಯಕ್ರಮಕ್ಕೆಂದು ಧಾರವಾಡಕ್ಕೆ ಆಗಮಿಸಿದ್ದಾಗ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರಾಜಕೀಯ ಬದಲಾವಣೆಗಳು ಕಂಡುಬರುವುದಿಲ್ಲ. ಕರ್ನಾಟಕದಲ್ಲಿ … Continued

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧನ

ಬೆಂಗಳೂರು : ಗಟ್ಟಿಮೇಳ ಧಾರಾವಾಹಿಯ ಮೂಲಕ ಕರ್ನಾಟಕದ ಜನರ ಮನಗೆದ್ದಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಟಿ ಕಮಲಶ್ರೀ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ಮಂಗಳವಾರ (ಸೆಪ್ಟೆಂಬರ್‌ 30) ಮೃತಪಟ್ಟಿದ್ದಾರೆ. ಕಮಲಶ್ರೀ ಅವರು ಜನಪ್ರಿಯ ಧಾರಾವಾಹಿಯಾದ ‘ಗಟ್ಟಿಮೇಳ’ ದಲ್ಲಿ ಅಜ್ಜಿಯ … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜ್ವರ ಕಾಣಿಸಿಕೊಂಡು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಖರ್ಗೆ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ತಡರಾತ್ರಿ ನಿರಂತರ ಜ್ವರ ಬಂದ ನಂತರ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ … Continued

ಮಹೇಶ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ … Continued