ಬಾಗಲಕೋಟೆ: ತಲೆಗೂದಲಿಗೆ ಬಣ್ಣ ಹಾಕುವ ದರದ ವಿಚಾರದಲ್ಲಿ ಜಗಳ, ಗ್ರಾಹಕನ ಎದೆಗೆ ಇರಿದು ಕೊಲೆ ಮಾಡಿದ ಕ್ಷೌರಿಕ

ಬಾಗಲಕೋಟೆ: ಸಲೂನ್​​​ನಲ್ಲಿ ತಲೆ ಕೂದಲಿಗೆ ಕಲರ್ ಹಾಕುವ ಬೆಲೆಯ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಗುರುವಾರ (ಮೇ 26) ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಸಾಗರ ಅವಟಿ (22) ಕೊಲೆಯಾದ ಯುವಕ ಎಂದು ಗರುತಿಸಲಾಗಿದೆ. ಸದಾಶಿವ ನಾವಿ ಕೊಲೆ ಮಾಡಿದ ಕ್ಷೌರಿಕ ಎಂದು ಹೇಳಲಾಗಿದೆ. ಈ ಘಟನೆ … Continued

ರಾಜ್ಯಸಭೆ ಅಥವಾ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಮೈತ್ರಿಯಿಲ್ಲ: ಸಿದ್ದರಾಮಯ್ಯ

ಕಾರವಾರ: ಮುಂಬರುವ ರಾಜ್ಯಸಭಾ ಚುನಾವಣೆ ಅಥವಾ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್ ನಡುವೆ ಯಾವುದೇ “ರಾಜಕೀಯ ಹೊಂದಾಣಿಕೆ ಇಲ್ಲ ಎಂದು ರಾಜ್ಯ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ರಾಜ್ಯ ವಿಧಾನಸಭೆಯಿಂದ ಆಯ್ಕೆಯಾಗುವ ನಾಲ್ಕನೇ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಮೂರು ಪಕ್ಷಗಳಲ್ಲಿ ಯಾವುದಕ್ಕೂ ಸಾಕಷ್ಟು ಮತಗಳಿಲ್ಲದ ಕಾರಣ ಅವರ ಹೇಳಿಕೆ … Continued

ಕುಂದಾಪುರದ ಯುವತಿ ವಿಷ ಸೇವಿಸಿ ಆತ್ಮಹತ್ಯೆ: ಇದಕ್ಕೆ ನಂಬಿಕೆ ದ್ರೋಹ, ಲವ್ ಜಿಹಾದ್ ಕಾರಣವೇ..?

ಉಡುಪಿ: ಕುಂದಾಪುರ ತಾಲೂಕು ತಲ್ಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಉಪ್ಪಿನ ಕುದ್ರು ಯುವತಿ, 25 ವರ್ಷ ವಯಸ್ಸಿನ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಕೋಟೇಶ್ವರದ ನಿವಾಸಿ ಅಜೀಜ್‌ (32), ಆತನ ಪತ್ನಿ ಸಲ್ಮಾ ಅಜೀಜ್‌ ಎನ್ನುವರು  ಕಾರಣ ಎಂದು ಶಿಲ್ಪಾ ಸಹೋದರ ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆ ಕುರಿತು ಸಮಗ್ರ ತನಿಖೆಗೆ … Continued

ರಾಜ್ಯ ಸಭಾ ಚುನಾವಣೆ: ಜೈರಾಮ ರಮೇಶ್ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ. ಮೇ 30ರಂದು ಜೈರಾಂ ರಮೇಶ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ಜೈರಾಂ ರಮೇಶ್‌ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿಯಿಂದ ಟಿಕೆಟ್‌ ಖಚಿತವಾದ ಬಳಿಕ ವರಿಷ್ಠರ ನಿರ್ದೇಶನದ … Continued

ನಾಳೆ ಸಚಿವಾಲಯ ಬಂದ್‌ಗೆ ಕರೆ ನೀಡಿದ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರ್ಕಾರ

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಶುಕ್ರುವಾರ ಸಚಿವಾಲಯ ಬಂದ್ ಕರೆ ನೀಡಿದ್ದು, ಇದೇವೇಳೆ ಸಿಬ್ಬಂದಿ ಪ್ರತಿಭಟನೆ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಚಿವಾಲಯದ ನೌಕರರ ಸಂಘ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಂಘ ಹಲವು ಬಾರಿ ಮನವಿಗಳನ್ನು … Continued

ದೇವೇಗೌಡರ ಜೊತೆ ತೆಲಂಗಾಣ ಸಿಎಂ ಕೆಸಿಆರ್‌ ಮಾತುಕತೆ: 3 ತಿಂಗಳು ಕಾಯಿರಿ, ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗುತ್ತೆ-ಕೆಸಿಆರ್‌

ಬೆಂಗಳೂರು: ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ಇನ್ನೂ ಮೂರು ತಿಂಗಳು ಕಾದು ನೋಡಿ ಎಂದು ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮಾಜಿ ಪ್ರಧಾನಿ ದೇವೇ ಗೌಡ ಅವರನ್ನು ಭೇಟಿಯಾದ ಬಳಿಕ ಗುರುವಾರ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ರಾಷ್ಟ್ರದ ಉಳಿವಿಗಾಗಿ ಸಮಾನ ಮನಸ್ಕರ ಮುಂದಿನ ನಡೆ, ಇನ್ನು 2-3 … Continued

ಬೆಂಗಳೂರಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ತೆಲಂಗಾಣ ಸಿಎಂ ಕೆಸಿಆರ್: ತೃತೀಯ ರಂಗ ಬಲವರ್ಧನೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಅವರು ಇಂದು, ಗುರುವಾರ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಮನೆಗೆ ಆಗಮಿಸಿದ ಚಂದ್ರಶೇಖರ ರಾವ್ ಅವರನ್ನು ಹೂ ಗುಚ್ಛ ನೀಡಿ … Continued

ಚಲಿಸುವ ರೈಲಿನಿಂದ ಇಳಿಯುವಾಗ ಆಯತಪ್ಪಿದ ವ್ಯಕ್ತಿಯನ್ನು ಎಳೆದೊಯ್ದ ರೈಲು, ತಕ್ಷಣವೇ ರಕ್ಷಿಸಿದ ಪೊಲೀಸರು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ರೈಲಿನಿಂದ ಇಳಿಯುತ್ತಿದ್ದ ಸಂದರ್ಭ ಆಯತಪ್ಪಿ ಬಿದ್ದು ರೈಲಿನೊಂದಿಗೆ ಎಳೆದುಕೊಂಡ ಹೋದ 70 ವರ್ಷದ ವ್ಯಕ್ತಿಯೊಬ್ಬನ ಪ್ರಾಣವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. ವ್ಯಕ್ತಿ ರೈಲಿನಲ್ಲಿ ಬಿದ್ದು ಸಿಕ್ಕಿಹಾಕಿಕೊಂಡಿರುವುದನ್ನು ನೋಡಿದ ಕಾನ್‌ಸ್ಟೆಬಲ್ ಸಜೀರ್ ತಕ್ಷಣ ಧಾವಿಸಿ ರೈಲು ನಿಲ್ದಾಣದಿಂದ ಹೊರಡುವ ಮೊದಲು ರಕ್ಷಿಸಿದ್ದಾರೆ. ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಪೆರ್ಡೂರು ನಿವಾಸಿ ಕುತ್ತಿ … Continued

ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ಇಲ್ಲಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರವುದನ್ನು ವಿರೋಧಿಸಿ ಮಂಗಳೂರಿನ ಹಂಪನ ಕಟ್ಟೆ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಹೈಕೋರ್ಟ್‌ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್‌ ಧರಿಸಿ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ದೆಹಲಿ ಕೋರ್ಟಿಗೆ ಚಾರ್ಜ್‌ಶೀಟ್ ಸಲ್ಲಿಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಅವರನ್ನು ಇಡಿ ಸೆಪ್ಟೆಂಬರ್ 3, … Continued