ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ನ ಸಭಾಪತಿ ಸ್ಥಾನ ಹಾಗೂ ಪರಿಷತ್‌ ಸ್ಥಾನಕ್ಕೆ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರು ಇಂದು, ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‌ಟಿ ನಗರದ ನಿವಾಸದಲ್ಲಿ ಸರಳ ಕಾರ್ಯಕ್ರಮದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ … Continued

ನಾಳೆ ಮಧ್ಯಾಹ್ನ 12:30ಕ್ಕೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ನಾಳೆ, ಮೇ 19ರಂದು ಪ್ರಕಟವಾಗಲಿದೆ. ಮಾರ್ಚ್ 28 ರಿಂದ ಏ.11ರ ವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ, ಮೇ 19ರಂದು ಮಧ್ಯಾಹ್ನ 12:30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶಕ್ಕಾಗಿ … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯರ ಬೀದಿ ಕಾಳಗ..! ರಸ್ತೆಯಲ್ಲೇ ಶಾಲಾ ಸಮವಸ್ತ್ರದಲ್ಲೇ ಹೊಡೆದಾಟ, ಕೂದಲು ಜಗ್ಗಾಟದ ದೃಶ್ಯ ವೀಡಿಯೊದಲ್ಲಿ ಸೆರೆ

ಬೆಂಗಳೂರಿನ ಶಾಲಾ ವಿದ್ಯಾರ್ಥಿನಿಯರ ಎರಡು ಗುಂಪುಗಳ ನಡುವಿನ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಒಬ್ಬರನ್ನೊಬ್ಬರು ಒದೆಯುವುದು, ಕೂದಲು ಹಿಡಿದು ಜಗ್ಗಾಡುವುದು, ನೂಕಾಡುವುದು, ಹೊಡೆಯುವುದು ಕಂಡುಬಂದಿದೆ. ಘಟನೆ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೊಡೆದಾಟದ ಕಾರಣವೂ ಅಧಿಕೃತವಾಗಿ ತಿಳಿದುಬಂದಿಲ್ಲ. ಗಮನಾರ್ಹ ವಿಷಯವೆಂದರೆ ಎಲ್ಲಾ ಹುಡುಗಿಯರು ಶಾಲೆಯ ಸಮವಸ್ತ್ರದಲ್ಲಿ … Continued

ರಾಜ್ಯದಲ್ಲಿ ವ್ಯಾಪಕ ಮಳೆ:ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ-ಸಚಿವ ಅಶೋಕ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೊಕ್ ಹೇಳಿದರು.. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹವಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಕೆಲವು ತುರ್ತುಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ … Continued

90ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು 90ನೆ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿದರು. ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಇಂದು, ಬುಧವಾರ ಬೆಳಿಗ್ಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿ … Continued

ಬೆಂಗಳೂರಿನಲ್ಲಿ ಭಾರೀ ಮಳೆ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮಳೆ ಆರ್ಭಟ ಮುಂದುವರೆದಿದೆ. ನಿನ್ನೆ, ಸೋಮವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಇಬ್ಬರು ಕಾರ್ಮಿಕರು ಸಾವಿಗೀಡಾದ ಬಗ್ಗೆ ವರದಿಯಾಗಿದೆ. ಉಲ್ಲಾಳ ಉಪನಗರದ ಉಪಕಾರ ಲೇಔಟ್‌ನಲ್ಲಿ ಪೈಪ್‌ ಲೈನ್ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಪೈಪ್‌ ಲೈನ್ ಕಾಮಗಾರಿ ಸ್ಥಳದಲ್ಲಿ ಮಳೆ ನೀರು ತುಂಬಿಕೊಂಡು ಇಬ್ಬರು ಕಾರ್ಮಿಕರು ಉಸಿರು ಕಟ್ಟಿ ಮೃತಪಟ್ಟಿದ್ದಾರೆ. ಮೂವರು … Continued

ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ. ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ … Continued

ಪಠ್ಯ ಪುಸ್ತಕದಲ್ಲಿ ಟಿಪ್ಪು ಬಿರುದಿಗೆ ಕತ್ತರಿ…!

ಬೆಂಗಳೂರು: ಒಂದರಿಂದ 10ನೇ ತರಗತಿ ವರೆಗಿನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮೈಸೂರು ಹುಲಿ ಎಂದೇ ಬಿಂಬಿತವಾಗಿದ್ದ ಟಿಪ್ಪು ಸುಲ್ತಾನ್ ಬಿರುದುಗಳಿಗೆ ಕತ್ತರಿ ಪ್ರಯೋಗವಾಗಿದೆ. ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕ ಸಮಿತಿ ಮಾಡಿರುವ ಪರಿಷ್ಕೃತ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ವೈಭವೀಕರಣವನ್ನು ತೆಗೆದುಹಾಕಿದೆ. ಈತನಿಗೆ ಮೈಸೂರು ಹುಲಿ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್‍ಗೆ ಮೈಸೂರು ಹುಲಿ … Continued

ಜಿಪಂ,ತಾಪಂ ಚುನಾವಣೆ:ವಿಸ್ತೃತ ವಿಚಾರಣೆ ಆಗಬೇಕು ಎಂದ ಹೈಕೋರ್ಟ್, ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ವಿಚಾರದಲ್ಲಿ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು … Continued