ಕಾಶಿ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ : ಕಾಶಿಯಾತ್ರೆ ಸಹಾಯಧನ ಯೋಜನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ, ಶೀಘ್ರವೇ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ರಾಜ್ಯದ ಬಹುನಿರೀಕ್ಷಿತ ಕಾಶಿಯಾತ್ರೆ ಪ್ರವಾಸ ಯೋಜನೆ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30,000 ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ 5000 ರೂ.ಗಳ ಸಹಾಯ ಧನ ನೀಡಲಾಗುತ್ತದೆ. ಈ ಕುರಿತು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಪ್ರಕಟಣೆ ಬಿಡುಗಡೆ … Continued

ಬೆಂಗಳೂರಿನಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್​ಗಳು ಓಪನ್..!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಹೊಟೇಲ್​ಗಳು ತೆರೆಯಲಿವೆ. ಇಡೀ ರಾತ್ರಿ ಊಟ-ತಿಂಡಿ ಸಿಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, 24/7 ಎಲ್ಲ ಹೊಟೇಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಈ ಟವಿ ಭಾರತ ಕನ್ನಡ.ಕಾಮ್‌ ವರದಿ ಮಾಡಿದೆ. … Continued

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ ನಿವಾಸಕ್ಕೆ ತೆರಳಿ 11 ಲಕ್ಷ ರೂ. ಚೆಕ್‌ ನೀಡಿದ ಡಿಕೆಶಿ

ಬೆಳಗಾವಿ: ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ ಪಾಟೀಲ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು. ಸಂತೋಷ ಪಾಟೀಲ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ … Continued

ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ: ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ. ಮೇಲ್ಮೈ ಸುಳಿಗಾಳಿ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿದೆ. ಟ್ರಫ್ ತೆಲಂಗಾಣದಿಂದ ದಕ್ಷಿಣ ತಮಿಳುನಾಡು ಕಡೆಗೆ ಸಾಗಿದೆ. ನಿನ್ನೆವರೆಗೂ ಇದ್ದ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಏಪ್ರಿಲ್ 21ರ ವರೆಗೂ … Continued

ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿಯೇ ಪಠ್ಯದಲ್ಲಿ ಭಗವದ್ಗೀತೆಯನ್ನು ನೈತಿಕ ಶಿಕ್ಷಣ ವಿಭಾಗದಲ್ಲಿ ಸೇರ್ಪಡೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಈ ವರ್ಷದಿಂದಲೇ ಭಗವದ್ಗೀತೆಯು ಸೇರ್ಪಡೆಯಾದರೂ ಆದರೆ ಪರೀಕ್ಷೆಗೆ ಈ ವಿಷಯ ಇರುವುದಿಲ್ಲ. ಇದು ನೈತಿಕ ಶಿಕ್ಷಣದ ಭಾಗವಾಗಿರಲಿದೆ ಎಂದು ಸ್ಪಷ್ಟಪಡಿಸಿದರು. ಭಗವದ್ಗೀತೆಯನ್ನು ನೈತಿಕ … Continued

ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್‌ ಸೇರಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ  ಏಪ್ರಿಲ್‌ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ … Continued

ರಾಗಿ ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು : ರಾಗಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೆಚ್ಚುವರಿಯಾಗಿ ರಾಗಿ ಖರೀದಿಗೆ ಮುಂದಾಗಿದೆ. ಬೆಂಬಲ ಬೆಲೆಯಡಿ 1.14 ಲಕ್ಷ ಮೆ. ಟನ್‌ ರಾಗಿಯನ್ನು ಹೆಚ್ಚುವರಿಯಾಗಿ ಖರೀದಿಸಲು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕನಿಷ್ಠ … Continued

ಹುಬ್ಬಳ್ಳಿ ಗಲಭೆ ಹಿಂಸಾಚಾರ : ಒಟ್ಟು 104 ಆರೋಪಿಗಳ ಬಂಧನ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧಿಸಿದಂತೆ ಈವರೆಗೆ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಮತ್ತೆ 15 ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು 104 ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಹಳೇ ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಗಲಾಟೆ ನಡೆದಿದ್ದು, ಗಲಭೆ ವೇಳೆ ಕೊಲೆ ಯತ್ನ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು, ಪೊಲಿಸ್‌ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued

17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆಯಕಟ್ಟಿನ ಸ್ಥಾನದಲ್ಲಿದ್ದ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ವರ್ಗಾವಣೆ ಅಧಿಕಾರಿಗಳ ಪಟ್ಟಿ ಇಂತಿದೆ. * ಜಿ. ಕಲ್ಪನಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ * ಶ್ರೀವತ್ಸ ಕೃಷ್ಣ- ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ * ಆಮ್ಲಾನ್ ಆದಿತ್ಯ ಬಿಸ್ವಾಸ್- ವಿಶೇಷಾಧಿಕಾರಿ, … Continued