ಬೆಂಗಳೂರು: ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಇತ್ತೀಚಿಗಷ್ಟೇ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಒಬ್ಬರೇ ಇದ್ದರು. ಅವರ ಪುತ್ರ ಇಂದು ಸಂಜೆ ಕಟಾವ್ಕರ್‌ಗೆ ಕರೆ ಮಾಡಿದಾಗ ಅವರು ಫೋನ್ ಸ್ವೀಕರಿಸಿರಲಿಲ್ಲ, ಹೀಗಾಗಿ ಮನೆಯ ಸೆಕ್ಯುರಿಟಿಗೆ ಕರೆ ಮಾಡಿ ವಿಚಾರಿಸಲು … Continued

ಕುಮಟಾ: ಕೇವಲ ಅರ್ಜಿ ಪಡೆದ್ರೆ ಸಮಸ್ಯೆ ಬಗೆಹರಿಯಲ್ಲ, ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತರೆ ಬಗೆಹರಿಯುತ್ತದೆ-ಸಚಿವ ಅಶೋಕ

ಕುಮಟಾ; ಸಮಸ್ಯೆ ಎನ್ನುವುದು ಹಳ್ಳಿಯಲ್ಲಿದೆ. ಹರಿಜನ ಕೇರಿಯಲ್ಲಿ, ಮೀನುಗಾರರ ಸಮುದಾಯದಲ್ಲಿ ಸಮಸ್ಯೆಯಿದೆ. ಹಳ್ಳಿಯ ಹಿಂದುಳಿದ, ಬಡವರ ಅಭಿವೃದ್ಧಿಯಾಗಬೇಕು. ಕೇವಲ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಳ್ಳಿಯಲ್ಲಿ ಹೆಚ್ಚುಕಾಲ ಇರಬೇಕು. ಜಿಲ್ಲಾಧಿಕಾರಿ ಸಮೇತ ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತುಕೊಂಡರೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಯನ್ನು ಸ್ಥಳದಲ್ಲೇ ತಿರ್ಮಾನ ಮಾಡುವ ಉದ್ದೇಶ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ ಎಂದು … Continued

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್‌ ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು, ಸಂಜೆ ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಿನ್ನೆ ನೀಡಿದ್ದ ಹೇಳಿಕೆಯಂತೆ ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಆರೋಪಿಯಲ್ಲ ಎಂದು ಹೇಳಿರುವ ಈಶ್ವರಪ್ಪ ನೈತಿಕ … Continued

ಗಣೇಶಗುಡಿ: ರಿವರ್ ರ‍್ಯಾಫ್ಟಿಂಗ್ ವೇಳೆ ಕಾಳಿ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್: ಕೂದಲೆಳೆ ಅಂತರದಲ್ಲಿ ಬಚಾವಾದ 12 ಮಂದಿ…ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದಾಂಡೇಲಿ ಸಮೀಪದ ಗಣೇಶಗುಡಿಯಲ್ಲಿ ಪ್ರವಾಸಿಗರನ್ನು ರಿವರ್  ರ್‍ಯಾಫ್ಟಿಂಗ್‌ಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆ ಹಂತ ತಲುಪಿದ ಪರಿಣಾಮ ನೀರಿನಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ. ಆ ಮೂಲಕ ಸಂಭಾವ್ಯ ಅಪಾಯವೊಂದು ಕೆಲವೇ ನಿಮಿಷಗಳ ಅಂತರದಲ್ಲಿ ತಪ್ಪಿದಂತಾಗಿದೆ. ಗಣೇಶಗುಡಿಯ ಕಾಳಿ ನದಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೇ 12 ಮಂದಿ … Continued

ಆರೋಪ ಮುಕ್ತನಾದ ನಂತ್ರ ಮತ್ತೊಮ್ಮೆ ಮಂತ್ರಿಯಾಗ್ತೇನೆ: ಬೆಂಬಲಿಗರಿಗೆ ಹೇಳಿದ ಈಶ್ವರಪ್ಪ

ಶಿವಮೊಗ್ಗ: ಪಿತೂರಿಯ ಭಾಗವಾಗಿ ನನ್ನ ವಿರುದ್ಧ ಮಾಡಲಾದ ಆರೋಪಗಳನ್ನು ಮಾಡಲಾಗಿದೆ. ತನಿಖೆಯ ನಂತರ ನಾನು ನಿರಪರಾಧಿ ಎಂದು ಸ್ಪಷ್ಟವಾಗುತ್ತದೆ ಮತ್ತು ಖಂಡಿತವಾಗಿಯೂ ನಾನು ಮತ್ತೊಮ್ಮೆ ಮಂತ್ರಿ ಆಗುತ್ತೇನೆ ಎಂದು ರಾಜೀನಾಮೆಗೆ ಮುನ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ … Continued

ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ರಾತ್ರಿ ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಇಬ್ಬರು … Continued

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್‌ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ … Continued

ಏಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಹೊಲನಗದ್ದೆ, ಹಿಲ್ಲೂರಿಗೂ ಭೇಟಿ

ಬೆಂಗಳೂರು: ಏಪ್ರಿಲ್ 15 ಮತ್ತು 16ರಂದು ಕಂದಾಯ ಸಚಿವ ಆರ್. ಅಶೋಕ ಅವರು ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸರ್ಕಾರವೇ ಜನರ ಬಳಿಗೆ ಬಂದು ಸಮಸ್ಯೆ ಆಲಿಸಬೇಕು ಎಂಬ ಉದ್ದೇಶ ಹೊಂದಿರುವ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇದು … Continued

ಹಿಜಾಬ್‌ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿ: ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ ಮುಸ್ಲಿಂ ಹುಡುಗಿ

ಮಂಗಳೂರು: ರಾಜ್ಯದಲ್ಲಿ ತರಗತಿ ಕೊಠಡಿಗಳಲ್ಲಿ ಹಿಜಾಬ್‌ಗಳ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದು, ಏಪ್ರಿಲ್‌ 22ರಿಂದ ಪ್ರಾರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿನಿಯರು ತಲೆಗೆ ಹಿಜಾಬ್‌ ಧರಿಸಿ ಹಾಜರಾಗಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ … Continued

ನೈತಿಕತೆ ಆಧಾರದ ಮೇಲೆ ಈಶ್ವರಪ್ಪ ರಾಜೀನಾಮೆ :ಸಿಎಂ ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ವಿಚಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈಶ್ವರಪ್ಪ ರಾಜೀನಾಮೆ ತೀರ್ಮಾನ ಸ್ವಾಗತಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬರುವವರೆಗೂ ಸಚಿವ ಸ್ಥಾನದ ಜವಾಬ್ದಾರಿ ಬೇಡ ಎಂದು ಈಶ್ವರಪ್ಪ ಬಳಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನಾನು … Continued