ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued

ಬಿಜೆಪಿ ಸಂಸದ ಡಾ ಕೆ ಸುಧಾಕರ ಪತ್ನಿಗೆ ಡಿಜಿಟಲ್ ಅರೆಸ್ಟ್ : 14 ಲಕ್ಷ ರೂ. ದೋಚಿದ್ದ ಸೈಬರ್ ವಂಚಕರು…!

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ ಅವರ ಪತ್ನಿಯೂ ಡಿಜಿಟಲ್‌ ವಂಚನೆ ಮಾಡಿದ್ದು, 14 ಲಕ್ಷ ರೂ.ಗಳನ್ನು ಅವರಿಗೆ ಸೈಬರ್‌ ವಂಚಕರು ವಂಚಿಸಿದ್ದರು. ಆದರೆ ಅವರು ಸಕಾಲಕ್ಕೆ ಈ ಬಗ್ಗೆ ದೂರು ನೀಡಿದ ನಂತರ ಪೊಲೀಸರು ಕಾರ್ಯಪ್ರವೃತ್ತರಾದ ನಂತರ ಹಣವನ್ನು ವಶಕ್ಕೆ ಪಡೆದು ಈಗ ಹಿಂದಿರುಗಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಸದ ಡಾ.ಕೆ.ಸುಧಾಕರ ಅವರ ಪತ್ನಿ ಡಾ.ಪ್ರೀತಿ … Continued

ಮೈಸೂರು ದಸರಾ 2025 ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10:10 ರಿಂದ 10:40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು. ಮೈಸೂರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ  ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 23 ರವರೆಗೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ … Continued

ಪಂಚಮಸಾಲಿ ಪೀಠದಿಂದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಕೂಡಲಸಂಗಮ (Koodala Sangama) ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಶ್ರೀಗಳ ಬಗ್ಗೆ ಸಾಕಷ್ಟು ದೂರುಗಳು ಇವೆ. … Continued

ಜಾತಿ ಗಣತಿ | ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ; ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಉಂಟಾಗಿದ್ದು, ಈ ಮಧ್ಯೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದಾರೆ. ಕ್ರೈಸ್ತ ಪದಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಗೊಳಿಸಿದ್ದನ್ನು ಕುರಿತಂತೆ ಮರುಪರಿಶೀಲಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ … Continued

ಹಿಂದುಸ್ತಾನಿ ಗಾಯಕ ಪಂ. ವೆಂಕಟೇಶಕುಮಾರಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಬೆಂಗಳೂರು: ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ  ಪ್ರಸಕ್ತ ಸಾಲಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕ ಪಂ.ಕೆ.ವೆಂಕಟೇಶಕುಮಾರ (Pandit Venkatesh Kumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ … Continued

ಆಳಂದ ಸೇರಿ ರಾಜ್ಯದ ಎಲ್ಲ ಮತಗಳ್ಳತನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಆರೋಪಿತ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ … Continued

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು (SSLC, PUC Exam) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2, ಏ.25ರಿಂದ ಮೇ 9ರವರೆಗೆ ನಡೆಯಲಿದೆ.ದ್ವಿತೀಯ … Continued

ಸೆಪ್ಟೆಂಬರ್‌ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ; ಅಧಿಕೃತ ಆದೇಶ ಬಾಕಿ

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ(KMF) ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಸೆ.22ರಿಂದ ನೂತನ ದರ ಜಾರಿಗೆ ಬರಲಿದೆ ಎನ್ನಲಾಗಿದ್ದು, ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ. ಕೇಂದ್ರ ಸರ್ಕಾರ ಜಿಎಸ್​​ಟಿ ಇಳಿಕೆ ಮಾಡಿದ ಬೆನ್ನಲ್ಲೇ ದರ ಇಳಿಕೆಗೆ ಮುಂದಾಗಿರುವ … Continued