ಧಾರವಾಡ: ಡಿಮ್ಹಾನ್ಸ್ ನಲ್ಲಿ ಎಂಆರ್‌ಐ ಯಂತ್ರ ಅಳವಡಿಸುವವರೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವೇತನ ತಡೆಹಿಡಿಯಲು ಹೈಕೋರ್ಟ್ ಆದೇಶ

ಧಾರವಾಡ: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯನಿರ್ವಹಿಸುವ ವರೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಅವರ … Continued

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹುದ್ದೆಯಿಂದ ರಹೀಂ ಉಚ್ಚಿಲ ಪದಚ್ಯುತಿ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಹೀಂ ಉಚ್ಚಿಲ ಅವರನ್ನು ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಆರ್‌ ರಮೇಶ್‌ ಆದೇಶ ಹೊರಡಿಸಿದ್ದಾರೆ. ಪದಚ್ಯುತಿಗೆ ಸ್ಪಷ್ಟ … Continued

ಹುಬ್ಬಳ್ಳಿ: ಬಸ್ – ಕಾರು ಢಿಕ್ಕಿ; ಇಬ್ಬರು ಸಾವು, ಐವರಿಗೆ ಗಾಯ

ಹುಬ್ಬಳ್ಳಿ: ಐರಾವತ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ, ಕಾರು ಚಲಾನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಅವರ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ತಾಲೂಕಿನ ಶಿರಗುಪ್ಪಿ ಬಳಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಗುಜರಾತ್ ಮೂಲದವವರು ಹಾಗೀ ಹಾಲಿ ಹುಬ್ಬಳ್ಳಿಯ ಗೋಕುಲ ರಸ್ತೆ ಡಾಲರ್ಸ್ ಕಾಲೋನಿ ನಿವಾಸಿಗಳು … Continued

ಚಂದ್ರು ಕೊಲೆ ಪ್ರಕರಣದಲ್ಲಿ ಯೂಟರ್ನ್‌ ಹೊಡೆದ ಗೃಹ ಸಚಿವ ಆರಗ ಜ್ಞಾನೇಂದ್ರ : ಅಸಮರ್ಥ ಗೃಹ ಸಚಿವ ಎಂದ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಜೆ.ಜೆ. ನಗರ ಎಂಬಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮೊದಲಿನ ತಮ್ಮ ಹೇಳಿಕೆಯಿಂದ ಯೂಟರ್ನ್ ಹೊಡೆದಿದ್ದಾರೆ. ಮೊದಲು ‘ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿತ್ತು ಎಂದು ಹೇಳಿದ್ದರು. ಆದರೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಈಗ ಬೈಕ್ ಟಚ್ ಆಗಿ ಗಲಾಟೆ ನಡೆದ … Continued

ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸತ್ತಿರುವ ಘಟನೆ  ವರದಿಯಾಗಿದೆ. ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸತ್ತಿವೆ. ಮಂಗಳವಾರ ಬೆಳಗ್ಗೆ ಚಿರತೆಯ ಮೃತದೇಹ ಸಾರ್ವಜನಿಕರಿಗೆ ಕಂಡಿದೆ. ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಯ … Continued

ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಕೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ

ಬೆಂಗಳೂರು: ಬಜೆಟ್​ನಲ್ಲಿ ಪ್ರಸ್ತಾಪಿಸಿರುವಂತೆ ಸರ್ಕಾರಿ ಮಾದರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸ್ಪೋಕನ್ ಇಂಗ್ಲಿಷ್’ ತರಗತಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ … Continued

ಆರೋಗ್ಯದಲ್ಲಿ ಏರುಪೇರು: ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಅವರು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರದ ತನಕ ನಿಗಾದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ … Continued

ಹಾವೇರಿ : ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ಹಾವೇರಿ: ಭಾರೀ ಗಾಳಿ ಮಳೆಗೆ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿಯಲ್ಲಿ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬಳು ಮೃತಪಟ್ಟ ದುರ್ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಹಿಳೆ ಪಟ್ಟಣದ ಮುಮ್ತಾಜ್ (42) ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ಮನೆಯ … Continued

10 ಮಹಿಳೆಯರು ಸೇರಿದಂತೆ 55 ಬಂಧಿತ ಕಾರ್ಮಿಕರನ್ನು ಗುತ್ತಿಗೆದಾರರಿಂದ ರಕ್ಷಿಸಿದ ಪೊಲೀಸರು

ಹಾಸನ: ಅರಸೀಕೆರೆ ತಾಲೂಕಿನ ಅನ್ನೇನಹಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿದ್ದ 10 ಮಹಿಳೆಯರು ಸೇರಿದಂತೆ 55 ಕಾರ್ಮಿಕರನ್ನು ಪೊಲೀಸರು ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ರಕ್ಷಿಸಲಾಗಿದೆ. ಕಾರ್ಮಿಕರನ್ನು ಅಸಭ್ಯವಾಗಿ ನಡೆಸಿಕೊಂಡ ಮುನೇಶ್ ಎಂಬ ಗುತ್ತಿಗೆದಾರನ ಹಿಡಿತದಿಂದ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಳೆದೆರಡು ವರ್ಷಗಳ ಹಿಂದೆ ದಾವಣಗೆರೆ, ಹರಿಹರ, ಕಲ್ಬುರ್ಗಿ, ಶಿವಮೊಗ್ಗ, ತಿಪಟೂರು, ಸಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ ಮತ್ತು … Continued

ಹೊಸಪೇಟೆ: ನಾಳೆ ಶ್ರೀ ಕಾಂಚೀ ಕಾಮಾಕ್ಷಿ ದೇವಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ

ಶ್ರೀ ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅಮೃತಹಸ್ತದಿಂದ ಪ್ರಾಣ ಪ್ರತಿಷ್ಠಾಪನೆ. ವಿವಿಧ ಹೋಮಗಳ ಪೂರ್ಣಾಹುತಿ-ಕುಂಭಾಭಿಷೇಕ, ಚರ್ತುವೇದ ಪಾರಾಯಣ ಹೊಸಪೇಟೆ:ನಗರದ ಗಾಂಧಿಕಾಲೋನಿ  ಶ್ರೀ ಕಾಂಚೀ ಕಾಮಾಕ್ಷಿ ದೇವಸ್ಥಾನದಲ್ಲಿ ಏಪ್ರಿಲ್‌ ೬ರಂದು ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರಿಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆ … Continued