ಸಿಇಟಿ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟ: ಏಪ್ರಿಲ್ 22ರ ವರೆಗೆ ಶುಲ್ಕ ಪಾವತಿಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ದಿನಾಂಕ ನಿಗದಿಯಾಗಿದೆ. ಜೂನ್ 16, 17, 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಉನ್ನತ ಶೀಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆಗಳು ನಡೆಯಲಿವೆ, … Continued

ಮುನಿಸಿಕೊಂಡು ಮನೆಯಿಂದ ಹೋಗಿದ್ದ ಸಹೋರಿಯರು ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ಶನಿವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅಕ್ಕ-ತಂಗಿ ಶವವಾಗಿ ಇಂದು, ಭಾನುವಾರ ಚಿಕ್ಕಬಳ್ಳಾಪುರದ ಕಂದವಾರ ಕೆರೆಯಲ್ಲಿ(Lake) ಪತ್ತೆಯಾಗಿದೆ.ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಅಕ್ಕ-ತಂಗಿಯರಾದ ಅಗಲಗುರ್ಕಿ ಗ್ರಾಮದ ಅಶ್ವಿನಿ(16) ಮತ್ತು ನಿಶ್ಚಿತಾ(14) ಎಂದು ಗುರುತಿಸಲಾಗಿದೆ. ಮುನಿಸಿಕೊಂಡು ಅಶ್ವಿನಿ, ತನ್ನ ತಂಗಿಯನ್ನೂ ಕರೆದುಕೊಂಡು ಮನೆಯಿಂದ ನಿನ್ನೆ ಸಂಜೆ ಹೊರ ಹೋಗಿದ್ದಳು ಎನ್ನಲಾಗಿದೆ. ರಾತ್ರಿ ಎಷ್ಟೊತ್ತಾದರೂ ಮನೆಗೆ ಬಂದಿರಲಿಲ್ಲ. ಮನೆಯವರು … Continued

ಅಂತಾರಾಜ್ಯ ಜಲವಿವಾದ: ಏಪ್ರಿಲ್ ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದ್ದು, ಈ ಬಗ್ಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಭಾನುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದಗಳನ್ನು ಆದಷ್ಟು ಬೇಗ ಬಗೆಹರಿಸಲು … Continued

ಯುಗಾದಿಗೆ ಕೆಎಸ್‌ಆರ್‌ಟಿಸಿಯಿಂದ 600 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ.. ಯಾವ್ಯಾವ ಊರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೇರೆ ಊರಿಗೆ ತೆರಳುವವರಿಗೆ ಹೋಗುವವರಿಗೆ ಕೆಎಸ್‌ಆರ್‌ಟಿಸಿ ಸಂಸ್ಥೆ ರಾಜ್ಯದ ನಾನಾ ಭಾಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‌ಆರ್‌ಟಿಸಿ) ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಏ.1 ಮತ್ತು ಏ.2ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಹೊರ ರಾಜ್ಯದ ಬೇರೆಬೇರೆ ಪ್ರದೇಶಗಳಿಗೆ ಹೆಚ್ಚುವರಿಯಾಗಿ … Continued

ಚಿತ್ರಕಲಾ ಪರಿಷತ್‍ಗೆ ಸ್ವಾಯತ್ತ ವಿವಿ ಸ್ಥಾನಮಾನ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸಾವಿರಾರು ಕಲಾವಿದರನ್ನು ಸೃಷ್ಟಿಸುವ ಚಿತ್ರಕಲಾ ಪರಿಷತ್‍ಗೆ ಡೀಮ್ಡ್ (ಸ್ವಾಯತ್ತ) ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಕುಮಾರಕೃಪ ರಸ್ತೆಯಲ್ಲಿ ಇಂದು, ಭಾನುವಾರ ಚಿತ್ರಕಲಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರಕಲಾ ಪರಿಷತ್ ಸಾವಿರಾರು ಕಲಾವಿದರಿಗೆ ಆಶ್ರಯ ನೀಡಿದೆ. ಅನೇಕ ಪ್ರತಿಭಾವಂತರನ್ನು ಬೆಳಕಿಗೆ ತಂದಿದೆ. ಹೀಗಾಗಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ

ಬಾಗಲಕೋಟೆ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾರ್ಚ್‌ 28) ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ‘ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 8.74 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. … Continued

ವಿಜ್ಞಾನ ಕಲಿಕೆಗೆ ನೀಡುವ ಒತ್ತು ಇತಿಹಾಸದ ಸಂಶೋಧನೆ-ಅಧ್ಯಯನಕ್ಕೂ ಸಿಗಬೇಕಿದೆ: ಹೊರಟ್ಟಿ

ಧಾರವಾಡ : ಇತಿಹಾಸ ಸಂಶೋಧನೆಯಲ್ಲಿ ಯುವಕ ಸಂಶೋಧಕರು ಹೆಚ್ಚು ತೊಡಗಿಸಿಕೊಳ್ಳಬೇಕು. ಕೇವಲ ವಿಜ್ಞಾನದ ಕಲಿಕೆಗೆ ಒತ್ತುಕೊಡುವ ಪರಿಸ್ಥಿತಿ ಹಾಗೂ ಮನಸ್ಥಿತಿ ಇಂದು ಪಾಲಕರಲ್ಲಿ ಕಂಡುಬರುತ್ತಿದೆ. ಅದೇರೀತಿ ಇತಿಹಾಸದ ಸಂಶೋಧನೆ ಹಾಗೂ ಅಧ್ಯಯನದ ಬಗ್ಗೆಯೂ ಮಹತ್ವ ನೀಡಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬೆಂಗಳೂರಿನ ಕರ್ನಾಟಕ ಇತಿಹಾಸ ಪರಿಷತ್ತು, ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ … Continued

ನಾಳೆಯಿಂದ `ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲಿದೆ

ಬೆಂಗಳೂರು : ಸೋಮವಾರ ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ’ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳನ್ನು ಸಿದ್ಧತೆ ಮಾಡಲಾಗಿದೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. … Continued

ಪೋಕ್ಸೊ ಪ್ರಕರಣ: ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಪಾಟಿ ಸವಾಲಿಗೆ ಗುರಿಪಡಿಸಬಹುದು: ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಅವರನ್ನೂ ಪಾಟಿ ಸವಾಲಿಗೆ ಗುರಿಪಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಂತ್ರಸ್ತೆಯನ್ನು ಪಾಟಿ ಸವಾಲಿಗೆ ಗುರಿಪಡಿಸಲು ಅನುಮತಿ ನಿರಾಕರಿಸಿದ್ದ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ … Continued

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ : ವಿಶ್ವ ಹಿಂದೂ ಪರಿಷತ್‌ ಒತ್ತಾಯ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮನವಿ ಸಲ್ಲಿಸಿದೆ. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ … Continued