ವಯಸ್ಸು ಲೆಕ್ಕಿಸದೆ ಇಂಗ್ಲಿಷ್‌ ಸ್ನಾತಕೋತ್ತರ ಪರೀಕ್ಷೆ ಬರೆದ ಇಬ್ಬರು ವೃದ್ಧರು..!

ವಿಜಯಪುರ : ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ 81 ಹಾಗೂ 66 ರ ಹರೆಯದ ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ನಾಲ್ಕು ಸ್ನಾತಕೋತ್ತರ ಪದವಿ ಪಡೆದರೂ ಐದನೇ ಪದವಿಗೆ ಓರ್ವ ವೃದ್ಧರು ಪರೀಕ್ಷೆ ಬರೆದರೆ, ಇಂಗ್ಲೀಷ ಭಾಷೆಯಲ್ಲಿ ಜ್ಞಾನ ಸಂಪಾದನೆಗೆ ಮತ್ತೋರ್ವ ವೃದ್ಧರು ಸ್ನಾತಕೋತ್ತರ ಪದವಿ ಪರೀಕ್ಷೆ ಬರೆದಿದ್ದಾರೆ. … Continued

ನನಗೆ ಸ್ವಾಮೀಜಿಗಳ ಮೇಲೆ ಗೌರವವಿದೆ, ಹೇಳಿಕೆಯನ್ನು ಯಾವ್ಯಾವ್ದಕ್ಕೋ ಲಿಂಕ್‌ ಮಾಡ್ಬೇಡಿ: ಮಾಧ್ಯಮದವರ ಮೇಲೆ ಸಿದ್ದರಾಮಯ್ಯ ಗರಂ

ಮೈಸೂರು: ಸ್ವಾಮೀಜಿಗಳ ಜೊತೆ ನಾನು ಯಾವತ್ತೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್‌ ವಿಚಾರವಾಗಿ ಪ್ರಶ್ನೆಯನ್ನೇ ಮಾಡಿಲ್ಲ. ಹಿಜಾಬ್‌ ಬೇರೆ, ದುಪ್ಪಟ್ಟಾ ಬೇರೆ. ಸಮವಸ್ತ್ರ ಜೊತೆಗೆ ಅದೇ ಬಣ್ಣದ ದುಪ್ಪಟ್ಟಾ ಹಾಕಿಕೊಂಡು ಪರೀಕ್ಷೆ … Continued

ಏಪ್ರಿಲ್‌ 5ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸರ್ಕಾರದ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ 5ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‍ ಸಮಾವೇಶ ಆಯೋಜನೆಗೆ ಪ್ಲಾನ್‍ ರೂಪಿಸಲಾಗಿದೆ.ಇದಲ್ಲದೆ ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು … Continued

ಬಜೆಟ್ ಘೋಷಣೆಗಳ ಪರಿಣಾಂಕಾರಿ ಅನುಷ್ಠಾನಕ್ಕೆ ಇದೇ ಮೊದಲ ಬಾರಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಜೆಟ್ ಘೋಷಣೆಗಳ ಶೀಘ್ರ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನಲ್ಲಿನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶ ನೀಡುವುದು … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ:ಸರ್ಕಾರದ ಆದೇಶ-ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೋಮವಾರಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧಿಕೃತ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು … Continued

ನಾನು ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಿ ಅಪಪ್ರಚಾರ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಿದ್ದರಾಮನಹುಂಡಿಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್​ … Continued

ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ :ಸರ್ಕಾರದಿಂದ ಆದೇಶ

ಬೆಂಗಳೂರು: ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ರಾಜ್ಯಾದ್ಯಂತ ಪ್ರತಿವರ್ಷ ಮಾರ್ಚ್ 16ರಂದು ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು, ಶುಕ್ರವಾರ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀರೇಣುಕಾಚಾರ್ಯರು ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹ ಹೊಂದಿದ್ದಾರೆ. ಈ … Continued

ಬಿಸಲಕೊಪ್ಪ, ಎಕ್ಕಂಬಿ ಪ್ರದೇಶದಲ್ಲಿ ಕಾಡಾನೆ ಹಿಂಡುಗಳ ಸುತ್ತಾಟ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ‌ ಬನವಾಸಿ ವಲಯ ಅರಣ್ಯ ವ್ಯಾಪ್ತಿಯ ಬಿಸಲಕೊಪ್ಪ ಗ್ರಾಮ ಪಂಚಾಯತದ ಬಿಸಲಕೊಪ್ಪ, ಎಕ್ಕಂಬಿ ಭಾಗಗಳಲ್ಲಿ ಆನೆಗಳ‌ ಹಿಂಡು ಪ್ರತ್ಯಕ್ಷವಾಗಿವೆ ಎಂದು ವರದಿಯಾಗಿದೆ. ಬಿಸಲಕೊಪ್ಪ ಸುತ್ತಲಿನ ಅರಣ್ಯ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ನಾಲ್ಕು ಆನೆಗಳ ಹಿಂಡು ಸುತ್ತಾಟ ನಡೆಸಿವೆ ಎನ್ನಲಾಗಿದೆ. ನಾಲ್ಕು ಆನೆಗಳಲ್ಲಿ‌ ಒಂದು‌ ಮರಿ, ಒಂದು ಗಂಡು … Continued

ಬೆಳಗಾವಿ : ಹಾಡಹಗಲೇ ನಡುರಸ್ತೆಯಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆಗೈದ ಗಂಡ

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿಯೇ ಹಾಡಹಗಲೇ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ. ಹೀನಾ ಕೌಸರ್ (24) ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ (34) ಎಂಬಾತನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ … Continued

ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ … Continued