ಕಾರವಾರ: ಹೊಟೇಲ್‌ ಬಾಲ್ಕನಿಯಿಂದ ಬಿದ್ದು ರಷ್ಯಾದ ವ್ಯಕ್ತಿಗೆ ಗಂಭೀರ ಗಾಯ

ಕಾರವಾರ : ಹೊಟೇಲ್‌ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು ರಷ್ಯಾದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿದ್ದು ಗಾಯಗೊಂಡ ವ್ಯಕ್ತಿಯನ್ನು ರಷ್ಯಾದ ಪ್ರಜೆ ಇವಾನ್‌ ಡೆನೆವಾ (೪೦) ಎಂದು ಗುರುತಿಸಲಾಗಿದ್ದು, ರಾತ್ರಿ ವೇಳೆ ಹೊಟೇಲಿನ ಬಾಲ್ಕನಿ ಮೇಲೆ ನಿಂತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಾದ್ಯಂತ ಸೆಪ್ಟಂಬರ್ 16ರಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೆಪ್ಟಂಬರ್ 16, 17 ಹಾಗೂ 18 ರಂದು ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಬೆಂಗಳೂರಲ್ಲಿ ಸೆಪ್ಟೆಂಬರ್ 18 ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ … Continued

ಯಾವುದೇ ವಸ್ತು- ಸಂಗತಿ ವರ್ತಮಾನಕ್ಕೆ ಅನ್ವಯವಾದರೆ ಅದು ಪ್ರಸ್ತುತವಾಗುತ್ತದೆ ; ʼಪುರುಷ ಸೂಕ್ತ ಕೃತಿʼ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾರಾಯಣ ಯಾಜಿ

ಶಿರಸಿ : ಯಾವುದೇ ಕೃತಿಗಳು, ವಸ್ತು- ಸಂಗತಿಗಳು ವರ್ತಮಾನಕ್ಕೆ ಅನ್ವಯವಾಗುವಂತಿದ್ದರೆ ಅದು ಎಲ್ಲ ಕಾಲಕ್ಕೂ ಪ್ರಸ್ತುತವಾಗುತ್ತವೆ. ರಘುಪತಿ ಹೆಗಡೆ ಬೆಳ್ಳಿಕೇರಿಯವರ ಕೃತಿಯಾದ “ಪುರುಷ ಸೂಕ್ತ” ಕೃತಿ ಪ್ರಸ್ತುತ ಕಾಲದಲ್ಲಿ ಅಗತ್ಯವಾಗಿ ತಿಳಿದುಕೊಳ್ಳಲೇ ಬೇಕಾದ ವೈಜ್ಞಾನಿಕ ವಿಷಯಗಳನ್ನು ಒಳಗೊಂಡ ಒಂದು ಕೃತಿಯಾಗಿದೆ. ಇದಕ್ಕೆ ಕಾರಣ ಅವರು ಆರಿಸಿಕೊಂಡಿರುವ ವಸ್ತು ಎಂದು ಲೇಖಕ, ಖ್ಯಾತ ತಾಳಮದ್ದಲೆ ಅರ್ಥಧಾರಿ ನಾರಾಯಣ … Continued

ಹಾಸಿಗೆ, ದಿಂಬು ಸೇರಿ ಯಾವುದೇ ಸೌಕರ್ಯ ಒದಗಿಸಿಲ್ಲ ; ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ನಟ ದರ್ಶನಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ ಎಂಬ ವಿಚಾರದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ಬೆಂಗಳೂರಿನ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ತಮಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಲು … Continued

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ; ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್​ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಈ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ … Continued

ವೀಡಿಯೊ..| ಶಿರಸಿ ; ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಕೊಪ್ಪದಲ್ಲಿ ತಡರಾತ್ರಿ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ದೀರ್ಘ ಕಾರ್ಯಾಚರಣೆಯ ನಂತರ ರಕ್ಷಿಸಿದ್ದಾರೆ. ಸ್ಥಳೀಯ ಸುರೇಶ ಹೆಗಡೆ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆ ಕಂಡ ಮನೆಯವರು ಒಂದು ಕ್ಷಣ ಗಾಬರಿಗೊಂಡಿದ್ದರು. ನಂತರ ಈ ವಿಷಯವನ್ನು ಅರಣ್ಯ ಇಲಾಖೆಯವರ ಗಮನಕ್ಕೆ … Continued

ಹೊನ್ನಾವರ : ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಹೊನ್ನಾವರ: ಖ್ಯಾತ ಜಾನಪದ ತಜ್ಞ, ನಾಟಕಕಾರ, ಕವಿ, ಸಾಹಿತಿ ಡಾ. ಎನ್.ಆರ್. ನಾಯಕ (90) (Dr. N.R. Nayak) ಅವರು ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ತತೆಯಿಂದ ಮೂರ್ನಾಲ್ಕು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬರು ಮಗಳು ಇದ್ದಾರೆ. … Continued

ಬೆಂಗಳೂರು : ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ, ಮೂವರು ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋನಕನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದ ವರದಿಯಾಗಿದೆ. ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವಿಗೀಡಾದ ಘಟನೆ ಹೊಸಕೋಟೆ (Hosakote) ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ … Continued

ವಾಯುಭಾರ ಕುಸಿತ ; ಸೆಪ್ಟೆಂಬರ್‌ 16ರ ವರೆಗೆ ಕರ್ನಾಟಕದಲ್ಲಿ ಮಳೆ

ಬೆಂಗಳೂರು: ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆ. 16ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, … Continued

ಕಾರವಾರ : ಕೈಗಾ-ಬಾರೆ ರಸ್ತೆಯಲ್ಲಿ ಆರಾಮವಾಗಿ ನಡೆದುಕೊಂಡು ಹೋದ ಹುಲಿ; ವೀಡಿಯೊ ವೈರಲ್‌

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಹುಲಿಯೊಂದು ಆರಾಮವಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ 11ರ ಸುಮಾರು ಹುಲಿ ಶಾಂತವಾಗಿ ನಡೆದುಕೊಂಡು ಹೋಗಿರುವ ವೀಡಿಯೊ ವೈರಲ್‌ ಆಗಿದೆ. ಇದೇ ರಸ್ತೆಯ ಮೂಲಕ ಸಂಚಾರ ಮಾಡುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಮೂಲಕ … Continued