ಹೊನ್ನಾವರ | ಹಸು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಸೆ. 4ರಂದು ಮಧ್ಯರಾತ್ರಿ ಅವಧಿಯಲ್ಲಿ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ … Continued

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 13 ರಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, … Continued

ಭಟ್ಕಳ : ನೂರಾರು ಜಾನುವಾರುಗಳ ಮೂಳೆಗಳ ರಾಶಿ ಪತ್ತೆ..!

ಭಟ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿ ಮುಗ್ದೂಂ ಕಾಲೋನಿಯ ಗುಡ್ಡದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರಗಳು ರಾಶಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಮುಗ್ದೂಮ್ ಕಾಲೋನಿಯ ಗುಡ್ಡ ಪ್ರದೇಶದಲ್ಲಿ ನೂರಾರು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಹಾಗೂ … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟಿಗೆ ಮತ್ತೆರಡು ಪಿಐಎಲ್

ಬೆಂಗಳೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಧರ್ಮದವರಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ದಸರಾ … Continued

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

ಉಡುಪಿ : ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಬುಧವಾರ ಕೊಲ್ಲೂರಿನ ಶ್ರೀ ಮೂಕಾಂಬಿಕೆ ದೇವಿಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಬುಧವಾರ (ಸೆ.10) ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಿಯರಾಜ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಾಗ ಬರುತ್ತಿರುತ್ತಾರೆ. ಇದೀಗ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ … Continued

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದುವೇಳೆ ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ … Continued

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಸಾಮಾಜಿಕ ಹೋರಾಟಗಾರ ಪಿ.ಎಸ್.ಭಟ್ಟ ಉಪ್ಪೋಣಿ ನಿಧನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಸ್‌.ಭಟ್‌ ಉಪ್ಪೋಣಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೋಣಿಯವರಾಗಿದ್ದ ಅವರು ಬಿಎಸ್‌ಸಿ ಪದವೀಧರರಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ನಾಕತ್ವಗುಣ ಇದ್ದ ಅವರು ಹೊನ್ನಾವರ ಎಸ್‌ಡಿಎಂ ಕಾಲೇಜ್‌ ಯೂನಿಯನ್‌ ಕಾರ್ಯದರ್ಶಿಯಾಗಿದ್ದರು. ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ … Continued

ಕಾರಾಗೃಹ ಕೈಪಿಡಿ ಅನ್ವಯ ನಟ ದರ್ಶನಗೆ ಸೌಲಭ್ಯ ನೀಡಲು ಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಮಾಡಿದ್ದ ಮನವಿಯನ್ನು ಬೆಂಗಳೂರಿನ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಅದು ತಿಳಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued