ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9.82 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ವಿದೇಶದಿಂದ ಕೋರಿಯರ್ ನಲ್ಲಿ ತರಿಸಿಕೊಂಡಿದ್ದ 9.82 ಕೋಟಿ ರೂ.ಗಳ ಮೌಲ್ಯದ ಡ್ರಗ್ಸ್ ಅನ್ನು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಅನ್ನು ಕೋರಿಯರ್ ನಲ್ಲಿ ತರಿಸಿಕೊಂಡ ಇಬ್ಬರನ್ನು ಬಂಧಿಸಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ಹಾಗೂ 2.82 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆಯನ್ನು … Continued

ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜುಗಳ ಸುತ್ತ ನಿಷೇಧಾಜ್ಞೆ ಫೆಬ್ರವರಿ 26ರ ವರೆಗೆ ವಿಸ್ತರಣೆ

ಮಂಗಳೂರು: ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ನಿಷೇಧಾಜ್ಞೆಗಳನ್ನು ಫೆಬ್ರವರಿ 26 ರ ವರೆಗೆ ವಿಸ್ತರಿಸಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ ಸಂಜೆ 6ರಿಂದ … Continued

ಹಿಜಾಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ

ಬೆಳಗಾವಿ: ಹಿಜಾಬ್ ವಿವಾದ ರಾಜ್ಯದ ಹಲವು ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಮುಂದುವರಿದಿದ್ದು, ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಇಂದು ಶನಿವಾರ ವಿಜಯ ಪ್ಯಾರಾಮೆಡಿಕಲ್ ಕಾಲೇಜಿ ಹೈಡ್ರಾಮಾ ನಡೆಯಿತು. ಜಿಲ್ಲಾಡಳಿತ, ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗಲಿಲ್ಲ. ಹಿಜಾಬ್‌ಗೆ ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಹಿಜಾಬ್ ಧರಿಸಿ … Continued

ಈಶ್ವರಪ್ಪ ವಿವಾದಾತ್ಮಕ ಹೇಳಿಕೆ : ಅಹೋರಾತ್ರಿ ಧರಣಿ ಮುಂದುವರಿಕೆ, ರಾಜ್ಯಾದ್ಯಂತ ಹೋರಾಟ-ಡಿಕೆಶಿ

ಬೆಂಗಳೂರು: ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಪುಟದಿಂದ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಜಾಕ್ಕೆ ಆಗ್ರಹಿಸಿ ಸದನದ ಹೊರಗೂ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸದನದಲ್ಲಿ ಅಹೋರಾತ್ರಿ ಧರಣಿ ಶನಿವಾರವೂ ಮುಂದುವರಿಯಲಿದೆ. ಅಲ್ಲದೆ, ಸೋಮವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ … Continued

ಹಿಜಾಬ್ ವಿವಾದ | ಶಿರಾಳಕೊಪ್ಪ ಕಾಲೇಜಿನ 58 ವಿದ್ಯಾರ್ಥಿಗಳ ಅಮಾನತು ವಿವಾದ, ಸಸ್ಪೆಂಡ್‌ ಆಗಿಲ್ಲ ಎಂದ ಜಿಲ್ಲಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್ ನಿರ್ಬಂಧಗಳ ವಿರುದ್ಧ ಪ್ರತಿಭಟನೆ ನಡೆಸಿದ ಕಾಲೇಜೊಂದರ 58 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ವರದಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿದೆ. ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್‌ ಸ್ಕೂಲಿನ ಪದವಿಪೂರ್ವ ವಿಭಾಗದ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಮೌಖಿಕವಾಗಿ ಅಮಾನತುಗೊಳಿಸುವ ಮಾತನ್ನಾಡಿದ್ದಾರೆಯೇ ಹೊರತು ಅಮಾನತು ಮಾಡಿಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿ, ಪ್ರಾಂಶುಪಾಲರು ಕೇವಲ … Continued

ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನು..!

ಮಂಗಳೂರು : ಅಪರೂಪದ ಎರಡು ಹಾರುವ ಮೀನುಗಳು ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದ್ದು, ಇದನ್ನು ಆಂಗ್ಲ ಭಾಷೆಯಲ್ಲಿ ಫ್ಲೈಯಿಂಗ್‌ ​ ಫಿಶ್​ ಎಂದು ಕರೆಯುತ್ತಾರೆ. ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ ಎರಡು ಮೀನುಗಳು ಬಿದ್ದಿವೆ. ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನು ಸಿಕ್ಕಿವೆ ಎಂದು ಹೇಳಲಾಗಿದೆ. ತುಳುವಲ್ಲಿ … Continued

ಜಾರಕಿಹೊಳಿ ಲೈಂಗಿಕ ಹಗರಣ: ವರದಿ ಸಲ್ಲಿಸಲು ಎಸ್‌ಐಟಿಗೆ ಅನುಮತಿ ನೀಡಿದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ಬೆಂಗಳೂರು: ಸೆಕ್ಸ್ ಸಿಡಿ ಹಗರಣದ ನಂತರ ಮಾಜಿ ರಾಜ್ಯ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಮತ್ತು ಸಂಚು ಆರೋಪದ ದೂರಿಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸಲು ಎಸ್‌ಐಟಿಗೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು … Continued

ಕನ್ನಡದ ಹಿರಿಯ ನಟ ರಾಜೇಶ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ (87) ಶನಿವಾರ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮುಂಜಾನೆ 2.30ರ ಸುಮಾರಿಗೆ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ರಾಜೇಶ್ ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continued

ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್‌ ಪ್ರತಿಭಟನೆ : ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿದ ಪ್ರಾಂಶುಪಾಲರು

ತುಮಕೂರು: ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು ಹಾಗೂ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕೆ ಇಳಿದಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು, ಶುಕ್ರವಾರ ಹೊಸದಾಗಿ 1,333 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ ರಾಜ್ಯದಲ್ಲಿ ಒಟ್ಟು 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ 4,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 16,184ಕ್ಕೆ ಇಳಿಕೆಯಾಗಿದ್ದು, ಸಕಾರಾತ್ಮಕತೆ ದರ ಪ್ರಮಾಣ 1.59%ಕ್ಕೆ ಇಳಿದಿದೆ. … Continued