ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ವೈರಸ್ ಹೊಸ ಪ್ರಕರಣಗಳು ದಾಖಲಾಗಿದೆ. ಇದೇವೇಳೆ ಮಂಗಳವಾರ ಕೂಡಾ 5,762 ಕೊರೊನಾ ವೈರಸ್ ಸೋಂಕಿತರು ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಚಿಕಿತ್ಸೆ ಫಲಿಸದೇ 26 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 39,29,642ಕ್ಕೆ ಏರಿದೆ. … Continued

ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ-ಸಾರ್ವಜನಿಕವಾಗಿ ಧಾರ್ಮಿಕ ಚಿಹ್ನೆ ಪ್ರದರ್ಶಿಸದಿರುವ ಟರ್ಕಿ ಮಾದರಿಯ ಜಾತ್ಯತೀತತೆ ಭಾರತದ್ದಲ್ಲ, ನಮ್ಮದು ಸಕಾರಾತ್ಮಕ ಜಾತ್ಯತೀತತೆ: ವಕೀಲ ಕಾಮತ್‌

ಬೆಂಗಳೂರು: ಟರ್ಕಿ ದೇಶದ ಜಾತ್ಯತೀತತೆ ಕಲ್ಪನೆಗೂ ಭಾರತದ ಜಾತ್ಯತೀತತೆಗೂ ವ್ಯತ್ಯಾಸವಿದೆ. ಟರ್ಕಿಯಲ್ಲಿ ಸಾರ್ವಜನಿಕವಾಗಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಲಾಗಿತ್ತು” ಎಂದು ಹಿರಿಯ ವಕೀಲ ದೇವದತ್‌ ಕಾಮತ್‌ ಮಂಗಳವಾರ ಹೇಳಿದ್ದಾರೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶ ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ … Continued

ಉಗ್ರಪ್ಪ ವಿರುದ್ಧ 1 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ವಕ್ಫ್ ಆಸ್ತಿ ಕಬಳಿಸಿದ್ದಾರೆ ಎಂಬ ಆರೋಪ ಸೇರಿದಂತೆ ತಮ್ಮ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಉಗ್ರಪ್ಪ ವಿರುದ್ಧ ಬಾರ್ ಕೌನ್ಸಿಲ್‌ಗೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು. … Continued

ಬೆಳಗಾವಿಯಿಂದ ಬೇರ್ಪಡಿಸಿ ಪ್ರತ್ಯೇಕ ಅಥಣಿ ಜಿಲ್ಲೆ ರಚನೆಗೆ ದೇವರಿಗೆ ಮೊರೆ, ಅಂಜನಾದ್ರಿ ಬೆಟ್ಟದಲ್ಲಿ ತೆಂಗಿನಕಾಯಿ ಕಟ್ಟಿ ಸಂಕಲ್ಪ..!

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಬೇಕು ಹಾಗೂ ಬೆಳಗಾವಿಯಿಂದ ಅಥಣಿ ತಾಲೂಕನ್ನು ಬೇರ್ಪಡಿಸಿ ಪ್ರತ್ಯೇಕ ಜಿಲ್ಲೆಯಾಗಿಸಬೇಕು ಎಂದು ಒತ್ತಾಯಿಸಿ ಈಗ ವಿನೂತನವಾಗಿ ಪ್ರತಿಭಟಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಥಣಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸಬೇಕು ಎಂದು ಒತ್ತಾಯಿಸಿ ಈಗ ಹೋರಾಟಗಾರರು ದೇವರ ಮೊರೆ ಹೋಗಿದ್ದಾರೆ. ದೇವರೇ ಬೆಳಗಾವಿ ಜಿಲ್ಲೆಯನ್ನು ಇಬ್ಭಾಗ ಮಾಡಿಸು ಎಂದು ಪ್ರಾರ್ಥಿಸಿ ಅಥಣಿ ಪ್ರತ್ಯೇಕ … Continued

ಭೀಕರ ಅಪಘಾತ: ಇಬ್ಬರು ಪುಟಾಣಿಗಳು ಸೇರು ಮೂವರ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿಯಾದ ರಭಸಕ್ಕೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತರು ಎಂದು ಗುರುತಿಸಲಾಗಿದೆ. … Continued

ಹಿಜಾಬ್ ವಿವಾದ: ಮುಸ್ಲಿಂ ಶಾಸಕರಿಂದ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ರಾಜ್ಯಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್​ ವಿವಾದದ ಬೆನ್ನಲ್ಲೇ ಕಾಂಗ್ರೆಸ್​ ಮುಸ್ಲಿಂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು, ಮಂಗಳವಾಋ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಅವರ ರೇಸ್​ಕೋರ್ಸ್​ ನಿವಾಸದಲ್ಲಿ ಭೇಟಿಯಾಗಿದ್ದು, ಹಿಜಾಬ್ ವಿವಾದ ಬಗ್ಗೆ ಚರ್ಚಿಸಿದರು ಹಾಗೂ ಆದಷ್ಟು ಶೀಘ್ರ ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ರಾಜ್ಯ … Continued

ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued

ರೈತನಿಗೆ ಪರಿಹಾರ ನೀಡಲು ವಿಳಂಬ: ಜಿಲ್ಲಾಧಿಕಾರಿ ಕಾರನ್ನೇ ಜಪ್ತಿ ಮಾಡಲು ಕೋರ್ಟ್‌ ಆದೇಶ

ಕಲಬುರಗಿ: ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣಕ್ಕೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್‌ ಅವರ ಸರ್ಕಾರಿ ಕಾರು ಜಪ್ತಿ ಮಾಡುವಂತೆ ಕಲಬುರಗಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ  2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು … Continued

ಸಾವಿನಲ್ಲೂ ಸಾರ್ಥಕತೆ: ಕಣ್ಣು- ದೇಹದಾನ ಮಾಡಿದ ಹಿರಿಯ ನಟಿ ಭಾರ್ಗವಿ ನಾರಾಯಣ

ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ ಸೋಮವಾರ (84 ವರ್ಷ ) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದು, ಅವರ ಇಚ್ಛೆಯಂತೆ ನೇತ್ರದಾನ ಹಾಗೂ ದೇಹದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಈಗಾಗಲೇ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಭಾರ್ಗವಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. … Continued

ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಶಾಸಕ ಜಮೀರ್ ಅಹಮ್ಮದ್

ಬೆಂಗಳೂರು: ಹೆಣ್ಣು ಮಕ್ಕಳು ಬುರ್ಖಾ ಹಾಗೂ ಪರ್ದಾ ಧರಿಸದೇ ಇರುವುದರಿಂದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿಕೆ ನೀಡಿದ್ದ ಶಾಸಕ ಜಮೀರ್‌ ಅಹ್ಮದ್‌ ಈಗ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶ ನನಗಿಲ್ಲ, ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಅವರು ತಮ್ಮ … Continued