ಕೋರ್ಟ್‌ ಅಂಗಳದಲ್ಲಿ ಗಲಾಟೆ ಆರೋಪ: ವಕೀಲ ಜಗದೀಶ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಎರಡು ದಿನಗಳ ಹಿಂದೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪದಡಿ ವಕೀಲ ಜಗದೀಶ್‌ ಅವರನ್ನು ಹಲಸೂರುಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರವಿವಾರ ರಜೆ ಕಾರಣ ನ್ಯಾಯಾಧೀಶರ ನಿವಾಸದಲ್ಲೇ ಆರೋಪಿಯನ್ನು ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. … Continued

ಮಹಿಳೆಯರು ಹಿಜಾಬ್, ಪರ್ದಾ ಧರಿಸದಿರುವುದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಾಗ್ತಿದೆ: ಜಮೀರ್ ಅಹ್ಮದ್ ​ಖಾನ್​

ಹುಬ್ಬಳ್ಳಿ : ಹಿಜಾಬ್ ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಿಜಾಬ್ ಧರಿಸದ ಕಾರಣಕ್ಕೇ ಮಹಿಳೆಯರು ಅತ್ಯಾಚಾರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾಜಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯುವತಿಯರ ಸೌಂದರ್ಯ ರಕ್ಷಣೆಗೆ ಬುರ್ಖಾ, ಹಿಜಾಬ್ ಪದ್ಧತಿ ಇದೆ ಎಂದು ಹೇಳಿದ್ದಾರೆ. ಹಿಜಾಬ್ ಎಂದರೆ ಇಸ್ಲಾಂನಲ್ಲಿ ‘ಪರ್ದಾ’, ಮಹಿಳೆಯರು … Continued

ಕಾಂಗ್ರೆಸ್​ಗೆ ಸದ್ಯಕ್ಕೆ ರಾಜೀನಾಮೆ ನೀಡುವುದಿಲ್ಲ: ಸಿಎಂ ಇಬ್ರಾಹಿಂ ಯು ಟರ್ನ್

ಹುಬ್ಬಳ್ಳಿ: ಫೇಬ್ರವರಿ 14ರಂದು ವಿಧಾನ ಪರಿಷತ್‌ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ತೊರೆಯುವುದಾಗಿ ಹೇಳಿದ್ದ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಈಗ ತಮ್ಮ ವರಸೆ ಬದಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸ್ಥಾನಕ್ಕೆ ನಾಳೆ, ಸೋಮವಾರ ರಾಜೀನಾಮೆ ನೀಡುವುದಿಲ್ಲ. ಬಜೆಟ್‌ ಅಧಿವೇಶನದ ಬಳಿಕ ಈ ಬಗ್ಗೆ ತೀರ್ನಾನಿಸುತ್ತೇನೆ. ಅಧಿವೇಶನದ ಸಮಯದಲ್ಲಿ ಮತಾಂತರ ನಿಷೇಧ … Continued

ಹಿಜಾಬ್‌ ವಿವಾದ: ಬಿಗಿ ಭದ್ರತೆಯಲ್ಲಿ ರಾಜ್ಯಾದ್ಯಂತ ನಾಳೆ ಪ್ರೌಢಶಾಲೆಗಳು ಆರಂಭ

ಬೆಂಗಳೂರು: ಹಿಜಾಬ್ ವಿವಾದದಿಂದ ಬಂದ್ ಆಗಿದ್ದ ಪ್ರೌಢಶಾಲೆಗಳು ನಾಳೆ, ಸೋಮವಾರದಿಂದ ಆರಂಭವಾಗುತ್ತಿದ್ದು, ಶಾಂತಿಯುತವಾಗಿ ತರಗತಿ ನಡೆಯುವಂತಾಗಲು ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳ ಆವರಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು-ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, … Continued

ನಾಳೆ ಬೆಳಿಗ್ಗೆ ನಡೆಯಲಿರುವ ಇಸ್ರೋದ ಈ ವರ್ಷದ ಮೊದಲ ಉಡಾವಣೆಗೆ ಕೌಂಟ್‌ಡೌನ್ ಆರಂಭ

ಬೆಂಗಳೂರು: ಪಿಎಸ್‌ಎಲ್‌ವಿ-ಸಿ52 ರಾಕೆಟ್‌ನಲ್ಲಿ ಭೂ ವೀಕ್ಷಣಾ ಉಪಗ್ರಹ ಇಒಎಸ್-04 ಅನ್ನು ಕಕ್ಷೆಗೆ ಸೇರಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ 2022ರ ಮೊದಲ ಉಡಾವಣಾ ಕಾರ್ಯಾಚರಣೆಗೆ ಕೌಂಟ್‌ಡೌನ್ ಭಾನುವಾರ ಮುಂಜಾನೆ ಆರಂಭವಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‌ನಿಂದ ಎರಡು ಸಣ್ಣ ಉಪಗ್ರಹಗಳನ್ನು ಹೊತ್ತೊಯ್ಯುವ ಪೋಲಾರ್ … Continued

ಹಿಜಾಬ್ ವಿವಾದ: ಉಡುಪಿ ಜಿಲ್ಲೆಗಳ ಶಾಲೆಗಳ ಸುತ್ತ ನಿಷೇಧಾಜ್ಞೆ ಜಾರಿ

ಉಡುಪಿ: ಉಡುಪಿ ಜಿಲ್ಲಾಡಳಿತವು ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರದಿಂದ ಫೆಬ್ರವರಿ 19 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ. ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿದ ರಜೆಯ ನಂತರ ಸೋಮವಾರ ಶಾಲೆಗಳು ಪುನರಾರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ … Continued

ಅಂಕೋಲಾ: ರಸ್ತೆ ಕಾರ್ಮಿಕರ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ

ಕಾರವಾರ: ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿಯಾಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಆಚವೆ ಗ್ರಾಪಂ ವ್ಯಾಪ್ತಿಯ ವಾಡಗಾರದಲ್ಲಿನಡೆದಿದೆ. ಅಂಕೋಲಾ ತಾಲೂಕಿನ ವಾಡಗಾರ ಘಟ್ಟದ ಪ್ರದೇಶದ ಶನಿವಾರ  ಈ ಘಟನೆ ನಡೆದಿದ್ದು,   ಟಾಟಾ 407 ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯರು, ಆಸ್ಪತ್ರೆಗೆ … Continued

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ : ವಕೀಲ ಜಗದೀಶ್ ಬಂಧನ

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ನೀಡಿದ ದೂರಿನ ನಂತರ ವಕೀಲ ಜಗದೀಶ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಜಗದೀಶ … Continued

ನಾಳೆಯಿಂದ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಫೆಬ್ರವರಿ 14, ಸೋಮವಾರದಿಂದ ಆರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಮೊದಲ ದಿನ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು. ವಿಧಾನ ಮಂಡಲದ ಜಂಟಿ ಅಧಿವೇಶನದ ಕಾರ್ಯಕಲಾಪಗಳ ಬಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಸತತ ಎರಡನೇ ದಿನವೂ 4 ಸಾವಿರಕ್ಕೂ ಕಡಿಮೆ ಕೊರೊನಾ ಸೋಂಕುಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 3202 ಕೊರೊನಾ ಸೋಂಕು ದಾಖಲಾಗಿದೆ. ಶುಕ್ರವಾರ 3,976 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ರಾಜ್ಯದಲ್ಲಿ ಶನಿವಾರ 8988 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ಇದೇವೇಳೆ 38 ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ … Continued