ಹಿಜಾಬ್‌ ವಿವಾದ ಶಿವಮೊಗ್ಗದಲ್ಲಿ ತೀವ್ರ: ಕಾಲೇಜಿನ ಹೊರಭಾಗದಲ್ಲಿ ಕಲ್ಲತೂರಾಟ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಈಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ  144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್‌ … Continued

ಉಡುಪಿ: ಎಂಜಿಎಂ ಕಾಲೇಜಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಹಿಜಾಬ್-ಕೇಸರಿ ಶಾಲು ವಿವಾದ, ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರಿಂದ ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಧರಿಸಿ ಬಂದಿದ್ದು ಇದಕ್ಕೆ ಪ್ರತಿಯಾಗಿ ಕೇಸರಿ ಪೇಟ, ಕೇಸರಿ … Continued

ಕರ್ನಾಟಕದ ಮೊದಲ ಮಹಿಳಾ ಕನ್ನಡ ಶಾಲೆ ರಾತ್ರೋರಾತ್ರಿ ನೆಲಸಮ

ಮೈಸೂರು: ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಎನ್‍ಟಿಎಂಎಸ್ ಶಾಲೆಯ ಕಟ್ಟಡ ರಾತ್ರೋರಾತ್ರಿ ನೆಲಸಮಗೊಂಡಿಗದೆ. ಈ ಮೂಲಕ ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಈಗ ಇತಿಹಾಸ ಪುಟ ಸೇರಿದೆ. ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಇದು ವಿವಾದಿತ ಪ್ರದೇಶವಾಗಿತ್ತು. ರಾಜ್ಯ ಸರ್ಕಾರ ಶಾಲೆಯ ಜಾಗವನ್ನು ವಿವೇಕ ಸ್ಮಾರಕ ನಿರ್ಮಾಣಕ್ಕಾಗಿ … Continued

ದಾಂಡೇಲಿ: ಕಾಳಿ ನದಿಗೆ ಕೈ ತೊಳೆಯಲು ಹೋದಾಗ ಯುವಕನನ್ನು ಎಳೆದೊಯ್ದ ಮೊಸಳೆ..!

ಕಾರವಾರ: ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನೊಬ್ಬನನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಕೈ ತೊಳೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಅರ್ಷದ್ ಖಾನ್ (22) ಎಂದು ಗುರುತಿಸಲಾಗಿದೆ. ಈತದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ … Continued

ಸರ್ಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸಬೇಕು: ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ … Continued

ಕರ್ನಾಟಕದಲ್ಲಿ 6 ಸಾವಿರಕ್ಕೆ ಬಂದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಕಡಿಮೆಯಾಗಿದೆ. ಇಂದು, ಸೋಮವಾರ ಹೊಸದಾಗಿ 6151 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದೇವೇಳೆ ಕೊರೊನಾ ಸೋಂಕಿನಿಂದ 49 ಜನರು ಮೃತಪಟ್ಟಿದ್ದಾರೆ ಹಾಗೂ 16,802 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 87,080 ಸಕ್ರಿಯ ಪ್ರಕರಣಗಳಿವೆ. ಸಕಾರಾತ್ಮಕ ದರ ಶೇ 6.19, ಸೋಂಕಿತರ ಸಾವಿನ … Continued

ಹಿಜಾಬ್‌ ವಿವಾದ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಭಂಡಾರಕರ್ಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಂದ ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳು ಹಿಜಾಬ್‌ ಧರಿಸುವುದಕ್ಕೆ ಸಂಬಂಧಿಸಿದ ವಿವಾದ ತಾರಕ್ಕೇರಿರುವ ನಡುವೆಯೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ … Continued

ಯೋಗೀಶ ಗೌಡ ಕೊಲೆ ಪ್ರಕರಣ: ಸುಪ್ರಿಂ ಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಅರ್ಜಿ ವಜಾ

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಪ್ರಶ್ನಿಸಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮೇಲ್ಮನವಿಯನ್ನು ಸುಪ್ರಿಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ರಾಜ್ಯ ಸರ್ಕಾರ 2019 ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ಕುರಿತು … Continued

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಅವಕಾಶವಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಸರ್ಕಾರದ ಆದೇಶದಲ್ಲಿ ಧರ್ಮದ ಭೇದವಿಲ್ಲ ಮತ್ತು ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಕಾಲೇಜು ಆವರಣದಲ್ಲಿ ಅನುಮತಿಸಲಾಗುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು. ಉ ಉಡುಪಿ ಜಿಲ್ಲೆಯ ಕುಂದಾಪುರದ ಜೂನಿಯರ್ ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲುಗಳ ವಿವಾದದ ಮುಂದುವರಿದ ಮಧ್ಯೆ ಗೃಹ ಸಚಿವರ ಈ ಹೇಳಿಕೆ ಬಂದಿದೆ. ಈ ಸಂಸ್ಕೃತಿ … Continued

ಕುಂದಾಪುರ: ಈಗ ಮತ್ತೊಂದು ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಉಡುಪಿ: : ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತೆಲೆ ಇದ್ದು, ದಿನದಿಂದ ದಿನಕ್ಕೆ ಉಡುಪಿ ಜಿಲ್ಲೆಯ ಹೊಸ ಹೊಸ ಕಾಲೇಜುಗಳಲ್ಲಿ ಈ ವಿವಾದ ಹಬ್ಬುತ್ತಿದೆ. ಜಿಲ್ಲೆಯ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು.ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕ್ಯಾಂಪಸ್‌ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕೇಸರಿ … Continued