ದೆಹಲಿ ಗಣರಾಜ್ಯೋತ್ಸವ ಪರೇಡ್‌: ಕರ್ನಾಟಕದ ಸ್ತಬ್ದ ಚಿತ್ರಕ್ಕೆ ದ್ವಿತೀಯ ಸ್ಥಾನ

ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜಧಾನಿ ದೆಹಲಿಯ ಪರೇಡ್‍ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಉತ್ತಮವಾಗಿ ಪ್ರದರ್ಶನಗೊಂಡ ರಾಜ್ಯಗಳ ಸ್ತಬ್ಧಚಿತ್ರಗಳ ಪೈಕಿ ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ ಸಿಕ್ಕರೆ, ದ್ವಿತೀಯ ಸ್ಥಾನ ಕರ್ನಾಟಕ್ಕೆ ದೊರೆತಿದೆ. ಮೇಘಾಲಯಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಾರಿ … Continued

ಶಿರಸಿ ಬ್ಲ್ಯಾಕ್‌ ಮೇಲ್‌ ಪ್ರಕರಣ: ಮತ್ತೊಬ್ಬ ಆರೋಪಿಗಾಗಿ ಶೋಧ, ಶೀಘ್ರವೇ ಸತ್ಯ ಬಯಲಿಗೆ

ಕಾರವಾರ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ತಾಸಿನೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಬಂಧನಕ್ಕೆ ಶೋಧನಾ ಕಾರ್ಯ ನಡೆಯುತ್ತಿದೆ. ಶೀಘ್ರವೇ ಸತ್ಯಾಂಶ ಬಯಲಿಗೆಳೆಯಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ. ಈ ಬಗ್ಗೆ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಕರ್ನಾಟಕದಲ್ಲಿ ಶುಕ್ರವಾರ ಸೋಂಕು ಮತ್ತಷ್ಟು ಇಳಿಕೆ, 53 ಜನರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಶುಕ್ರವಾರ ಹೊಸದಾಗಿ 14,950 ಜನರಿಗೆ ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ 53 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 40,599 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,23,098 ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ … Continued

ಮುಂದುವರಿದ ಹಿಜಾಬ್‌ ವಿವಾದ: ಕುಂದಾಪುರ ಕಾಲೇಜಿಗೆ ನಾಳೆ ರಜೆ

ಉಡುಪಿ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.  ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದ ವರೆಗೆ ಮಾತ್ರ ಬಿಟ್ಟುಕೊಂಡಿದೆ. ಆದರೆ ತಮ್ಮನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು, ಶುಕ್ರವಾರ ತರಗತಿಗೆ … Continued

ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳಿಗೆ ಪಟ್ಟ

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮಠ ಗದಗ ಜಿಲ್ಲೆಯ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳು ನೇಮಕವಾಗಿದ್ದು, ಇಂದು, ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ನಡೆದಿದೆ. ಶ್ರೀಮಠಕ್ಕೆ ಇಂದು ನೂತನ ಉತ್ತರಾಧಿಕಾರಿಯನ್ನಾಗಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸರು ಮಠದ ಶ್ರೀಗಳಾದ ದಿಂಗಾಲೇಶ್ವರ ಸ್ವಾಮೀಜಿಗಳನ್ನು … Continued

ಬೆಂಗಳೂರಲ್ಲಿ ವೈಫ್ ಗಿವಿಂಗ್‌ ದಂಧೆಗೆ ಸಾರ್ವಜನಿಕ ಆಹ್ವಾನ ನೀಡಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪತಿ ಈಗ ಪೊಲೀಸರ ಅತಿಥಿ..!

ಬೆಂಗಳೂರು: ತನ್ನ ಹೆಂಡತಿಯನ್ನು ಬೇರೊಬ್ಬನ ಜೊತೆ ಲೈಂಗಿಕ ದಂಧೆಗೆ ಇಳಿಸಿ, ಅದನ್ನು ವಿಡಿಯೋ ಚಿತ್ರೀಕರಣ ಮಾಡುವ ವಿಲಕ್ಷಣ ಮನಸ್ಥಿತಿಯ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತಾಳಿ ಕಟ್ಟಿಸಿಕೊಂಡ ಹೆಂಡತಿಯನ್ನೇ ಪರಪುರುಷರ ಜೊತೆ ಮಲಗಿಸಿ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಹಣ ಮಾಡುವ ದಾರಿ ಕಂಡುಕೊಂಡಿದ್ದ ಈ ವ್ಯಕ್ತಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ … Continued

ಸಂಜಯಕುಮಾರ ಬಿರಾದಾರಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಇತ್ತಿಚಿಗಷ್ಟೆ ನಡೆದ ಸ್ವಾಮಿ ವಿವೇಕಾನಂದರ ೧೫೯ ನೇ ಜಯಂತಿ ಪ್ರಯುಕ್ತ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ೨೦೨೦/೨೧ ನೇ ಸಾಲಿನ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ವಿಭಾಗದ ವಿದ್ಯಾರ್ಥಿ ಸಂಜಯಕುಮಾರ ಬಿರಾದಾರ ಅವರಿಗೆ ನೀಡಲಾಯಿತು. ಯುವಸಬಲಿಕರಣ ಕ್ಷೇತ್ರದಲ್ಲಿನ ಸಂಜಯಕುಮಾರ … Continued

ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ: ಕೇರಳದಲ್ಲಿ ಪ್ರಮುಖ ಆರೋಪಿ ಬಂಧನ

ಮಂಗಳೂರು: ಸಾಲೆತ್ತೂರು ಅಗರಿಯಲ್ಲಿನ ವಧುವಿನ ಮನೆಗೆ ಬರುವಾಗ ಮದುಮಗ ಕೊರಗಜ್ಜ ದೈವದ ರೀತಿಯ ವೇಷ ಭೂಷಣದ ಧರಿಸಿ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಕೇರಳ ಉಪ್ಪಳ ಅಗರ್ತಿಮೂಲ ಉಮರುಲ್ ಭಾಷಿತ್ (28) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಕುಂಬಳೆ ಮಂಗಳಪಾಡಿ ನಿವಾಸಿ ಅಹ್ಮದ್ ಮುಜಿತಾಬು (27), ಗಾಳಿಯಡ್ಕ … Continued

ಸಿನೆಮಾ ಥಿಯೇಟರ್‌ಗಳಲ್ಲಿ ಹೌಸ್‌ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ಕೋವಿಡ್ ಆತಂಕದಿಂದಾಗಿ ಚಿತ್ರಮಂದಿರಗಳ ಮೇಲೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಇಂದು, ಶುಕ್ರವಾರ ಹಿಂಪಡೆದಿದೆ. ನಾಳೆಯಿಂದಲೇ (ಫೆಬ್ರವರಿ 5) ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅಂದರೆ ಥಿಯೇಟರ್‌ಗಳಲ್ಲಿ ಹೌಸ್‌ಫುಲ್ ಪ್ರದರ್ಶನಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು, ಮುಖ್ಯ ಕಾರ್ಯದರ್ಶಿಗಳು ಸಭೆ … Continued

ಈಗ ಬೈಂದೂರು ಕಾಲೇಜಿನಲ್ಲೂ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿದ ಬಂದ ವಿದ್ಯಾರ್ಥಿಗಳು

ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂಥದ್ದೇ ವಿವಾದ ಉಂಟಾಗಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ. ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ … Continued