ಮಂಗಳೂರು: ಅಪಾಯಕಾರಿ ಸಾಹಸ-ಆಳ ಬಾವಿಯಲ್ಲಿ ಬಿದ್ದಿದ್ದ ನಾಯಿಯನ್ನು ರಕ್ಷಿಸಿದ ಮಹಿಳೆ..ವೀಕ್ಷಿಸಿ

ಮಂಗಳೂರು: ಮಂಗಳೂರಿನಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಆಳವಾದ ಬಾವಿಗೆ ಬಬಿದ್ದಿದ್ದ ನಾಯಿಯನ್ನು ರಕ್ಷಿಸಿರುವ ಮನಮಿಡಿಯುವ ಘಟನೆ ನಡೆದ ವರದಿಯಾಗಿದೆ. ಈ ವಿಡಿಯೋ ಅಂತರ್ಜಾಲದಲ್ಲಿ ಈಗ ವೈರಲ್ ಆಗಿದೆ. ವಿಡಿಯೊದಲ್ಲಿ, ಬಾವಿಯೊಳಗೆ ಆಕಸ್ಮಿಕವಾಗಿ ಬಿದ್ದ ನಾಯಿಯನ್ನು ಮಹಿಳೆ ಹಗ್ಗದ ಸಹಾಯದಿಂದ ರಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ಮೌನಾ ಎನ್ನುವವರು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನಾಯಿಯನ್ನು ರಕ್ಷಿಸಿದ … Continued

ಕುಂದಾಪುರ: ಪರಿಚಯದ ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ..!

ಕುಂದಾಪುರ: ತಾಲೂಕಿನ ಬೇರೆ ಬೇರೆ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಬೆನ್ನಲ್ಲೇ ಗುರುವಾರ ಬೆಳಗ್ಗೆ ಬಿದ್ಕಲ್‌ ಕಟ್ಟೆ ಬಳಿ ಬಸ್ಸಿನಲ್ಲಿ ಐಟಿಐ ವಿದ್ಯಾರ್ಥಿಯ ಮೇಲೆ ಮೂವರು ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣ ಉದ್ವಿಗ್ನತೆ ಕಾರಣವಾಯಿತು. ಬಸ್ಸಿನಲ್ಲಿ ಪಯಣಿಸುತ್ತಿದ್ದ ಒಂದು ಕೋಮಿನ ವಿದ್ಯಾರ್ಥಿನಿಯೊಂದಿಗೆ ಯುವಕ ಮಾತನಾಡಿದ ಎಂಬ ಕಾರಣಕ್ಕೆ ಮೂವರು ಯುವಕರು ಐಟಿಐ ವಿದ್ಯಾರ್ಥಿ ಶಶಾಂಕ್‌ ಎಂಬವರ ಮೇಲೆ … Continued

ಶಿರಸಿ: ಉಪನ್ಯಾಸಕನ ಹುದ್ದೆ ಕೊಡಿಸುವುದಾಗಿ ನಂಬಿಸಿ ಬಲವಂತವಾಗಿ ಮಹಿಳೆ ಜೊತೆ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‌ ಮೇಲ್ – ಮೂವರ ಬಂಧನ

ಶಿರಸಿ: ಉದ್ಯೋಗ ಕೊಡಿಸುವುದಾಗಿ ಹೇಳಿ ಬ್ಲ್ಯಾಕ್‌ ಮೇಲ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ಉಂಚಳ್ಳಿ  ಕೆರೆಜಡ್ಡಿಯ ಅಜಿತ ಶ್ರೀಕಾಂತ್ ನಾಡಿಗ (25), ಬನವಾಸಿಯ ಧನುಶ್ಯ ಕುಮಾರ್ ಅಲಿಯಾಸ್‌ ದಿಲೀಪ್ ಕುಮಾರ್ ಶೆಟ್ಟಿ (25) ಮತ್ತು ಶಿವಮೊಗ್ಗ ನಗರದ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 16,436 ಜನರಿಗೆ ಕೊರೊನಾ ಸೋಂಕು ದಾಖಲು, 60 ಜನರ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 16,436 ಜನರಿಗೆ ಸೋಂಕು ದೃಢಪಟ್ಟಿದೆ. ಹಾಗೂ ಸೋಂಕಿಗೆ 60 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ ರಾಜ್ಯದಲ್ಲಿ 44,819 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 38,60,774 ಮಂದಿಗೆ ಕೊರೊನಾ ಬಂದಿದೆ. ಒಟ್ಟು 36,72,744 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.36% … Continued

ಉಡುಪಿ ಹಿಜಾಬ್ ವಿವಾದ: ಫೆಬ್ರವರಿ 8ಕ್ಕೆ ಹೈಕೋರ್ಟಿನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು: ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿ ವಿದ್ಯಾರ್ಥಿನಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ನಡೆಸಲಿದೆ. ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿ ಸಲ್ಲಿಸಿರುವ ಅರ್ಜಿಯನ್ನು ಇಂದು, ಗುರುವಾರ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು ಎಂದು ಲೈವ್‌ ಲಾ ವರದಿ … Continued

ಕಂದಾಯ ದಾಖಲೆಗಳನ್ನು ಕೂಡಲೇ ಮನೆ ಬಾಗಿಲಿಗೆ ತಲುಪಿಸಿ: ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ

ಬೆಂಗಳೂರು: ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಅದನ್ನು ತಕ್ಷಣವೇ ತಲುಪಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಕುರಿತು ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ. ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದ್ದು, ಈ ಯೋಜನೆಯಡಿ … Continued

ಕಾರವಾರ: ಡೆತ್ ನೋಟ್ ಬರೆದಿಟ್ಟು ಹೊಟೇಲಿನಲ್ಲಿ ಸಹಾಯಕ ಕಮಿಷನರ್ ಕಚೇರಿ ನೌಕರ ಆತ್ಮಹತ್ಯೆ

ಕಾರವಾರ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ನೌಕರನೋರ್ವ ಖಾಸಗಿ ಹೊಟೇಲಿನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಹೊನ್ನಾವರ ಮೂಲದ ಈಶ್ವರ ಭಟ್ಟ (38) ನೇಣಿಗೆ ಶರಣಾದ ಎಂದು ಗುರುತಿಸಲಾಗಿದೆ. ಇವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನ ಅನಾರೋಗ್ಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ … Continued

ಶಾಲಾ-ಕಾಲೇಜುಗಳಿಗೆ ಯಾರೂ ಹಿಜಾಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ. ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯಬೇಕು. ಎಲ್ಲರೂ ಕೂಡಾ ಈ ಬಗ್ಗೆ … Continued

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜ್‌ ಒಳಗೆ ಪ್ರವೇಶ ನಿರಾಕರಣೆ

ಕುಂದಾಪುರ: ಉಡುಪಿ ಹಿಜಾಬ್ ವಿವಾದ ಈಗ ಕುಂದಾಪುರ ಸರಕಾರಿ ಕಾಲೇಜಿನಲ್ಲಿಯೂ ಪ್ರತಿಧ್ವನಿಸಿದ್ದು ಇಂದು, ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ತರಗತಿಗೆ ಪ್ರವೇಶ ನಿರಾಕರಿಸಿದ್ದಾರೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದಿದ್ದಾರೆ.ಸರ್ಕಾರದ ಸುತ್ತೋಲೆಯಂತೆ ಹಿಜಾಬ್‌ ಇಲ್ಲದೆ ತರಗತಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಈ … Continued

ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು; ಪತ್ನಿ ಸಾವು, ಪತಿ ಪಾರು

ಶಿವಮೊಗ್ಗ : ಗಾಜನೂರು ಬಳಿ ದಾರಿಗೆ ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಎಡದಂಡೆ ನಾಲೆಗೆ ಬಿದ್ದುಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಾಲನೆ ಮಾಡುತ್ತಿದ್ದ ಪತಿ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸುಷ್ಮಾ( 28) ಎಂಬವರು ಮೃತಪಟ್ಟಿದ್ದು ಪತಿ ಚೇತನಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. … Continued