ತುಮಕೂರು: ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಮುಳುಗಿ ಸಾವು

ತುಮಕೂರು: ಕುರಿ ಮೇಯಿಸುವ ವೇಳೆಯಲ್ಲಿ ಕೆರೆಯಲ್ಲಿದ್ದ ಗುಂಡಿಯ ಬಳಿ ಹೋದ ಒಂದೇ ಕುಟುಂಬದ ಮೂವರು ಮಕ್ಕಳು ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾವಗಡದಲ್ಲಿ ಶನಿವಾರ ನಡೆದಿದೆ. ಜಿಲ್ಲೆಯ ಪಾವಗಡ ತಾಲ್ಲೂಕಿನ ಎಸ್.ಆರ್.ಪಾಳ್ಯದ ಬಳಿಯ ಪದ್ಮರಾಜನ ಕೆರೆಯಲ್ಲಿರುವ ಗುಂಡಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕಿಯರು, ಓರ್ವ ಬಾಲಕ ಮೃತಪಟ್ಟಿದ್ದಾರೆ. ಮೃತರನ್ನು ದೇವರಾಯನ ರೊಪ್ಪದ ಷರೀಫ್(10), … Continued

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕಾದರೆ ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಬೇಕು: ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020’ ಅನ್ನು ಜಾರಿಗೊಳಿಸಬೇಕಾದರೆ ರಾಜ್ಯ ಸರ್ಕಾರವು ಪ್ರತಿ ಗ್ರಾಮದಲ್ಲೂ ಗೋಶಾಲೆ ತೆರೆಯಬೇಕಾಗುತ್ತದೆ ಎಂದು ಗುರುವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಹೇಳಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, … Continued

ವಿದ್ಯುತ್ ಸರಬರಾಜು ಕಂಪನಿಗಳ ಅಸಮರ್ಥತತೆಯಿಂದಾದ ನಷ್ಟ ಬಳಕೆದಾರರ ಮೇಲೆ ಹೇರುವುದ್ಯಾಕೆ..? ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ವಿದ್ಯುತ್ ಸರಬರಾಜು ಕಂಪನಿಗಳು ೨೦೨೦-೨೧ರಲ್ಲಿ ೧೩೫೨.೧೪ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರಿಂದ ಈ ಕೊರತೆ ವಿದ್ಯತ್ ದರ ಏರಿಕೆ ಮೂಲಕ ಭರಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿವೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಹೇಳಿಕೆ ನೀಡಿದೆ. ಕಂಪನಿಗಳ ಆಡಳಿತ ಅಸಮರ್ಥತೆ ಮತ್ತು ವೈಫಲ್ಯತೆಯಿಂದ ಅನುಭವಿಸಿದ ನಷ್ಟ ರಾಜ್ಯದ ೫೫,೫೭,೧೦೮ … Continued

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು 30 ವರ್ಷದ ವೈದ್ಯೆ ಸೌಂದರ್ಯ ಇಂದು, ಶುಕ್ರವಾರ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಂಫ್ರಿಲಾ ಹೋಟೆಲ್ ಬಳಿಯ ಆಪಾರ್ಟ್ ಮೆಂಟ್‌ ಕೊಠಡಿಯ ಫ್ಯಾನ್ ಗೆ ನೇಣು ಬಿಗಿದು ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ … Continued

ಐಟಿ ಸೋಗಿನಲ್ಲಿ ಮನೆಗೆ ಬಂದು ದರೋಡೆ: ಐವರ ಬಂಧನ

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಂಜಯನಗರ ಪೊಲೀಸರು ೧.೭ ಲಕ್ಷ ನಗದು, ಕಾರು, ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಂಜಯನಗರದ ಮಂಜುನಾಥ, ಮಹಮ್ಮದ್ ಶೋಯಬ್ ರಬ್ಬಾನಿ ಅಲಿಯಾಸ್ ಪಾಕರ್ ಅಲಿ, ಪ್ರಶಾಂತಕುಮಾರ್, ದುರ್ಗೇಶ ಹಾಗೂ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ವಿನಾಯಕ ವಸಂತರಾವ್ … Continued

ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ’ ಸಭೆ: ನಿರ್ಬಂಧಗಳು ಇನ್ನಷ್ಟು ಸಡಿಲ..?

ಬೆಂಗಳೂರು: ನಾಳೆ ಕೋವಿಡ್ ನಿಯಂತ್ರಣ ಸಭೆ ನಡೆಯುತ್ತಿದ್ದು, ಸಭೆಯ ನಂತರ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಈಗ ನೈಟ್ ಕರ್ಫ್ಯೂ ( Night Curfew ) ಹಾಗೂ ಹೆಚ್ಚು ಜನರು ಸೇರುವುದಕ್ಕೆ ನಿರ್ಬಂಧವಿದೆ. ಈಗಾಗಲೇ ರಾತ್ರಿ ಕರ್ಫ್ಯೂ … Continued

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು, ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ (30) ಅವರು ಪತ್ತೆಯಾಗಿದ್ದಾರೆ. ಡಾ.ಸೌಂದರ್ಯ ಅವರು ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ … Continued

ಕೋವಿಡ್ ಪರೀಕ್ಷೆಗೆ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು. ವಿದೇಶದಿಂದ ಬರುವವರಿಗೆ ಎಂದಿನಂತೆ ಟೆಸ್ಟಿಂಗ್ ಇರುತ್ತದೆ ಎಂದು ಮಾರ್ಗಸೂಚಿ ತಿಳಿಸಿದೆ. : ಕರ್ನಾಟಕ ಸರ್ಕಾರವು ಕೊರೊನಾ ವೈರಸ್ ಸೋಂಕು ಪತ್ತೆಗೆ ರೂಪಿಸಿರುವ … Continued

ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ. ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continued

ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸಾವು

ಚಾಮರಾಜನಗರ: ಹನೂರು ತಾಲೂಕಿನಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಣೆಗೆ ಹೋಗಿದ್ದ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಮೈಸೂರು ಮೂಲದ ನರ್ಸಿಂಗ್ ವಿದ್ಯಾರ್ಥಿ ಉಮಾಶಂಕರ (19) ಮೃತ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಗುರುವಾರ ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ಅಂಚಿನಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಘಟನೆ ನಡೆದಿದೆ ಎಂದು … Continued