ಕರ್ನಾಟಕದಲ್ಲಿ 38 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ: ಬೆಂಗಳೂರಲ್ಲೂ ಇಳಿಕೆ ಕಾಣುತ್ತಿರುವ ಸೋಂಕು..

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 38,083 ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಇದೇವೇಳೆ ರಾಜ್ಯದಲ್ಲಿ 67,236 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ರಾಜ್ಯಾದ್ಯಂತ ಚಿಕಿತ್ಸೆ ಫಲಿಸದೆ 49 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 3,28,711ಕ್ಕೆ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿನ ಕೋವಿಡ್ ಪಾಸಿಟಿವಿಟಿ ದರ … Continued

ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ

ಬೆಂಗಳೂರು: ಮುಂದಿನ‌ ತಿಂಗಳು ಫೆ.14ರಿಂದ 25ರ ವರೆಗೆ ವಿಧಾನ ಮಂಡಲ ಅಧೇವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ … Continued

9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಎಸ್​ಪಿಯಾಗಿದ್ದ ರವಿ ಡಿ‌ ಚನ್ನಣ್ಣನವರ್​ ಅವ​ರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಳಿಸಲಾಗಿದೆ‌.‌ ಇವರೊಂದಿಗೆ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ್ ಗುಳೇದ ಅವರನ್ನು ಸಿಐಡಿಯಿಂದ ನಗರದ ಪೂರ್ವ ವಿಭಾಗದ ಡಿಸಿಪಿಯಾಗಿ, ಅಬ್ದುಲ್ ಅಹದ್ … Continued

ವಿಧಾನ ಪರಿಷತ್‌ ವಿಪಕ್ಷ ಸ್ಥಾನ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ: ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಲು ಸಿ.ಎಂ.ಇಬ್ರಾಹಿಂ ನಿರ್ಧಾರ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ ​ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ಸಿನ​ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗಾಗಿ ದೇವೇಗೌಡರನ್ನು ಬಿಟ್ಟಿದ್ದೆವು. ಸಿದ್ದರಾಮಯ್ಯ ಸಲುವಾಗೆ ದೇವೇಗೌಡರನ್ನು ಬಿಟ್ಟು ಬಂದೆ. 1996ರಲ್ಲಿ ರಾಜ್ಯಸಭೆ ಟಿಕೆಟ್ ಘೋಷಿಸಿ ಕ್ಯಾನ್ಸಲ್ ಮಾಡಿದರು. ಆಗ ಕಾಂಗ್ರೆಸ್ … Continued

ಬೆಂಗಳೂರು ನಗರದಲ್ಲಿ ಮತ್ತೆ ಶಾಲೆ ಆರಂಭ?

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ನಗರದ ಶಾಲೆಗಳು ಮುಂದಿನ ವಾರದಿಂದ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು ಬುಧವಾರ ಮಡಿಕೇರಿಯಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಜ. 29ರಂದು ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ. ಕೋವಿಡ್ ಸೋಂಕು ಹೆಚ್ಚಿದಂತೆ ಹಲವು ಶಾಲಾ ವಿದ್ಯಾರ್ಥಿಗಳಿಗೂ ಸೋಂಕು ತಗುಲಿತ್ತು. ಅದು ಪಾಲಕರಲ್ಲಿ … Continued

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ ನೇಮಕ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ನೂತನವಾಗಿ ವಿಧಾನ ಪರಿಷತ್ ನಾಯಕ, ಮುಖ್ಯ ಸಚೇತಕ ಮತ್ತು ವಿಧಾನ ಪರಿಷತ್ ಉಪ ನಾಯಕರನ್ನು ನೇಮಿಸಲಾಗಿದೆ. ಈಗ ಬಿ.ಕೆ.ಹರಿಪ್ರಸಾದ ಅವರನ್ನು ಕಾಂಗ್ರೆಸ್ಸಿನ ವಿಧಾನ ಪರಿಷತ್ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಅವರು, ವಿಧಾನ … Continued

ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜ್‌ ಹಿಜಾಬ್ ವಿವಾದ ಪರಿಹರಿಸಲು ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಮಂಗಳವಾರ, ಜನವರಿ 25 ರಂದು ಉಡುಪಿಯಲ್ಲಿ ಹಿಜಾಬ್ ವಿವಾದವನ್ನು ಪರಿಹರಿಸಲು ತಜ್ಞರ ಸಮಿತಿಯನ್ನು ರಚಿಸಿದೆ ಮತ್ತು ಸಮಿತಿಯು ಈ ಬಗ್ಗೆ ನಿರ್ಧರಿಸುವ ವರೆಗೆ ಉಡುಪಿಯ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಏಕರೂಪದ ನಿಯಮವನ್ನು ಅನುಸರಿಸಬೇಕು ಎಂದು ಹೇಳಿದೆ. ಇದು ಸಮವಸ್ತ್ರದ ಭಾಗವಲ್ಲ ಎಂದು ಹೇಳಿ ತರಗತಿಯಲ್ಲಿ ಹಿಜಬ್ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 48,905 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 48,905 ಕೊರನಾ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,427 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3654413ಕ್ಕೆ ಏರಿಕೆಯಾಗಿದೆ, ಇದುವರೆಗೆ 3257769 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 357909 ಸಕ್ರಿಯ ಪ್ರಕರಣಗಳಿವೆ. ಬಾಗಲಕೋಟೆ 610, ಬಳ್ಳಾರಿ 1,141, ಬೆಳಗಾವಿ 791, ಬೆಂಗಳೂರು … Continued

ಜೆಡಿಎಸ್‍ನಿಂದ 20 ಸದಸ್ಯರ ನೂತನ ಕೋರ್ ಕಮಿಟಿ ರಚನೆ

ಬೆಂಗಳೂರು: ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಅವರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಟ್ಟಿಯನ್ನು ಇಂದು, ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎನ್.ಎಂ.ನಬಿ ಅವರನ್ನು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗೆಯೇ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ … Continued

ಆನ್ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನಾಳೆಯಿಂದ ಆರಂಭ

ಬೆಂಗಳೂರು : 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಜನವರಿ 27ರಿಂದ (ಗುರುವಾರ) 30ರ ವರೆಗೆ ನಾಲ್ಕು ದಿನಗಳ ಕಾಲ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು … Continued