ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ವಿಟ್ಲ ಕುಂಡಡ್ಕ ಮೂಲದ ಗರ್ಭಿಣಿ ಸವಿತಾ (33) ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು … Continued

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜನತಾದಳ (ಜಾತ್ಯತೀತ) ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ ಎಂದು ಅವರ ಕಚೇರಿ ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಎಚ್.ಡಿ.ದೇವೇಗೌಡ (88) ಅವರು ಲಕ್ಷಣರಹಿತರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ … Continued

ಕೆಎಸ್‌ಆರ್‌ಟಿಸಿಗೂ ಬರಲಿವೆ ಮೂರು ಎಲೆಕ್ಟ್ರಿಕ್ ಬಸ್‌:ವರದಿ

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮೊದಲ ಎಲೆಕ್ಟ್ರಿಕ್ ಬರಲಿದೆ ಎಂದು ವರದಿಯಾಗಿದೆ. ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಕೆಎಸ್‌ಆರ್‌ಟಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 48,049 ಕೊರೊನಾ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಇಂದು,ಶುಕ್ರವಾರ 48,049 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು 22 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 18,115 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ತಲುಪಿದೆ. ಪಾಸಿಟಿವಿಟಿ ರೇಟ್ 19.23% ರಷ್ಟಿದೆ. ಬೆಂಗಳೂರಿನಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಪ್ರಕರಣಗಳ … Continued

ಗೋವಾ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಸಂಚಾಲಕರಾಗಿ ಸದಾನಂದ ಡಂಗನವರ ನೇಮಕ

ಹುಬ್ಬಳ್ಳಿ: ಗೋವಾ ರಾಜ್ಯದ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಸಂಚಾಲಕರನ್ನಾಗಿ ( ಕೋ ಆರ್ಡಿನೇಟರ್) ಸದಾನಂದ ವಿ.ಡಂಗನವರ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ಗೋವಾದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ … Continued

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ:ಸಚಿವ ಸುನಿಲಕುಮಾರ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೇಕಾದ ಸಂಪನ್ಮೂಲ ಕ್ರೂಢೀಕರಿಸಲು ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳುವ ಮೂಲಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್‌ಕುಮಾರ್, ವಿದ್ಯುತ್ ದರ ಏರಿಕೆಯ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಲ್ಲಿ ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಹಾಗಾಗಿ ವಿದ್ಯುತ್ ದರ ಏರಿಕೆ … Continued

ರಾಜ್ಯಾದ್ಯಂತ ಶಾಲಾ-ಕಾಲೇಜು ಮುಂದುವರಿಕೆ ; ಬೆಂಗಳೂರಿನ ಬಗ್ಗೆ ಮುಂದಿನ ವಾರ ನಿರ್ಧಾರ: ಸಚಿವ ನಾಗೇಶ

ಬೆಂಗಳೂರು : ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ನಡೆಯಲಿವೆ. ಬೆಂಗಳೂರಿನಲ್ಲಿ ಶಾಲೆಗಳ ಆರಂಭ ಕುರಿತು ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಹೇಳಿದ್ದಾರೆ. ಶುಕ್ರವಾರ ಕೋವಿಡ್‌ ತಜ್ಞರ ಜೊತೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾಹಿತಿ ನೀಡಿದ ಅವರು, ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಕಡೆ … Continued

ಮಹತ್ವದ ನಿರ್ಧಾರ…ಕರ್ನಾಟಕದಲ್ಲಿ ವೀಕೆಂಡ್‌ ಕರ್ಫ್ಯೂ ಎರಡೇ ವಾರಕ್ಕೆ ಅಂತ್ಯ.. ನಾಳೆಯಿಂದ ಇರಲ್ಲ

ಬೆಂಗಳೂರು: ಕೋವಿಡ್‌ ನಿಯಂತ್ರಿಸಲು ಹೇರಿದ್ದ ವಾರಾಂತ್ಯದ ಕರ್ಫ್ಯೂವನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್‌ ಕರ್ಫ್ಯೂ ಅಂತ್ಯಗೊಂಡಿದೆ. ಇಂದು, ಶುಕ್ರವಾರ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್‌ ಕರ್ಫ್ಯೂ ನಾಳೆಯಿಂದ ಇರುವುದಿಲ್ಲ. ಆದರೆ … Continued

ಸತ್ತಿದ್ದಾನೆಂದು ಭಾವಿಸಿ ಅಂಬುಲನ್ಸ್​ನಲ್ಲಿ ಅಂತ್ಯಸಂಸ್ಕಾರಕ್ಕೆ ಸಾಗಿಸುವಾಗ ಕಣ್ಣು ತೆರೆದ..!

ಮಂಗಳೂರು: ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಅಂಬುಲೆನ್ಸ್​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಆತ ಕಣ್ಣು ಬಿಟ್ಟು ಉಸಿರಾಡಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನಿವಾಸಿ ಗುರುವ (60) ಎಂಬವರನ್ನು ವಯೋಸಹಜ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿತ್ತು. ರೋಗಿಯು ಆಕ್ಸಿಜನ್ ಸಹಾಯದಿಂದ ಉಸಿರಾಟ … Continued

ಕವಿ ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರದ ನಿರ್ಧಾರ

ಹುಬ್ಬಳ್ಳಿ:  ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜ್ವರದಿಂದ ಬಳಲುತ್ತಿರುವ ಚನ್ನವೀರ ಕಣವಿ ಜನವರಿ ೧೪ ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ … Continued