ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ವೈಕುಂಠ ಏಕಾದಶಿಗೆ ಜನ ಸೇರುವಂತಿಲ್ಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವರ್ಚುಲ್‌ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸಭೆಯ ಬಳಿಕ ಮಾತಾನಾಡಿದ ಅವರು, ಜಾತ್ರೆ, ಸಮಾವೇಶ, ಪ್ರತಿಭಟನೆಯಲ್ಲಿ ಜನಸಂದಣಿ ಸೇರುವಂತಿಲ್ಲ. ಹಾಗೂ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಪಾಲಿಸಬೇಕು. ವೈಕುಂಠ ಏಕಾದಶಿಯೆಂದು ದೇವಸ್ಥಾನದಲ್ಲಿ ಸಂಪ್ರದಾಯದಂತೆ ಮಾತ್ರ ಪೂಜೆ … Continued

ಮೇಕೆದಾಟು ಪಾದಯಾತ್ರೆ ಕೋವಿಡ್ ನಿಯಮ ಉಲ್ಲಂಘನೆ: ಡಿ.ಕೆ. ಸಹೋದರರು ಸೇರಿ 41 ಜನರ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲು..!

ರಾಮನಗರ: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎರಡನೇ ಎಫ್‌ಐಆರ್ ದಾಖಲಿಸಿದ್ದಾರೆ. ಎರಡನೇ ಎಫ್‌ಐಆರ್‌ನಲ್ಲಿ 41 ಮಂದಿಯನ್ನು ಹೆಸರಿಸಲಾಗಿದೆ. ಕೋವಿಡ್-19 ನಿರ್ಬಂಧಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಎರಡನೇ ಎಫ್‌ಐಆರ್‌ ದಾಖಲಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ … Continued

ಸಚಿವ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ  ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ತಗುಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ವಿಮಾನನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿ ನಂತರ ಮನೆಗೆ ಮರಳಿದರು. ಮುಖ್ಯಮಂತ್ರಿಗಳಿಗೆ ಕೊರೊನಾ ತಗುಲಿದ ನಂತರ ಅವರ ಸಂಪರ್ಕದಲ್ಲಿದ್ದ ಸಚಿವರು ಪರೀಕ್ಷೆಗೆ ಒಳಗಾಗುತ್ತಿದ್ದು, ಸಚಿವ ಮಾಧುಸ್ವಾಮಿ … Continued

ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ಪ್ರಕರಣ ವಿಚಾರಣೆಯನ್ನು ಜನವರಿ ೨೫ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಮೂವರು ಸದಸ್ಯರ ಪೀಠ ಹೇಳಿದೆ. ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು, ಮಂಗಳವಾರ ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಅಣೆಕಟ್ಟು ಸುರಕ್ಷತೆ ಸಂಬಂಧಿಸಿದ … Continued

ಭಾರತೀಯ ವಾಣಿಜ್ಯೋದ್ಯಮಿ ಬಿ.ಆರ್.ಶೆಟ್ಟಿಗೆ ಶಾಕ್: ಬಾರ್ಕ್ಲೇಸ್‌ಗೆ 968 ಕೋಟಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ

ನವದೆಹಲಿ: ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಎನ್‌ಎಂಸಿ (NMC) ಹೆಲ್ತ್ ಸಂಸ್ಥಾಪಕರ ವಿರುದ್ಧ ಸುಮಾರು $131 ಮಿಲಿಯನ್‌ ಹಣ (ಸುಮಾರು 968.27 ಕೋಟಿ ರೂ.ಗಳು) ಬಾರ್ಕ್ಲೇಸ್ ಕಾನೂನು ಹೋರಾಟವನ್ನು ಗೆದ್ದಿದೆ. 2020 ರಲ್ಲಿ ಬಾರ್‌ಕ್ಲೇಸ್‌ನೊಂದಿಗಿನ ವಹಿವಾಟು ಒಪ್ಪಂದವನ್ನು ಪೂರೈಸಲು ವಿದೇಶಿ ವಿನಿಮಯ ವ್ಯವಹಾರ ವಿಫಲವಾದ ನಂತರ ದುಬೈ ನ್ಯಾಯಾಧೀಶರು ಭಾರತದ ಅನಿವಾಸಿ ಉದ್ಯಮಿ ಬಿ.ಆರ್‌. ಶೆಟ್ಟಿ (ಬಾವಗುತ್ತು … Continued

ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ: 20ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಮಂಗಳೂರು: ಬೈಕಂಪಾಡಿಯ  ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ರಾಸಾಯನಿಕ ಸೋರಿಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು, ಅವರಲ್ಲಿ 20ಕ್ಕೂ ಹೆಚ್ಚು  ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಅವರನ್ನು ಮುಕ್ಕ … Continued

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಎಚ್ ಎಮ್ ರೇವಣ್ಣಗೆ ಕೊವಿಡ್ ಸೋಂಕು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ಎಚ್.ಎಂ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಈಗ ಕೋವಿಡ್‌ ಕಠಿಣ ನಿಯಮ ಜಾರಿಯಲ್ಲಿದ್ದರೂ ಲೆಕ್ಕಿಸದೆ ಕಾಂಗ್ರೆಸ್ ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು ಜನವರಿ 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ … Continued

ಸಿಎಂ ಬೊಮ್ಮಾಯಿ ಪುತ್ರನಿಗೂ ಕೊರೊನಾ ಸೋಂಕು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಬೊಮ್ಮಾಯಿ ಅವರ ಪುತ್ರ ಭರತ ಬೊಮ್ಮಾಯಿ ಮತ್ತು ಅವರಿಗೂ ಕೋವಿಡ್ ಸೋಂಕು ತಗುಲಿದೆ. ಈ ಕುರಿತಂತೆ ಭರತ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ … Continued

ರಾಜಕೀಯಕ್ಕೆ ಶಾಲಾ ಮಕ್ಕಳ ಬಳಕೆ-ಮಾಸ್ಕ್‌ ಇಲ್ಲದೆ ಸಂವಹನ: ಡಿಕೆಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕರ್ನಾಟಕ ಡಿಜಿಪಿಗೆ ಎನ್‌ಸಿಪಿಸಿಆರ್‌ ಪತ್ರ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಸೋಮವಾರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ಜಾರಿ ಮಾಡಿದ್ದು, ಶಾಲಾ ಮಕ್ಕಳನ್ನು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮತ್ತು ಅವರೊಂದಿಗೆ ಮಾಸ್ಕ್ ಇಲ್ಲದೆ ಸಂವಹನ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು … Continued

ಕರ್ನಾಟಕದಲ್ಲಿ ಸೋಮವಾರ ಹೊಸದಾಗಿ 11,698 ಕೊರೊನಾ ಸೋಂಕು, ಬೆಂಗಳೂರಲ್ಲಿ 146 ಓಮಿಕ್ರಾನ್‌ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇವೇಳೆ ಬೆಂಗಳೂರಿನಲ್ಲಿ 146 ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ, ಅದರಲ್ಲಿ ಇಬ್ಬರು ಬೆಂಗಳೂರಿನವರು. ರಾಜ್ಯಾದ್ಯಂತ ಇಂದು 1,148 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಈಗ 60,148 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ … Continued