ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ವಿರುದ್ಧ ಹೊಸ ಸೆಕ್ಷನ್ ಹಾಕಿದ ಎಸ್‌ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ವಿಸ್ತರಿಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಸುಳ್ಳು ಸಾಕ್ಷ್ಯಾಧಾರ, ನಕಲಿ ದಾಖಲೆ ಮತ್ತು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಗೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ … Continued

ಭಾರೀ ಮಳೆ ; ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಜೆ ಘೋಷಣೆ

ಕಾರವಾರ :ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಜಿಲ್ಲೆಯ 10 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 31ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಭಾರೀ ಮಳೆ ಆರ್ಭಟ ಇರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲಿಯೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ … Continued

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (Greater Bengaluru Authority) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಐದು ವಲಯದ … Continued

ಹೊನ್ನಾವರ | ಮಾರುತಿ ಓಮ್ನಿ ವಾಹನದ ನಾಲ್ಕೂ ಟೈರ್‌ ಕದ್ದೊಯ್ದ ಕಳ್ಳರು

ಹೊನ್ನಾವರ: ಮಾರುತಿ ಓಮ್ನಿ ವಾಹನದ ನಾಲ್ಕೂ ಟೈರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯ ಕಸ್ತೂರಬಾ ನಗರದ ನಿವಾಸಿ ಸತೀಶ ಶೆಟ್ಟಿ ಎಂಬವರಿಗೆ ಸೇರಿದೆ. ಅವರು ಹೊನ್ನಾವರ ತಾಲೂಕಿನ ಬಾಳೆಗದ್ದೆ ಸಂಬಂಧಿಕರ ಮನೆಗೆ ಹೋದಾಗ ಈ ಘಟನೆ ನಡೆದಿದೆ. ರಾತ್ರಿ ಅವರು ರಸ್ತೆ … Continued

ಶಿರಸಿ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಹಳೆಯ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ ನಾರಾಯಣ … Continued

ಕನ್ನಡದ ಖ್ಯಾತ ಪೋಷಕ ನಟ ದಿನೇಶ ಮಂಗಳೂರು ನಿಧನ

ಉಡುಪಿ : ಕೆಜಿಎಫ್‌ ಸೇರಿದಂತೆ ಅನೇಕ‌ ಸಿನಿಮಾಗಳಲ್ಲಿ ನಟಿಸಿದ್ದ ಪ್ರತಿಭಾನ್ವಿತ ನಟ, ಕಲಾನಿರ್ದೇಶಕ ದಿನೇಶ ಮಂಗಳೂರು ಇಂದು ಭಾನುವಾರ (ಆಗಸ್ಟ್‌ 25) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ ಮಂಗಳೂರು ಅವರು ಕಳೆದ ಐದು ದಿನಗಳಿಂದ ಪಾರ್ಶ್ವವಾಯುವಿಗೆ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು … Continued

ಧರ್ಮಸ್ಥಳ ಪ್ರಕರಣ : ಸತತ 5 ಗಂಟೆ ಯೂ ಟ್ಯೂಬರ್‌ ಸಮೀರ್‌ ವಿಚಾರಣೆ

ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಯೂಟ್ಯೂಬರ್‌ ಎಂ.ಡಿ. ಸಮೀರ್ ಸತತ 5 ಗಂಟೆ ವಿಚಾರಣೆ ಎದುರಿಸಿದ್ದಾನೆ. ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದಿರುವ ಪೊಲೀಸರು, ಸೋಮವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದಿಬಂದಿದ್ದು, ಮೊಬೈಲ್ ಹಾಗೂ ಯೂಟ್ಯೂಬ್‌ಗೆ ವೀಡಿಯೊ ಅಪ್‌ಲೋಡ್ … Continued

ಕರ್ನಾಟಕದಲ್ಲಿ ಆಗಸ್ಟ್ 30ರ ವರೆಗೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 25ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ … Continued

ಬೆಳಗಾವಿ | ಮನವೊಲಿಕೆ ಸಫಲ ; ದೇಹತ್ಯಾಗದ ನಿರ್ಧಾರದಿಂದ ಹಿಂದೆ ಸರಿದರು…

ಬೆಳಗಾವಿ : ದೇಹ ತ್ಯಾಗ ಮಾಡುತ್ತಾರೆ ಎಂಬ ವದಂತಿ ಕೊನೆಗೂ ಸುಖಾಂತ್ಯಗೊಂಡಿದೆ. ಅಧ್ಯಾತ್ಮಿಕ ಪಂಥವೊಂದಕ್ಕೆ ಮಾರು ಹೋಗಿ ಸೆಪ್ಟೆಂಬರ್ 8 ರಂದು ದೇಹತ್ಯಾಗ ಮಾಡಲು ಮುಂದಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಕೆಲವರು ಕೊನೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಅನಂತಪುರ ಗ್ರಾಮದ ತುಕಾರಾಮ ಇರಕರ ಕುಟುಂಬದ ನಾಲ್ವರು ಮತ್ತು … Continued