ಹುಬ್ಬಳ್ಳಿ: ಭಾರತೀಯ ಕಿಸಾನ್‌ ಸಂಘದ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ ಉದ್ಘಾಟನೆ

ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಘಟಕದ ವತಿಯಿಂದ ಆಯೋಜಿಸಲಾಗಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ-೨೦೨೨ ಗೋ ಪೂಜೆಯೊಂದಿಗೆ ಸೋಮವಾರ ಆರಂಭವಾಯಿತು. ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಎಂಟನೂರು ದೇಶಿ ಗೋವುಗಳ ಸಂರಕ್ಷರ ಭರಮಣ್ಣ ಗುರಿಕಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗೋವುಗಳು ದೇವರಿದ್ದಂತೆ. ಬಹುಪಯೋಗಿಯಾಗಿವೆ. ಪ್ರತಿಯೊಬ್ಬರೂ … Continued

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು…ಬೆಂಗಳೂರಿನಲ್ಲಿಯೇ ಶೇ.75ಕ್ಕೂ ಹೆಚ್ಚು ಪ್ರಕರಣಗಳು ದಾಖಲು..!

ಬೆಂಗಳೂರು: ಕರ್ನಾಟಕವು ಶನಿವಾರ ಕೋವಿಡ್ ಪ್ರಕರಣಗಳಲ್ಲಿ 1,000 ಗಡಿ ದಾಟಿದ್ದು, 1,033 ಹೊಸ ಪ್ರಕರಣಗಳು ದಾಖಲಾಗಿತ್ತು. ಅದು ಭಾನುವಾರ ೧೧೮೭ ದೈನಂಧಿನ ಪ್ರಕರಣಗಳಿಗೆ ಏರಿದೆ.ರಾಜಧಾನಿ ಬೆಂಗಳೂರಿನಿಂದಲೇ ಶೇ.75ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಒಟ್ಟಾರೆ ಕರ್ನಾಟಕದ ಪ್ರಕರಣಗಳಿಗೆ ಬೆಂಗಳೂರಿನ ಕೊಡುಗೆಯೇ ಹೆಚ್ಚು..! ಹೀಗಾಗಿ ನಗರದಲ್ಲಿ ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸುವುದರ ಬಗ್ಗೆ ಚಿಂತನೆ ನಡೆಸಿದೆ. ಡಿಸೆಂಬರ್ 27ರಂದು … Continued

ಇಂದಿನಿಂದ ಕರ್ನಾಟಕದಲ್ಲಿ 15ರಿಂದ 18ವರ್ಷ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ, 31.75 ಲಕ್ಷ ಮಕ್ಕಳು ಲಸಿಕೆ ಪಡೆಯಲು ಅರ್ಹರು

ಬೆಂಗಳೂರು: ಕರ್ನಾಟಕದಲ್ಲಿ 15ರಿಂದ 18 ವರ್ಷ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದಾರೆ. ಇವರೆಲ್ಲ ಕೊರೊನಾ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಮೂಡಲಪಾಳ್ಯದ ಬಿಬಿಎಂಪಿ ಶಾಲೆಯಲ್ಲಿ 15ರಿಂದ 18 ವರ್ಷ ವಯೋಮಿತಿಯ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ವಯಸ್ಸಿನವರಿಗೆ ಕೋವ್ಯಾಕ್ಸಿನ್‌ ಲಸಿಕೆ ಮಾತ್ರ ಲಭ್ಯವಿದೆ ಎಂದು ಸರ್ಕಾರ ತಿಳಿಸಿದ್ದು, ಮೊದಲ … Continued

ಸರ್ಕಸ್‌ ಕಂಪನಿಗೆ ಮಾರಲು ಮಠದ ಆನೆ ಅಪಹರಿಸಲು ಯತ್ನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧವೂ ಆರೋಪ..!

ತುಮಕೂರು: ಕರಿಬಸವೇಶ್ವರ ಮಠದ ಆನೆಯನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಖದೀಮರ ಗುಂಪೊಂದು ಲಕ್ಷ್ಮೀ ಎಂಬ ಹೆಣ್ಣಾನೆಯನ್ನು ಅಪಹರಿಸಿ ಗುಜರಾತಿಗೆ ಸಾಗಿಸಲು ಯತ್ನಿಸಿದೆ. ಆನೆಗೆ ಚಿಕಿತ್ಸೆ ಕೊಡಿಸಬೇಕು ಎಂದು ಸಂಚು ರೂಪಿಸಿ ಅಪಹರಣಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸಹ ಈ ಅಪಹರಣದ ಸಂಚಿಗೆ ಸಹಕಾರಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆಯ … Continued

ಕಾರು- ಬಸ್ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕೆಂಪನಕೊಪ್ಪಲು ಗೇಟ್ ಸ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ಸಂಗಮ್ಮ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ 18 ವರ್ಷದ … Continued

ಕರ್ನಾಟಕದಲ್ಲಿ ಭಾನುವಾರವೂ ಕೊರೊನಾ ಹೆಚ್ಚಳ..1187 ಜನರಿಗೆ ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಭಾನುವಾರ ಕೂಡ ಕೊರೊನಾ ದೈನಂದಿನ ಸೋಂಕಿನಲ್ಲಿ ಹೆಚ್ಚಳವಾಗಿದ್ದು ಒಂದೇ ದಿನ 1187 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,09,557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇವೇಳೆ 6 ಜನ ಸೋಂಕಿತರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 38,346ಕ್ಕೆ ಏರಿದೆ. 275 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು … Continued

ಜನರು ಕೊರೊನಾ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗಲಿದೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜನರು ಸಹಕಾರ ನೀಡಿದರೆ ಲಾಕ್‌ಡೌನ್‌ ಇರುವುದಿಲ್ಲ. ಒಂದು ವೇಳೆ ಜನರು ಕೊರೊನಾ ನಿಯಮಗಳನ್ನು ಅನುಸರಿಸದಿದ್ದರೆ ಲಾಕ್‌ಡೌನ್‌ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಓಮಿಕ್ರಾನ್‌ ಪ್ರಕರಣಗಳು ಸಹ ಹೆಚ್ಚಳವಾಗುತ್ತಿದೆ. ಪಕ್ಕದ ಮಹಾರಾಷ್ಟ್ರದಲ್ಲಿ … Continued

ವಿಶ್ವ ಕೊಂಕಣಿ ಸರ್ದಾರ ಬಸ್ತಿ ವಾಮನ್ ಶೆಣೈ ನಿಧನ

ಮಂಗಳೂರು: ವಿಶ್ವ ಕೊಂಕಣಿ ಸರ್ದಾರ ಎಂದು ಜನಪ್ರಿಯರಾಗಿದ್ದ ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕರಾಗಿದ್ದ ಬಸ್ತಿ ವಾಮನ ಮಾಧವ ಶೆಣೈ(87) ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಕಳೆದೆರಡು ತಿಂಗಳಿಂದ ವಯೋಸಹಜವಾಗಿ ಅವರ ಆರೋಗ್ಯ ಹದಗೆಟ್ಟಿತ್ತು. ನಾಳೆ ಜನವರಿ 3 ರಂದು ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 9 ರಿಂದ 10ರ ವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು … Continued

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಎಚ್ಚರಿಸಿದ್ದು, ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಐಇ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಮುಖ್ಯಮಂತ್ರಿಗಳುಮತ್ತೊಮ್ಮೆ ಸಭೆ ಮಾಡುತ್ತಾರೆ ಎಂದು ತಿಳಿಸಿದರು. … Continued

ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು

ಗುಂಡ್ಯ(ದಕ್ಷಿಣ ಕನ್ನಡ): ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕೆಳಗಿಳಿದು ಪರಿಶೀಲಿಸುತ್ತಿದ್ದಾಗಲೇ ಮರಬಿದ್ದಿದ್ದರಿಂದ ಕಾರು ಚಾಲಕ ಸುರೇಶ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ … Continued