ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ, ಕೇರಳಕ್ಕೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಒಟ್ಟಾರೆ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನಕ್ಕೆ ಕುಸಿದಿದೆ. ಕೇರಳ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ. 2018-19ರ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 16ನೇ ಸ್ಥಾನದಲ್ಲಿತ್ತು. ಈ ವರ್ಷ … Continued

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ: ಪಕ್ಷ ಸಂಘಟನೆ, ಜಿಪಂ, ತಾಪಂ ಚುನಾವಣೆಗಳ ಬಗ್ಗೆಯೂ ಚರ್ಚೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ೬ ತಿಂಗಳು ಪೂರೈಸುತ್ತಿರುವಾಗಲೇ ಹುಬ್ಬಳ್ಳಿಯಲ್ಲಿ ಇಂದಿನಿಂದ (ಡಿಸೆಂಬರ್‌ ೨೮ರಿಂದ) ಆರಂಭವಾಗಿರುವ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆಯ ಸಿದ್ಧತೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಪರಾಮರ್ಶೆ, ವಿಧಾನಸಭಾ ಉಪಚುನಾವಣೆ ಸೋಲು ಇವೆಲ್ಲದರ … Continued

ರಾಜ್ಯೋತ್ಸವ ಪ್ರಶಸ್ತಿಯಿಂದ ಕರ್ನಾಟಕ ಕಲಾಶ್ರೀ ವರೆಗೆ…: ಅಂಗವೈಕಲ್ಯ ಮೆಟ್ಟಿ ನಿಂತ ಅಪ್ರತಿಮ ಕೀಬೋರ್ಡ್‌ ವಾದಕ ಕೂಜಳ್ಳಿ ಗಣೇಶ ಭಟ್ಟರ ಸಂಗೀತ ಪಯಣದ ಹಾದಿ

ಕುಮಟಾ: ದೈಹಿಕ ನ್ಯೂನತೆ ದೇಹಕ್ಕೆ ಮಾತ್ರವೇ ಹೊರತು ಮನಸ್ಸಿಗಲ್ಲ. ಸಾಧಿಸುವ ದೃಢ ಸಂಕಲ್ಪ ಮಾಡಿದರೆ ಅದು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಜೀವಂತ ಸಾಕ್ಷಿ ಗಣೇಶ್ ಈಶ್ವರ ಭಟ್ ಅವರು.ಕೈ ಹಾಗೂ ಕಾಲುಗಳಿಗೆ ಒಂದೊಂದೇ ಬೆರಳುಗಳಿದ್ದರೂ ಸಾಮಾನ್ಯ ಕಲಾವಿದರಂತೆ ಇವರು ಕೀಬೋರ್ಡ್ ಬಾರಿಸುವ ಕಲೆ ಎಂಥವರನ್ನೂ ಬೆರಗುಗೊಳಿಸುತ್ತದೆ. ಅಪ್ರತಿಮವಾಗಿ ಕೀಬೋರ್ಡ್ ನುಡಿಸುತ್ತಾರೆ. ಕೀಬೋರ್ಡನ್ನು ಪರಿಪೂರ್ಣ 10 ಬೆರಳುಗಳಿಗೆ … Continued

ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಪ್ರಯಾಣ ವಿಳಂಬ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅವರ ಪ್ರಯಾಣ ಎರಡು ಗಂಟೆಗಳ ಕಾಲ ವಿಳಂಬಗೊಂಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣ ವಿಳಂಬವಾಗಲಿದ್ದು, ಬೊಮ್ಮಾಯಿ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿಯೇ ವಿಶ್ರಾಂತಿ ಕೊಠಡಿಯಲ್ಲಿ ಕಾಯುತ್ತಿದ್ದಾರೆ. ಇಂದು, ಮಂಗಳವಾರ ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ … Continued

ಕರ್ನಾಟಕದಲ್ಲಿ ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿ; ರಾತ್ರಿ 10 ಗಂಟೆಯೊಳಗೆ ಎಲ್ಲವೂ ಬಂದ್, ಕೆಲವರಿಗಿದೆ ರಿಯಾಯ್ತಿ..

ಬೆಂಗಳೂರು: ಇಂದಿನಿಂದ (ಡಿಸೆಂಬರ್ 28ರಿಂದ) ರಾತ್ರಿ 10 ಗಂಟೆಯಿಂದ ಕರ್ನಾಟಕದಲ್ಲಿ ಕೊರೊನಾ, ಓಮಿಕ್ರಾನ್ ನಿಯಂತ್ರಿಸಲು ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ತಡರಾತ್ರಿ ವರೆಗೂ ಆರಾಮವಾಗಿ ಓಡಾಡಿಕೊಂಡಿದ್ದವರು ಇಂದಿನಿಂದ ಹತ್ತು ದಿನ ರಾತ್ರಿ 10 ಗಂಟೆಯೊಳಗೆ ಮನೆ ಸೇರಿಕೊಳ್ಳಬೇಕಿದೆ. ವ್ಯಾಪಾರ-ವಹಿವಾಟು ಎಲ್ಲವೂ ರಾತ್ರಿ 10 ಗಂಟೆಯೊಳಗೆ ಬಂದ್ ಆಗಲಿದೆ. ಓಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ಅದು ಹೆಚ್ಚಳವಾಗದಂತೆ ತಡೆಯಲು ರಾಜ್ಯ … Continued

ಬಿಸಿಯೂಟದಲ್ಲಿ ಹಲ್ಲಿ; 81 ಮಕ್ಕಳು ಅಸ್ವಸ್ಥ, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

ಹಾವೇರಿ: ಮಧ್ಯಾಹ್ನ ಬಿಸಿಯೂಟ ಸೇವಿಸಿ 81 ಮಕ್ಕಳು ಅಸ್ವಸ್ಥಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ವಾಂತಿ ಭೇದಿಯಿಂದ 81 ಮಕ್ಕಳು ಅಸ್ವಸ್ಥಗೊಂಡಿದ್ದು, ಅವರಿಗೆ ರಾಣೆಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. … Continued

ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’ ಆಯೋಜಿಸಲು ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಜ. 1ರಿಂದ ಫೆ. 7ರ ವರೆಗೆ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಸೂರ್ಯ ನಮಸ್ಕಾರ‘ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಡಿ.16 ರಂದು ಪತ್ರ ಬರೆದು … Continued

ಬೂಸ್ಟರ್ ಡೋಸ್ ಗಳು ಈ ಹಿಂದಿನ ಲಸಿಕಾ ಬ್ರಾಂಡಿನದ್ದೇ ಆಗಿದ್ದರೆ ಉತ್ತಮ: ತಜ್ಞರ ಅಭಿಪ್ರಾಯ

ಬೆಂಗಳೂರು: ಬೂಸ್ಟರ್ ಡೋಸ್ ನೀಡುವ ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಬೂಸ್ಟರ್ ಡೋಸ್ ಗಳು ಈ ಹಿಂದಿನ ಲಸಿಕಾ ಬ್ರಾಂಡಿನದ್ದೇ ಆಗಿರಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೂಸ್ಟರ್ ಡೋಸ್ ಲಭ್ಯತೆ ಸಮಸ್ಯೆಯಾಗದ ಹೊರತು ಸಾಮಾನ್ಯವಾಗಿ ಹಿಂದೆ ನೀಡಿದ ಅದೇ ಲಸಿಕೆ ಬ್ರಾಂಡ್‌ನದ್ದೇ ನೀಡಿದರೆ ಉತ್ತಮ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್ ಬೂಸ್ಟರ್ ಶಾಟ್‌ಗಳಿಗಾಗಿ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ, ಬೊಮ್ಮಾಯಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌

ಹುಬ್ಬಳ್ಳಿ: ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪ್ರವಾಸ ರದ್ದಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಾರಿಯಲ್ಲಿರುವ ಕೊರೋನಾ ನಿಯಮ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ ನಡ್ಡಾ ನೇತೃತ್ವದಲ್ಲಿ … Continued

ಬಿಎಂಟಿಸಿಗೆ 40 ವಿದ್ಯುತ್ ಬಸ್ ಸೇರ್ಪಡೆ: ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಬಹು ನಿರೀಕ್ಷೆಯ 40 ಎಲೆಕ್ಟ್ರಿಕ್ ಬಸ್ಸುಗಳು ಹಾಗೂ 150 ಭಾರತ್ ಸ್ಟೇಜ್-VI ಡೀಸೆಲ್ ಬಸ್ಸುಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗದಲ್ಲಿ ಈ ವಾಹನಗಳನ್ನು ಅನಾವರಣಗೊಳಿಸಿದರು. ಎರಡು ತಿಂಗಳ ಹಿಂದೆಯೇ ಈ ಬಸ್ಸುಗಳು ರಸ್ತೆಗಿಳಿಯಬೇಕಿತ್ತು. ಆದರೆ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ … Continued