ಬಿಎಂಟಿಸಿ ಸಾರಿಗೆ ಸಂಸ್ಥೆ ಖಾಸಗೀಕರಣವಿಲ್ಲ

ಸುವರ್ಣಸೌಧ(ಬೆಳಗಾವಿ): ಬೆಂಗಳೂರು ನಗರ ಸಾರಿಗೆ ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ತಿನ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಮುನಿರಾಜು ಗೌಡ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ … Continued

ಕೊರೊನಾ ರೂಪಾಂತರ ಹೆಚ್ಚಾಗಲಿದೆ, ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಅವಘಡದ ಸಂಭವವಿದೆ : ಕೋಡಿಮಠದ ಶ್ರೀಗಳ ಭವಿಷ್ಯ

ರಾಣೆಬೆನ್ನೂರು: ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ರಾಜಕೀಯ ಅವಘಡ ಸಂಭವಿಸಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರ ಹೆಚ್ಚುವ ಲಕ್ಷಣಗಳಿವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ. ನಾಣು ಈ ಹಿಂದೆ ದೇಶದಲ್ಲಿ ದೊಡ್ಡ ಅವಘಡ ಸಂಭವಿಸಲಿದೆ ಎಂದು … Continued

ಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕಳಸ ತಾಲೂಕಿನ ರುದ್ರಪಾದ ಬಳಿ ನಡೆದಿದೆ. ವಿದ್ಯಾರ್ಥಿಗಳಾದ ಜೀವನ್ ದಾಸ್(17) ಮತ್ತು ನಿಕ್ಷೇಪ್(17) ಮೃತ ದುರ್ದೈವಿಗಳು. ಜೀವನ್ ದಾಸ್ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ವಿದ್ಯಾರ್ಥಿ ನಿಕ್ಷೇಪ್ ಗಾಗಿ ಮುಂದುವರಿದ ಶೋಧ ನಡೆಸಿದ್ದಾರೆ. ಗುರುವಾರ ಕಾಲೇಜಿಗೆ ಹೋದವರು ಮನೆಗೆ ಬಂದಿರಲಿಲ್ಲ. ಇಂದು ಹುಡುಕಾಟ ನಡೆಸಿದಾಗ … Continued

ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಚಂದ್ರಕಾಂತ ಅಂಗಡಿ ನಿಧನ

ಹಳಿಯಾಳ: ಸರಳ ವ್ಯಕ್ತಿತ್ವ ಹಾಗೂ ಸರ್ವ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ತಾಲೂಕಾ ಬಸವ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ, ಅಂಗಡಿ ಸರ್ವಿಸ್ ಮಾಲೀಕ ಹಾಗೂ ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಚಂದ್ರಕಾಂತ ಅಂಗಡಿ (62) ಶುಕ್ರವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ , ಓರ್ವ ಪುತ್ರ, ಮೂವರು ಸಹೋದರರು … Continued

ಕೂಜಳ್ಳಿ: ನಾಳೆ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ

ಕುಮಟಾ: ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಡಿ. 25ರಂದು ಅಪರಾಹ್ನ 3. ಗಂಟೆಯಿಂದ 8ರ ವರೆಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆಯಲಿದೆ. ನಾದ ನಮನ ಕಾರ್ಯಕ್ರಮದಲ್ಲಿ ಶ್ರೀಪಾದ ಹೆಗಡೆ ಸೋಮನಮನೆ, ಶ್ರೀಧರ ಹೆಗಡೆ ಕಲ್ಭಾಗ, ಶ್ರೀಲತಾ ಗುರುರಾಜ … Continued

ಉಡುಪಿ ಶ್ರೀಕೃಷ್ಣ ಮಠದ ಸ್ವಾಧೀನಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರ ಆಲೋಚಿಸಿತ್ತು: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚನೆ ಮಾಡಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ … Continued

ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಹೈಕೋರ್ಟಿನಿಂದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು

ಬೆಂಗಳೂರು: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ಅನಿವಾಸಿ ಭಾರತೀಯ ಉದ್ಯಮಿ‌, ಉಡುಪಿ ಮೂಲದ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ … Continued

ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು ಎಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಅದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತದೆಯೆಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ಜಾರಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ … Continued

ಮೀನುಗಾರನ ತಲೆಕೆಳಗಾಗಿ ನೇತು ಹಾಕಿ ಹಲ್ಲೆ : 6 ಜನರ ಬಂಧನ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕರು ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ವರ್ತಿಸಿದ ಘಟನೆ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದ ಆರೋಪದಲ್ಲಿ ವೈಲ ಶೀನುನನ್ನು ಮೀನುಗಾರಿಕ ಬೋಟ್‍ನಲ್ಲಿಯೇ ಉಲ್ಟಾ ನೇತು ಹಾಕಿ ಆಂಧ್ರಪ್ರದೇಶ ಮೂಲದ ಆರು ಜನ ಮೀನುಗಾರಿಕಾ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ … Continued

ವಿಪಕ್ಷಗಳ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಸುವರ್ಣಸೌಧ(ಬೆಳಗಾವಿ): ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳ ಕೆಲ ಶಾಸಕರು ಬಾವಿಗಿಳಿದು ಪ್ರತಿಭಟನೆ ಮಾಡಿದರು. ಈ ನಡುವೆಯೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಕ ವಿಧೇಯಕ -2021 ಅನ್ನು ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧ್ವನಿಮತಕ್ಕೆ ಹಾಕಿದರು. ಧ್ವನಿಮತದ ಮೂಲಕವೇ … Continued