ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ- ದರ ಒದಗಿಸಲು ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ:ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಗುರುವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದರು. ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯ ವಿರುವ ಬಟ್ಟೆ/ಸೀರೆಗಳನ್ನು ನೇಕಾರರ … Continued

ಧಾರವಾಡ ಜೆಎಸ್ಎಸ್ ಸಂಸ್ಥೆ ವಿದ್ಯಾರ್ಥಿನಿ ಸ್ನೇಹಾ ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಕಲಾ ವಿಭಾಗದಲ್ಲಿ ಬಿ.ಎ ೫ನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿರುವ ಸ್ನೇಹಾ ಅಂಬಡಗಟ್ಟಿ ಎನ್.ಎಸ್.ಎಸ್ ವತಿಯಿಂದ ಜನೇವರಿ ೨೬ ರಂದು ದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾಳೆ. ಸ್ನೇಹಾ ಅಂಬಡಗಟ್ಟಿ ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಆಗಿದ್ದಾಳೆ. … Continued

ಸಿಎಂ ಬೊಮ್ಮಾಯಿ ಭೇಟಿಯಾದ ಗಣಪತಿ ಉಳ್ವೇಕರ್: ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಗಣಪತಿ ಉಳ್ವೇಕರ್ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಉತ್ತರಕನ್ನಡದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಸಹಕಾರ ಕೋರಿದರು. ಈ ವೇಳೆ ಗೃಹ ಸಚಿವ … Continued

ಶೌರ್ಯ ಪ್ರಶಸ್ತಿ ಅನುದಾನ 5 ಪಟ್ಟು ಹೆಚ್ಚಳ : ಸಿಎಂ

ಬೆಳಗಾವಿ: ’ಶೌರ್ಯ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದಿಂದ ಒಂದು ಬಾರಿ ನೀಡುವ ನಗದು ಅನುದಾನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಪ್ರಶಸ್ತಿ ಮೊತ್ತವನ್ನು ಸರಾಸರಿ 5 ಪಟ್ಟು ಹೆಚ್ಚಳ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಾ ಲಘು … Continued

ಯಲ್ಲಾಪುರ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ, ಬಸ್ ಸುಟ್ಟು ಕರಕಲು-ವಿಡಿಯೊದಲ್ಲಿ ಸೆರೆ

ಯಲ್ಲಾಪುರ: ಬೆಂಕಿ ಅವಘಢದಿಂದ ಖಾಸಗಿ ಬಸ್ಸೊಂದು ಧಗ, ಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಯಲ್ಲಾಪುರ ಪಟ್ಟಣದ ಜೋಡುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-63 ರಲ್ಲಿ ನಡೆದಿದೆ. ಈ ಬಸ್ಸು ಮುಂಬೈಯಿಂದ ಕೇರಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ 28 ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ತಕ್ಷಣ ಅಗ್ನಿಶಾಮಕ ದಳದವರು ತಕ್ಷಣ … Continued

ಹಕ್ಕುಚ್ಯತಿ ಉಲ್ಲಂಘನೆ: ಕಾಂಗ್ರೆಸ್ ಶಾಸಕ ತುಕಾರಾಂ ಮನವಿ ಮೇರೆಗೆ ಸಂಡೂರು ತಹಶೀಲ್ದಾರ್ ವರ್ಗಾವಣೆ, ತನಿಖೆಗೆ ಆದೇಶ

ಬಳ್ಳಾರಿ: ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶೀಲ್ದಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ತಹಶಿಲ್ದಾರ್ ಹೆಚ್​. ಜಿ. ರಶ್ಮಿ ಅವರ ವರ್ಗಾವಣೆ ಜೊತೆಗೆ ಅವರ ಮೇಲಿನ ಆರೋಪದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸಂಡೂರು ಶಾಸಕ ಇ. ತುಕಾರಾಂ ಅವರು ಕಚೇರಿಗೆ ಹೋದರೆ ತಮಗೆ ಗೌರವ ಕೊಡುವುದಿಲ್ಲ ಎಂದು ಆರೋಪ ಮಾಡಿದ್ದರು. ಶಾಸಕ ತುಕಾರಾಂ … Continued

ಕೆಪಿಎಸ್‍ಸಿ ಪರೀಕ್ಷೆ : ರೈಲು ವಿಳಂಬದಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದವರಿಗೆ ಡಿ.29ಕ್ಕೆ ಮರು ಪರೀಕ್ಷೆ

ಬೆಂಗಳೂರು: ಡಿ.14 ರಂದು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಅಭಿಯಂತಕರು -1 ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಲಬುರಗಿ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗಿನ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಮಧ್ಯಾಹ್ನದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರಿಂಗ್ ಹುದ್ದೆಯ ಸಾಮಾನ್ಯ ಪತ್ರಿಕೆಯ ಮರು ಪರೀಕ್ಷೆ ಡಿಸೆಂಬರ್‌ 29ರಂದು ನಡೆಯಲಿದ್ದು, ಬೆಂಗಳೂರಿನಲ್ಲಿ ನಡೆಸಲಾಗುತ್ತದೆ … Continued

ಬೆಂಗಳೂರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಸುವರ್ಣಸೌಧ (ಬೆಳಗಾವಿ): ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ರಾಜ್ಯ ಸರ್ಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ ಎಂದು ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಅವರು … Continued

ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ: ಅಶ್ವತ್ಥನಾರಾಯಣ

ಬೆಳಗಾವಿ :ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿಶ್ವ ವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತಲೆ ಎತ್ತಲಿರುವ ಈ ವಿವಿಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ … Continued

ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ

ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued